Bengaluru 23°C
Ad

ಸಿಎನ್ ಜಿ ವರ್ಷನ್ ನಲ್ಲಿ ಬಿಡುಗಡೆಗೆ ಸಿದ್ದವಾದ ಹೊಸ ಸ್ವಿಫ್

Swift

ದೇಶಿಯ ಮಾರುಕಟ್ಟೆಯಲ್ಲಿನ ಕಾರು ಉತ್ಪಾದನೆ ಮತ್ತು ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಮಾರುತಿ ಸುಜುಕಿ ಕಂಪನಿಯು ಶೀಘ್ರದಲ್ಲಿಯೇ ಸ್ವಿಫ್ಟ್ ಸಿಎನ್ ಜಿ ಆವೃತ್ತಿ ಬಿಡುಗಡೆಗೆ ಸಿದ್ದವಾಗುತ್ತಿದ್ದು, ಹೊಸ ಆವೃತ್ತಿಯು ಹೆಚ್ಚಿನ ಮಟ್ಟದ ಮೈಲೇಜ್ ಜೊತೆಗೆ ಹಲವಾರು ಸ್ಟ್ಯಾಂಡರ್ಡ್ ಸೇಫ್ಟಿ ಫೀಚರ್ಸ್ ಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಡಲಿದೆ.

ಹೊಸ ಮಾಲಿನ್ಯ ನಿಯಂತ್ರಣ ಮಾನದಂಡಗಳ ಜಾರಿ ನಂತರ ಡೀಸೆಲ್ ಕಾರುಗಳ ಮಾರಾಟವನ್ನು ಸಂಪೂರ್ಣವಾಗಿ ಕೈಬಿಟ್ಟಿರುವ ಮಾರುತಿ ಸುಜುಕಿ ಕಂಪನಿಯು ಸದ್ಯಕ್ಕೆ ಪೆಟ್ರೋಲ್ ಮತ್ತು ಸಿಎನ್ ಜಿ ಕಾರುಗಳ ಮೇಲೆ ಮಾತ್ರ ಗಮನಹರಿಸುತ್ತಿದೆ. ಡೀಸೆಲ್ ಕಾರುಗಳ ಸ್ಥಗಿತ ನಂತರ ಪೆಟ್ರೋಲ್ ಜೊತೆಗೆ ಸಿಎನ್ ಜಿ ಕಾರುಗಳ ಮಾರಾಟವು ಕೂಡಾ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ವಿವಿಧ ಕಾರುಗಳಲ್ಲಿ ಸಿಎನ್ ಜಿ ವೆರಿಯೆಂಟ್ ಗಳ ಮೂಲಕ ಮಾರುತಿ ಸುಜುಕಿ ಕಂಪನಿಯು ಇದೀಗ ಅತಿ ಹೆಚ್ಚು ಬೇಡಿಕೆ ಪಡೆದುಕೊಳ್ಳುತ್ತಿದೆ. ಹೀಗಾಗಿ ಶೀಘ್ರದಲ್ಲಿಯೇ ಹೊಸ ತಲೆಮಾರಿನ ಸ್ವಿಫ್ಟ್ ಮಾದರಿಯಲ್ಲೂ ಸಿಎನ್ ಜಿ ಆವೃತ್ತಿ ಬಿಡುಗಡೆ ಮಾಡುತ್ತಿದೆ.

ಇನ್ನು ಸ್ವಿಫ್ಟ್ ಹೊಸ ಮಾದರಿಯು ಸದ್ಯ ಪೆಟ್ರೋಲ್ ಆವೃತ್ತಿಯಲ್ಲಿ ಎಲ್ಎಕ್ಸ್ಐ, ವಿಎಕ್ಸ್ಐ, ವಿಎಕ್ಸ್ಐ(ಆಪ್ಷನ್), ಜೆಡ್ಎಕ್ಸ್ಐ ಮತ್ತು ಜೆಡ್ಎಕ್ಸ್ಐ ಪ್ಲಸ್ ವೆರಿಯೆಂಟ್ ಗಳನ್ನು ಹೊಂದಿದ್ದು, ಇದು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 6.49 ಲಕ್ಷದಿಂದ ರೂ. 9.50 ಲಕ್ಷ ಬೆಲೆ ಹೊಂದಿದೆ. ಇದರಲ್ಲಿ ಸಿಎನ್ ಜಿ ಮಾದರಿಯು ವಿಎಕ್ಸ್ಐ ಆವೃತ್ತಿ ಆಧರಿಸಿ ಬಿಡುಗಡೆಯಾಗಬಹುದಾಗಿದ್ದು, ಇದು ಪೆಟ್ರೋಲ್ ಮಾದರಿಗಿಂತಲೂ ರೂ. 70 ಸಾವಿರದಿಂದ ರೂ. 90 ಸಾವಿರದಷ್ಟು ಹೆಚ್ಚುವರಿ ಬೆಲೆ ಹೊಂದಿರಲಿದೆ.

 

 

Ad
Ad
Nk Channel Final 21 09 2023
Ad