ಶಿವಮೊಗ್ಗ: ಸೆಮಿಸ್ಟರ್ ಪರೀಕ್ಷೆಯಲ್ಲಿ ಫೇಲ್​ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿಯೋರ್ವ ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದ ಅಡೂರು ಗ್ರಾಮದಲ್ಲಿ ನಡೆದಿದೆ.

ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸರ್ಕಾರಿ ಪದವಿ ಕಾಲೇಜಿನಲ್ಲಿ ಬಿಎ ವ್ಯಾಸಾಂಗ ಮಾಡುತಿದ್ದ ವಿದ್ಯಾರ್ಥಿ ಮನುಷ್ ಡಿ (19) ಮೃತ ರ್ದುದೈವಿ. ಇತ ಸೆಮಿಸ್ಟರ್ ಇಂಗ್ಲಿಷ್ ವಿಷಯದಲ್ಲಿ ಫೇಲ್ ಆಗಿದ್ದನು.ಇದರಿಂದ ಬೇಸತ್ತು ಆನಂದಪುರ ಸಮೀಪದ ಅಡೂರು ಗ್ರಾಮದ ನಿವಾಸದಲ್ಲಿ ಕಳೆನಾಶಕ ಸೇವಿಸಿದ್ದಾನೆ.

ವಿಷಯ ತಿಳಿದ ಕೂಡಲೇ ವಿದ್ಯಾರ್ಥಿ ಮನುಷ್​ನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ದುರಾದೃಷ್ಟವಶಾತ್​ ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿ ಕೊನೆಯುಸಿರೆಳೆದಿದ್ದಾನೆ. ಪ್ರಕರಣ ಆನಂದಪುರ ಪೊಲೀಸ್ ಠಾಣೆಯಲ್ಲಿ  ದಾಖಲಾಗಿದೆ.