News Karnataka Kannada
Sunday, April 28 2024
ಸಂಪಾದಕರ ಆಯ್ಕೆ

ಶಿಕ್ಷಣ ಕ್ಷೇತ್ರ ಕಲಬೆರಕೆ ಮಾಡಲು ಬಿಡಲ್ಲ, ಸಾಹಿತಿಗಳಿಗೆ ಬೆದರಿಕೆ ಹಾಕಿದರೆ ಸುಮ್ಮನೆ ಕೂರಲ್ಲ: ಸಿಎಂ

Won't allow texts and lessons that poison children's minds, Siddaramaiah assures writers
Photo Credit :

ಬೆಂಗಳೂರು: ಮಕ್ಕಳ ಮನಸ್ಸಿಗೆ ವಿಷ ತುಂಬುವ ಪಠ್ಯ ಮತ್ತು ಪಾಠಗಳಿಗೆ ಅವಕಾಶ ಕೊಡುವುದಿಲ್ಲ. ಭಯದ ವಾತಾವರಣ ಅಳಿಸಿ ನೆಮ್ಮದಿಯ ವಾತಾವರಣ ಸೃಷ್ಟಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೇಳಿದರು.

ಹೊಸ ಶಿಕ್ಷಣ ನೀತಿ ಹೆಸರಿನಲ್ಲಿ ಶಿಕ್ಷಣ ಕ್ಷೇತ್ರವನ್ನು ಕಲಬೆರಕೆ ಮಾಡಲು ಬಿಡುವುದಿಲ್ಲ ಎಂದು ಹೇಳಿದರು. ಈ ಬಗ್ಗೆ ಮತ್ತೊಮ್ಮೆ ಸಭೆ ನಡೆಸಿ ಸಮಗ್ರವಾಗಿ ಚರ್ಚಿಸಿ ಕಟ್ಟುನಿಟ್ಟಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು. ನೈತಿಕ ಪೊಲೀಸ್‌ ಗಿರಿ ಮಾಡುವವರು ಮತ್ತು ಸಾಹಿತಿಗಳಿಗೆ ಬೆದರಿಕೆ ಹಾಕುವವರು, ವೃಥಾ ಟೋಲ್‌ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸ್‌ ಮಹಾನರ್ದೇಶಕರಿಗೆ ಸೂಚಿಸಿದ್ದೇನೆ ಎಂದರು. ಕನ್ನಡ ಹೋರಾಟಗಾರರು, ರೈತ -ಕಾರ್ಮಿಕ- ದಲಿತ ಚಳವಳಿ ಸಾಹಿತಿಗಳು, ಲೇಖಕರ ಮೇಲಿನ ಸುಳ್ಳು ಪ್ರಕರಣಗಳನ್ನು ಹಿಂಪಡೆಯಲಾಗುವುದು ಎಂದರು. ಗೃಹ ಕಚೇರಿ ಕೃಷ್ಣದಲ್ಲಿ ಸೋಮವಾರ ಸುಮಾರು 40ಕ್ಕೂ ಹೆಚ್ಚು ಮಂದಿ ಸಾಹಿತಿ ಬರಹಗಾರರು ಹಾಗೂ ನಾನಾ ಜನಪರ ಸಂಘಟನೆಗಳ ಮುಖ್ಯಸ್ಥರ ಜತೆಗೆ ನಡೆದ ಸಭೆಯಲ್ಲಿ ಈ ಭರವಸೆ ನೀಡಿದರು. ಕನ್ನಡ ನಾಡಿನ ಸೌಹಾರ್ದ ಮತ್ತು ಜಾತ್ಯತೀತ ಪರಂಪರೆಯ ರಕ್ಷಣೆ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ದ್ವೇಷ ರಾಜಕಾರಣವನ್ನು ಬಲಿ ಹಾಕಿ, ಭಯದ ವಾತಾವರಣ ಅಳಿಸಲಾಗುವುದು ಎಂದು ಅವರು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು