ಶಿವಮೊಗ್ಗ: ಸಾಕು ಬೆಕ್ಕು ಕಚ್ಚಿ ಮಹಿಳೆ ಸಾವನ್ನಪ್ಪಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಇಲ್ಲಿನ ಶಿಕಾರಿಪುರ ತಾ| ತರಲಘಟ್ಟದಲ್ಲಿ ದುರ್ಘಟನೆ ಸಂಭವಿಸಿದೆ. 50 ವರ್ಷ ವಯಸ್ಸಿನ ಗಂಗೀಬಾಯಿ ಎಂಬ ಮಹಿಳೆ ಸಾವನ್ನಪ್ಪಿದ್ದಾರೆ.

ಬೆಕ್ಕು ಎರಡು ತಿಂಗಳ ಹಿಂದೆ ಮಹಿಳೆಗೆ ಕಚ್ಚಿತ್ತು. ಬೆಕ್ಕು ಕಚ್ಚಿದ ಪರಿಣಾಮ ರೇಬಿಸ್ ಕಾಯಿಲೆಗೆ ಮಹಿಳೆ ತುತ್ತಾಗಿದ್ದಳು. ಮೊದಲು ತರಲಘಟ್ಟದ ಕ್ಯಾಂಪ್​ನಲ್ಲಿರುವ ಯುವನೋರ್ವನ ಮೇಲೆ ದಾಳಿ ಮಾಡಿತ್ತು. ಬಳಿಕ ಮಹಿಳೆಯ ಮೇಲೂ ದಾಳಿ ಮಾಡಿದೆ.

ಮಹಿಳೆ ಕಾಲಿಗೆ ಕಚ್ಚಿದ ಕಾರಣ ಐದು ಇಂಜೆಕ್ಷನ್ ತೆಗೆದುಕೊಳ್ಳಬೇಕಿತ್ತು. ಆದರೆ ಒಂದು ಇಂಜೆಕ್ಷನ್ ಪಡೆದು ಹುಷಾರಾಗಿದ್ದಳು. ಈ ಕಾರಣಕ್ಕೆ ಮಹಿಳೆ ಚೇತರಿಕೆ ಕಂಡ ಹಿನ್ನೆಲೆ ಇಂಜೆಕ್ಷನ್​ ಪಡೆಯದೆ ಸುಮ್ಮನಾಗಿದ್ದಳು. ಚೇತರಿಕೆ ಕಂಡ ಹುಮ್ಮಸ್ಸಿನಲ್ಲಿ ಮಹಿಳೆ ಇಂಜೆಕ್ಷನ್​​ ತೆಗೆದುಕೊಳ್ಳುವುದನ್ನು ನಿರ್ಲಕ್ಷಿಸಿದ್ದಳು. ಆದರೆ ರೇಬಿಸ್​ನಿಂದಾಗಿ ಅನಾರೋಗ್ಯ ಕಾಡಿದ ಪರಿಣಾಮ ಗಂಗೀಬಾಯಿ ಸಾವನ್ನಪ್ಪಿದ್ದಾರೆ.