Ad

ನೂತನ ವಿಷೇಶತೆಯೊಂದಿಗೆ ಶ್ರೀಘ್ರದಲ್ಲೇ ರಸ್ತೆಗೆ ಇಳಿಯಲಿದೆ ಕೆಎಸ್​ಆರ್​ಟಿಸಿ ವೋಲ್ವೋ ಬಸ್

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC)ಯ ಹೊಸ 9600 VOLVO Multiaxle ಸೀಟರ್ ಪ್ರೋಟೋಟೈಪ್ ಬಸ್ಸನ್ನು ಇಂದು (ಜು.06) ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿಅವರು ಪರಿವೀಕ್ಷಣೆ ನಡೆಸಿದರು.

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC)ಯ ಹೊಸ 9600 VOLVO Multiaxle ಸೀಟರ್ ಪ್ರೋಟೋಟೈಪ್ ಬಸ್ಸನ್ನು ಇಂದು (ಜು.06) ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿಅವರು ಪರಿವೀಕ್ಷಣೆ ನಡೆಸಿದರು.

Ad
300x250 2

ಬಸ್ಸಿನ ವಿಶೇಷತೆಗಳು
ಶಕ್ತಿಶಾಲಿ ಹ್ಯಾಲೊಜೆನ್ ಹೆಡ್‌ಲೈಟ್‌ಗಳು ಮತ್ತು ಡೇ ರನ್ನಿಂಗ್ ಲೈಟ್‌ಗಳೊಂದಿಗೆ (DRL) ಹೊಸ‌ ಪ್ಲಶ್ ಇಂಟೀರಿಯರ್ಸ್ ಮತ್ತು ಬಾಹ್ಯ ಸ್ಕ್ಯಾಂಡಿನೇವಿಯನ್ ವಿನ್ಯಾಸ ಹೊಂದಿರುವುದರಿಂದ ಕಣ್ ತಣಿಸುವ ಸೌಂದರ್ಯ. ಏರೋಡೈನಾಮಿಕ್ ವಿನ್ಯಾಸದಿಂದ ಉತ್ತಮ ಇಂಧನ ದಕ್ಷತೆ ಹೊಂದಿದೆ. ನವೀನ ತಂತ್ರಜ್ಞಾನ/ತಾಂತ್ರಿಕತೆಯಿಂದ ಸುಧಾರಿತ ಇಂಜಿನ್ ಹೊಂದಿದ್ದು ಅತ್ಯುತ್ತಮ ಕಾರ್ಯಕ್ಷಮತೆ ಹಾಗೂ ಸುಧಾರಿತ ಇಂಜಿನ್‌ ಕೆಎಂಪಿಎಲ್ ನೀಡುತ್ತದೆ.

ವಿಂಡ್‌ಶೀಲ್ಡ್ ಗಾಜು ಶೇ 9.5 ರಷ್ಟು ವಿಸ್ತಾರವಾಗಿದ್ದು, ಚಾಲಕನಿಗೆ ಗೋಚರತೆಯನ್ನು ಹೆಚ್ಚಿಸಿ ಬ್ಲೈಂಡ್ ಸ್ಪಾಟ್ ಅನ್ನು ಕಡಿಮೆ ಮಾಡುತ್ತದೆ. ವಿಶಾಲ ಲಗೇಜ್ ಸ್ಥಳಾವಕಾಶವಿದ್ದು ಶೇ 20% ರಷ್ಟು ಹೆಚ್ಚಿನ ಲಗ್ಗೇಜ್ ಇಡುವ ಸೌಲಭ್ಯವಿರುತ್ತದೆ.

