ಶಿವಮೊಗ್ಗ : ಮಂಗಳೂರಿನ ಬಂಟ್ವಾಳ ತಾಲೂಕಿನ ಅಬ್ದುಲ್ ರಹ್ಮಾನ್ ಹತ್ಯೆ ಪ್ರಕರಣವನ್ನು ಪ್ರತೀಕಾರದ ಕೊಲೆ ಎಂದು ಏಕಾಏಕಿ ಬಿಂಬಿಸುವುದು ಸರಿಯಲ್ಲ. ಮೊದಲು ಕೂಲಂಕಷವಾಗಿ ಪರಿಶೀಲಿಸಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಶಿವಮೊಗ್ಗದಲ್ಲಿ ಬುಧವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಏಕಾಏಕಿ ಮಾಧ್ಯಮಗಳಲ್ಲಿ ಪ್ರತೀಕಾರದ ಕೊಲೆ ಎಂದು ಬಿಂಬಿಸಿದರೆ ಏನಾಗಲಿದೆ ಎಂಬುದನ್ನು ಯಾರಾದರೂ ಗಮನಿಸಿದ್ದಾರಾ ಎಂದು ಅವರು ಪ್ರಶ್ನಿಸಿದರು.

