ಶಿವಮೊಗ್ಗ: ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಸಿಬ್ಬಂದಿ ವಿದ್ಯಾರ್ಥಿಯ ಜನಿವಾರವನ್ನು ಕತ್ತರಿಸಿ ಪರೀಕ್ಷೆ ಬರೆಯಲು ಅನುಮತಿಸಿದಂತಹ ಘಟನೆ ಬೆಳಕಿಗೆ ಬಂದಿದೆ.

ಬುಧವಾರ ಆದಿಚುಂಚನಗಿರಿ ಶಾಲೆಯಲ್ಲಿ ಸಿಇಟಿ ಪರೀಕ್ಷೆ ಬರೆಯಲು ಆಗಮಿಸಿದ ವಿದ್ಯಾರ್ಥಿಗಳ ಕೈಗೆ ಕಟ್ಟಿಕೊಂಡಿದ್ದ ಕಾಶಿ ದಾರವನ್ನು ಸಿಬ್ಬಂದಿ ಬಿಚ್ಚಿಸಿದ್ದಾರೆ ಹಾಗೂ ಜನಿವಾರವನ್ನೂ ತೆಗೆಸಿದ್ದಾರೆ. ಇದೇ ವೇಳೆ ಒಬ್ಬ ವಿದ್ಯಾರ್ಥಿ ಜನಿವಾರ ತೆಗೆಯಲ್ಲ ಎಂದಿದ್ದಕ್ಕೆ ಸಿಬ್ಬಂದಿ ಅದನ್ನು ಕತ್ತರಿಸಿದ್ದಾರೆ ಎನ್ನಲಾಗಿದೆ.

ಈ ಘಟನೆಯಿಂದ ಬ್ರಾಹ್ಮಣ ಸಮುದಾಯದ ಮುಖಂಡರು, ಮಹಾಸಭಾದ ನೂತನ ಜಿಲ್ಲಾ ಪ್ರತಿನಿಧಿ ರಘುರಾಮ್‌, ಮಾಜಿ ಪ್ರಸನ್ನ ಕುಮಾರ್‌ ಆಕ್ರೋಶಿತರಾಗಿ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಸಿಬ್ಬಂದಿ ಬಳಿ ವಿಚಾರಿಸಿದ್ದಾರೆ. ಈ ಘಟನೆಯ ಬಗ್ಗೆ ಗುರುವಾರ ಸಂಘದವರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಪ್ರತಿಭಟನಾ ಮನವಿಯನ್ನು ಸಲ್ಲಿಸಿದ್ದಾರೆ.