ಜೂನ್ 5 ರಂದು ಅಮೆರಿಕದ ಮೂಲದ ಬುಚ್ ವಿಲ್ಮೋರ್ ಜೊತೆ ಬಾಹ್ಯಾಕಾಶಯಾನ ಕೈಗೊಂಡಿದ್ದ ಭಾರತೀಯ ಮೂಲದ ಸುನಿತಾ ವಿಲಿಯಮ್ಸ್ 52 ದಿನವಾದರೂ ಭೂಮಿಗೆ ಮರಳಿಲ್ಲ. ಇತ್ತೀಚೆಗೆ ಅವರು ಅನಾರೋಗ್ಯದ ಸಮಸ್ಯೆಗೂ ಬಲಿಯಾಗಿದ್ದರು, ಈ ಎಲ್ಲೆದರ ಮದ್ಯೆ ಅವರು ಭೂಮಿಗೆ ಬರುತ್ತಾರೋ ಇಲ್ಲವೋ ಎಂಬುದು ಪ್ರಶ್ನೆಯಾಗಿತ್ತು. ಇದೀಗ ನಾಸಾ ಈ ಬಗ್ಗೆ ಬಿಗ್ ಅಪ್‌ಡೇಟ್ ನೀಡಿದೆ.
ತಾಂತ್ರಿಕ ಸಮಸ್ಯೆಯ ಕಾರಣಕ್ಕೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ತಮ್ಮ ಸಹೋದ್ಯೋಗಿ ಗಗನಯಾತ್ರಿ ಬುಚ್ ವಿಲ್ಮೋರ್ ಅವರೊಂದಿಗೆ ಭಾರತೀಯ ಮೂಲದ ಅಮೆರಿಕನ್ ಗಗನಯಾತ್ರಿ, ಸುನಿತಾ ವಿಲಿಯನ್ಸ್ ಉಳಿದುಕೊಂಡಿದ್ದಾರೆ ಎನ್ನಲಾಗಿದೆ. ಭೂಮಿಗೆ ಯಾವಾಗ ಮರಳುತ್ತಾರೆ ಎನ್ನುವ ವಿಚಾರಕ್ಕೆ ಸಂಬಂಧ ಪಟ್ಟಂತೆ ನಾಸಾವು ಅಪ್ಡೇಟ್ ವೊಂದನ್ನು ನೀಡಿದೆ. ಭಾರತೀಯ ಮೂಲದ ಅಮೆರಿಕನ್ ಗಗನಯಾತ್ರಿ, ಸುನಿತಾ ವಿಲಿಯನ್ಸ್ ವಾಪಸ್ ಮರಳುವುದು ಮತ್ತಷ್ಟು ವಿಳಂಬವಾಗಲಿದೆ ಎಂದು ನಾಸಾ ತಿಳಿಸಿದೆ.ಬಾಹ್ಯಾಕಾಶ ನೌಕೆ ಬೋಯಿಂಗ್ ಸ್ಟಾರ್ ಲೈನರ್ ನಲ್ಲಿನ ತಾಂತ್ರಿಕ ಸಮಸ್ಯೆ ಬಗೆಹರಿದ ಬಳಿಕ 2025ರ ಫೆಬ್ರವರಿಯಲ್ಲಿ ಈ ಇಬ್ಬರೂ ಗಗನಯಾತ್ರಿಗಳು ಭೂಮಿಗೆ ಮರಳಬಹುದು ಎಂದು ತಿಳಿಸಿದೆ