Bengaluru 22°C
Ad

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಫೋನ್‌ ಬೆಲೆಯಲ್ಲಿ ಭರ್ಜರಿ ಇಳಿಕೆ

Samsung

ಫ್ಲಿಪ್‌ಕಾರ್ಟ್‌ ಆನ್‌ಲೈನ್‌ ತಾಣದಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಫೋನ್‌ ಶೇ. 40% ರಷ್ಟು ನೇರ ಡಿಸ್ಕೌಂಟ್‌ ದರದಲ್ಲಿ ಕಾಣಿಸಿಕೊಂಡಿದೆ. ಈ ಫೋನಿನ 6 GB RAM + 128 GB ಸ್ಟೋರೇಜ್ ವೇರಿಯಂಟ್ ಅನ್ನು 11,331ರೂ. ಗಳ ಆಫರ್‌ ಬೆಲೆಯಲ್ಲಿ ಖರೀದಿ ಮಾಡಬಹುದಾಗಿದೆ. ಇದರ ಜೊತೆಗೆ ಬ್ಯಾಂಕ್‌ ಕೊಡುಗೆ ಹಾಗೂ ನೋ ಕಾಸ್ಟ್‌ ಇಎಮ್‌ಐ ಸಹ ದೊರೆಯುತ್ತದೆ.

ಇನ್ನು ಈ ಫೋನ್‌ 6000 mAh ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಹೊಂದಿದ್ದು, ಪ್ರಾಥಮಿಕ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಬಲದಲ್ಲಿ ಇದೆ. ಗ್ರಾಹಕರು ಈ ಮೊಬೈಲ್‌ ಅನ್ನು ಬ್ಲೂ, ಡಾರ್ಕ್ ಬ್ಲೂ ಮತ್ತು ಸಿಲ್ವರ್ ಬಣ್ಣಗಳ ಆಯ್ಕೆಯಲ್ಲಿ ಖರೀದಿ ಮಾಡಬಹುದಾಗಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಫೋನ್‌ 6.6 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಒಳಗೊಂಡಿದೆ. ಈ ಡಿಸ್‌ಪ್ಲೇ 2408 x 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಹಾಗೆಯೇ ಇದು 90Hz ರಿಫ್ರೆಶ್ ರೇಟ್‌ ಅನ್ನು ಬೆಂಬಲಿಸಲಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಲೇಯರ್ ಪ್ರೊಟೆಕ್ಷನ್‌ ಅನ್ನು ಪಡೆದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಫೋನ್‌ ಎಕ್ಸಿನೋಸ್‌ 1330 ಆಕ್ಟಾ ಕೋರ್ SoC ಪ್ರೊಸೆಸರ್‌ ಸ್ಪೀಡ್‌ ಅನ್ನು ಹೊಂದಿದ್ದು, ಇದು ಆಂಡ್ರಾಯ್ಡ್‌ 13 ಸಪೋರ್ಟ್‌ ನಲ್ಲಿ ಕೆಲಸ ಮಾಡಲಿದೆ. ಇದಕ್ಕೆ ಪೂರಕವಾಗಿ ಮಾಲಿ G68 GPU ಸಪೊರ್ಟ್‌ ಅನ್ನು ಒಳಗೊಂಡಿದ್ದು, ಹಾಗೆಯೇ 6GB RAM ಮತ್ತು 128GB ಆಂತರೀಕ ಸ್ಟೋರೇಜ್‌ ಆಯ್ಕೆ ಒಳಗೊಂಡಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದ್ದು, ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಅನ್ನು ಪಡೆದುಕೊಂಡಿದೆ. ದ್ವಿತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಅನ್ನು ಪಡೆದಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಪಡೆದುಕೊಂಡಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಫೋನ್‌ 6000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ ಇದು 25W ಫಾಸ್ಟ್‌ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡಲಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 5G, 4G, ವೈಫೈ, ಬ್ಲೂಟೂತ್‌ 5.2, NFC ಮತ್ತು GPS ಹಾಗೂ USB ಟೈಪ್-C ಪೋರ್ಟ್‌ ಅನ್ನು ಒಳಗೊಂಡಿದೆ.

Ad
Ad
Nk Channel Final 21 09 2023
Ad