ಶಿವಮೊಗ್ಗ: ಕಲ್ಯಾಣಿ ಬಳಿ ಫೋಟೋ ತೆಗೆದುಕೊಳ್ಳುವಾಗ ಕಾಲು ಜಾರಿ ಬಿದ್ದು ಯುವಕನೋರ್ವ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಅಕ್ಕಮಹಾದೇವಿ ಜನ್ಮಸ್ಥಳ ಉಡತಡಿ ಗ್ರಾಮದಲ್ಲಿ ನಡೆದಿದೆ.

ಶಿರಾಳಕೊಪ್ಪದ ಗಂಡಗದಕೇರಿಯ ನಿವಾಸಿ ತಾಹೀರ್(21) ಮೃತ ಯುವಕ ಎಂದು ಗುರುತಿಸಲಾಗಿದೆ. ಸ್ನೇಹಿತರೊಂದಿಗೆ ​ಅಕ್ಕಮಹಾದೇವಿ ಜನ್ಮಸ್ಥಳ ನೋಡಲು ಬಂದಿದ್ದ ವೇಳೆ ಸೆಲ್ಫಿ ತೆಗೆದುಕೊಳ್ಳುವಾಗ ಕಾಲುಜಾರಿ ಬಿದ್ದು ದುರ್ಘಟನೆ ನಡೆದಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ. ಈ ಕುರಿತು ಶಿರಾಳಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.