ಬೆಂಗಳೂರು: ಟಿಕೆಟ್ ಕೊಡುವ ಸಂದರ್ಭದಲ್ಲಿ ಪ್ರಯಾಣಿಕರು ಮತ್ತು ಕಂಡಕ್ಟರ್ಗಳ ಮಧ್ಯೆ ಚಿಲ್ಲರೆಗಾಗಿ ಯಾವಾಗಲೂ ಜಗಳ ನಡೆಯುತ್ತಲೇ ಇರುತ್ತದೆ. ಈ ರೀತಿಯ ಕಿರಿಕಿರಿಗಳಿಗೆ ಮುಕ್ತಿಹಾಡಲು ಕೆಎಸ್ಆರ್ಟಿಸಿ ಮುಂದಾಗಿದೆ. ಗೂಗಲ್ ಪೇ, ಫೋನ್ ಪೇ, ಪೇಟಿಎಂ ಮೂಲಕ ಹಣ ಪಾವತಿಸಲು ಪ್ರಯಾಣಿಕರಿಗೆ ಅವಕಾಶ ಕಲ್ಪಿಸುವ ಹೊಸ ವ್ಯವಸ್ಥೆ ಜಾರಿಗೆ ತರಲು ಕೆಎಸ್ಆರ್ಟಿಸಿ ಮುಂದಾಗಿದೆ. ಶೀಘ್ರದಲ್ಲೇ ಈ ವ್ಯವಸ್ಥೆ ಅನುಷ್ಠಾನಗೊಳ್ಳುವ ನಿರೀಕ್ಷೆ ಇದೆ.
ಖಾಸಗಿ ಕಂಪೆನಿಯಿಂದ ಒಂದು ಮಷಿನ್ಗೆ ಪ್ರತಿ ತಿಂಗಳು 645 ರೂಪಾಯಿ ಬಾಡಿಗೆ ಆಧಾರದಲ್ಲಿ 10245 ಸಾವಿರ ಇಟಿಎಂ ಟಿಕೆಟ್ ಮಷಿನ್ಗಳ ಖರೀದಿಗೆ ಕೆಎಸ್ಆರ್ಟಿಸಿ ಮುಂದಾಗಿದೆ. ಇದರಿಂದ ಇನ್ಮುಂದೆ ಕೆಎಸ್ಆರ್ಟಿಸಿ ಬಸ್ನಲ್ಲಿ ಗೂಗಲ್ ಪೇ, ಫೋನ್ ಪೇ. ಪೇಟಿಎಂ ಮೂಲಕ ಹಣ ಪಾವತಿ ಮಾಡಿ ಟಿಕೆಟ್ ಪಡೆದು ಪ್ರಯಾಣಿಸಬಹುದಾಗಿದೆ. ಈ ನೂತನ ಮಷಿನ್ಗಳಲ್ಲಿ ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್ಗಳನ್ನು ಬಳಸಿಯೂ ಹಣ ಪಾವತಿ ಮಾಡಬಹುದು.
ನಿಗಮದ 6500 ಬಸ್ಸುಗಳಲ್ಲೂ ಹೊಸ ವ್ಯವಸ್ಥೆ ಪರಿಚಯ ಮಾಡಲಾಗುತ್ತದೆ. ಶಕ್ತಿ ಯೋಜನೆಯ ಪಿಂಕ್ ಟಿಕೆಟ್ಗಳನ್ನು ಈ ಇಟಿಎಂ ಮಷಿನ್ ಗಳಲ್ಲಿ ಸ್ಕ್ಯಾನ್ ಮಾಡಿ ಅವಕಾಶ ನೀಡುವ ರೀತಿಯಲ್ಲಿ ವಿನ್ಯಾಸಗೊಳಿಸಲಾಗುತ್ತಿದೆ. ಈ ಬಗ್ಗೆ ಪ್ರಯಾಣಿಕರು ಕೂಡ ಸಂತೋಷ ವ್ಯಕ್ತಪಡಿಸುತ್ತಿದ್ದಾರೆ

