ಶಿವಮೊಗ್ಗ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ರಾಜ್ಯದಲ್ಲಿ ಭಾರಿ ಸಂಚಲನ ಮೂಡಿಸಿತ್ತು. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಸಿಐಡಿ ಅಧಿಕಾರಿಗಳು ಸೋಮವಾರ ಶಿವಮೊಗ್ಗ ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ಚಂದ್ರಶೇಖರ್ ಅವರು ಮೇ 26ಕ್ಕೆ ತಮ್ಮ ನಿವಾಸದಲ್ಲಿ ನೇಣಿಗೆ ಶರಣಾಗಿದ್ದರು. ಬಳಿಕ ಇದೇ ಕಾರಣದಿಂದ ಸಚಿವ ನಾಗೇಂದ್ರ ರಾಜೀನಾಮೆ ನೀಡಿದ್ದರು. ಇನ್ನು ಇವರ ಆತ್ಮಹತ್ಯೆಗೆ ಕಾರನ ಎನ್ನಲಾದ ನಿಗಮ ಮಂಡಳಿ ನಿರ್ದೇಶಕ ಎ1 ಪದ್ಮನಾಭ್, ಹಾಗೂ ಮಂಡಳಿ ಅಕೌಂಟೆಂಟ್ ಸುಪರ್ ವೈಸರ್ ಎ2 ಪರಶುರಾಮ್ ರನ್ನು ಇಂದು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.

ಸಿಐಡಿ ಡಿ.ವೈ.ಎಸ್.ಪಿ. ಮೊಹಮ್ಮದ್ ರಫಿ ನೇತೃತ್ವದ ತಂಡವು ಇಬ್ಬರು ಆರೋಪಿಗಳನ್ನು 2 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.