ಜನಪ್ರಿಯ ರಿಯಲ್‌ಮಿ ಮೊಬೈಲ್ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಇತ್ತೀಚಿಗೆ ಹೊಸದಾಗಿ ಲಾಮಚ್ ಮಾಡಿರುವ ರಿಯಲ್‌ಮಿ ನಾರ್ಜೋ N65 5G ಮೊಬೈಲ್ ಕಡಿಮೆ ಬೆಲೆಯಲ್ಲಿ ಆಕರ್ಷಕವಾಗಿ ಗುರುತಿಸಿಕೊಂಡಿದೆ. ಇನ್ನು ಈ ಮೊಬೈಲ್‌ನ ಫಸ್ಟ್ ಸೇಲ್ ಇಂದು (ಮೇ 31 ರಂದು) ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಮೂಲಕ ಶುರು ಆಗಿದೆ.
ರಿಯಲ್‌ಮಿ ನಾರ್ಜೋ N65 5G ಮೊಬೈಲ್‌ನ 4GB RAM ಆರಂಭಿಕ ವೇರಿಯಂಟ್ ಆಫರ್ ಬೆಲೆಯು 10,499 ರೂ. ಗಳು ಆಗಿದ್ದು, ಇತರೆ ಕೊಡುಗೆ ಸಹ ಸಿಗಲಿವೆ.
ಹೌದು, ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಇಂದು ಮಧ್ಯಾಹ್ನ 12 ಗಂಟೆಗೆ ರಿಯಲ್‌ಮಿ ಸಂಸ್ಥೆಯ ರಿಯಲ್‌ಮಿ ನಾರ್ಜೋ N65 5G (realme NARZO N65 5G) ಮೊಬೈಲ್ ಮೊದಲ ಮಾರಾಟ ಪ್ರಾರಂಭ ಮಾಡಿದೆ. ಈ ಮೊಬೈಲ್ 4GB + 12GB ಹಾಗೂ 6GB + 128GB ಆಂತರೀಕ ಸ್ಟೋರೇಜ್ ಆಯ್ಕೆಗಳನ್ನು ಪಡೆದುಕೊಂಡಿದ್ದು, 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಪಡೆದಿದೆ.
ರಿಯಲ್‌ಮಿ ನಾರ್ಜೋ N65 5G ಮೊಬೈಲ್ 6.67 ಇಂಚಿನ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದ್ದು, 120Hz ರಿಫ್ರೆಶ್ ರೇಟ್, 89.97 ಪ್ರತಿಶತ ಸ್ಕ್ರೀನ್ ಟು ಬಾಡಿ ಅನುಪಾತ ಹಾಗೂ 625 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಆಯ್ಕೆ ಪಡೆದುಕೊಂಡಿದೆ. ಇದರ ಜೊತೆಗೆ ಡಿಸ್‌ಪ್ಲೇಯು ಪಂಚ್ ಹೋಲ್ ಕಟೌಟ್ ಪಡೆದುಕೊಂಡಿದೆ.
ರಿಯಲ್‌ಮಿ ನಾರ್ಜೋ N65 5G ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 6300 5G ಪ್ರೊಸೆಸರ್ ಪವರ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ಇದೆ. ಅಲ್ಲದೇ 6GB RAM ಡೈನಾಮಿಕ್ RAM ಸೌಲಭ್ಯ ಸಹ ಈ ಫೋನ್ ಪಡೆದಿದೆ. ಇದರೊಂದಿಗೆ 4GB + 12GB ಹಾಗೂ 6GB + 128GB ಆಂತರೀಕ ಸ್ಟೋರೇಜ್ ಆಯ್ಕೆ ಪಡೆದಿದೆ.