USB + C ಟೈಪ್ ನಂತಹ ಹೊಸ ಜನರೇಷನ್ ಮೊಬೈಲ್ ಚಾರ್ಜಿಂಗ್ ಪಾಯಿಂಟ್‌ಗಳನ್ನು ಒಳಗೊಂಡಿದೆ. ವಿಶಾಲವಾದ ಎಸಿ ಡಕ್ಟ್ ಹೊಂದಿರುವುದರಿಂದ ವಾಹನದ ಒಳಗೆ ಉತ್ತಮ ಹವಾನಿಯಂತ್ರಣಾ ವ್ಯವಸ್ಥೆ ಇರುತ್ತದೆ.

ಹಿಂಭಾಗದಲ್ಲಿ fog light ಅನ್ನು ಒಳಗೊಂಡಿರುವುದಿರಂದ ರಾತ್ರಿ ವೇಳೆಯಲ್ಲಿ ಹೆಚ್ಚಿನ ಸುರಕ್ಷತೆ ಇರುತ್ತದೆ. ಸುಲಭವಾಗಿ ಕೈಗೆಟುಕುವ ಚಾಲಕ ನಿಯಂತ್ರಣಗಳು ಮತ್ತು ಸ್ವಿಚ್‌ಗಳನ್ನು ಹೊಂದಿದ್ದು ಚಾಲಕರಿಗೆ ಹೆಚ್ಚು ಅನುಕೂಲಕರವಾಗಿರುತ್ತದೆ.

ಫೈರ್ ಅಲಾರ್ಮ್ ಮತ್ತು ಪ್ರೊಟೆಕ್ಷನ್ ಸಿಸ್ಟಮ್ (FAPS) ಅಳವಡಿಸಿದ್ದು ತುರ್ತು ಸಂದರ್ಭದಲ್ಲಿ ಪ್ರಯಾಣಿಕರಿಗೆ ಹೆಚ್ಚಿನ ಸುರಕ್ಷತೆ ಇರುತ್ತದೆ. ಬಸ್ಸಿನ ಒಳಗೆ ಪ್ರಯಾಣಿಕರ ಆಸನದ ಎರಡೂ ಬದಿಯಲ್ಲಿ ನೀರಿನ ಪೈಪುಗಳಿದ್ದು 30 ನಾಜಲ್ ಗಳಿಂದ ನೀರು ಸರಬರಾಜು ಆಗಿ ಬೆಂಕಿ ಅವಘಡದ ಸಂದರ್ಭದಲ್ಲಿ ನೀರು ಸಿಂಪಡಿಸಲು ಪ್ರಾರಂಭವಾಗುತ್ತದೆ. ಚಾಲಕರು ಪಾದಚಾರಿಯನ್ನು ಪ್ರಯಾಣಿಕರ ಬಾಗಿಲಿನಿಂದ ಸುಲಭವಾಗಿ ನೋಡಬಹುದಾಗಿದ್ದು ಪಾದಾಚಾರಿಗಳಿಗೆ ಹೆಚ್ಚಿನ ಸುರಕ್ಷತೆ ಇರುತ್ತದೆ.

ಇನ್ನು ಸಚಿವ ರಾಮಲಿಂಗಾರೆಡ್ಡಿ ಬಸ್ಸನ್ನು ವೀಕ್ಷಿಸಿ ಬಹುಮೆಚ್ಚುಗೆ ಸೂಚಿಸಿ, ಕರ್ನಾಟಕವು ವಿವಿಧ ಮಾದರಿಯ ಅತ್ಯಾಧುನಿಕ ಬಸ್ಸುಗಳನ್ನು ಪ್ರಯಾಣಿಕರ ಬೇಡಿಕೆಗನುಣವಾಗಿ ಸೇರ್ಪಡೆ ‌ಗೊಳಿಸುತ್ತಿರುವುದರಲ್ಲಿ ದೇಶದಲ್ಲಿಯೇ ಮುಂಚೂಣಿಯಲ್ಲಿದೆ ಎಂದು‌ ಹರ್ಷ ವ್ಯಕ್ತಪಡಿಸಿದರು.

Ad
Ad
Nk Channel Final 21 09 2023
Ad