Bengaluru 22°C
Ad

ಈ ರಾಶಿಯವರು ಮನೆಯಿಂದ ದೂರ ಇರಬೇಕಾದೀತು, ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡಿ

Astrology

ರಾಶಿ ಭವಿಷ್ಯ ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ.ಮೇ​​​​​ 29ರ ರಾಶಿ ಭವಿಷ್ಯದಲ್ಲಿ ಮೇಷ ರಾಶಿಯಿಂದ ಕಟಕ ರಾಶಿಯವರೆಗೆ ರಾಶಿ ಫಲ ಹೇಗಿದೆ ಎಂದು ನೋಡುವುದಾದರೇ,

ಮೇಷ ರಾಶಿ: ಇಂದಿನ‌ ನಿಮ್ಮ ಮಾತು ಅಲ್ಪವಿದ್ದರೂ ಖಾರವಾಗಿರುವುದು. ಸ್ವಂತ ಉದ್ಯಮವನ್ನು ನಡೆಸುತ್ತಿದ್ದರೆ ನಿಮಗೆ ಅಲ್ಪ ಲಾಭದ ನಿರೀಕ್ಷೆಯನ್ನು ಮಾಡಬಹುದು. ಗೊಂದಲವನ್ನು ಪರಿಹರಿಸಲು ನಿಮಗೆ ನೂರಾರು ಮಾರ್ಗಗಳಿವೆ. ಶಾಂತಚಿತ್ತರಾಗಿ ಯೋಚಿಸಿ. ನಿಮ್ಮ ಆಯ್ಕೆಗಳು ಸರಿಯಾಗಿರಲಿ. ಗೊಂದಲವನ್ನು ಇಟ್ಟುಕೊಳ್ಳುವುದು ಬೇಡ. ಎಲ್ಲ ಕಾರ್ಯಕ್ಕೂ ನಿಮ್ಮದೇ ಆದ ದಾರಿ ಇರುವುದು. ಯಾರ ಜೊತೆ ದ್ವೇಷವನ್ನು ಬೆಳೆಸಿಕೊಳ್ಳಬೇಡಿ.

ವೃಷಭ ರಾಶಿ :ನಿಮ್ಮ ಮಾರ್ಗವು ಯೋಗ್ಯವಲ್ಲದೇ ಇರಬಹುದು. ಸತ್ಯವನ್ನೇ ನಂಬಿ ಬದುಕುವವರು ಎಂದು ಇದುವರೆಗೆ ತಿಳಿದದ್ದು ಸುಳ್ಳು ಮಾಡುವಿರಿ. ಮಾತಿಗೆ ಬೆಲೆಯು ಕಡಿಮೆಯಾದೀತು. ನಿಮ್ಮನ್ನು ನೀವು ಆದ್ಯಂತವಾಗಿ ನೋಡಿಕೊಳ್ಳಿ. ದಾಂಪತ್ಯದಲ್ಲಿ ಹೊಂದಾಣಿಕೆ ಇರಲಿದೆ. ತಪ್ಪುಗಳಿದ್ದರೆ ಅದನ್ನು ಒಪ್ಪಿಕೊಂಡು ಮುನ್ನಡೆಯಿರಿ.

ಮಿಥುನ ರಾಶಿ :ಇಂದು ಸಂಕಷ್ಟದಲ್ಲಿ ಇರುವವರಿಗೆ ಸಹಾಯ ಮಾಡುವ ಮನಸ್ಸಾಗುವುದು. ಒತ್ತಡವನ್ನು ನಿಭಾಯಿಸುವ ಕಲೆ ನಿಮಗೆ ಸಿದ್ಧಿಸಿದ್ದು ಅದನ್ನು ಚೆನ್ನಾಗಿ ನಿರ್ವಹಿಸಬಲ್ಲಿರಿ. ನಿಮ್ಮ ಸಮಯೋಚಿತ ಪೂರ್ವಾಲೋಚನೆಯಿಂದ ನೀವಿಂದು ದೊಡ್ಡ ಅಪಾಯದಿಂದ ನೀವು ಹೊರಬರಲಿದ್ದೀರಿ.

ಕಟಕ ರಾಶಿ :ನಿಮ್ಮ ಜಾಣತನವೇ ಮುಳುವಾಗಬಹುದು. ವಿವೇಚನೆಯಿಲ್ಲದೇ ಯಾವ ಕೆಲಸವನ್ನೂ ಮಾಡಬೇಡಿ. ಯಾವ ಮಾತನ್ನೂ ನೋವಾಗುವಂತೆ ಆಡಬೇಡಿ. ಮೇಲಿನಿಂದ ಬಿದ್ದು ಪೆಟ್ಟು‌‌ಮಾಡಿಕೊಳ್ಳುವಿರಿ. ನೀವಿಂದು ಪ್ರೀತಿಸಲು ಆರಂಭಿಸುವಿರಿ. ಆಧಿಕಾರದ ದುರುಪಯೋಗವನ್ನು ಮಾಡಿಕೊಳ್ಳುವಿರಿ. ಅವಸರದಲ್ಲಿ ಅನಾಹುತವಾದೀತು. ಧಾರ್ಮಿಕ‌ಕ್ಷೇತ್ರಗಳಿಗೆ ಭೇಟಿ ನೀಡಲಿದ್ದೀರಿ. ನಿಮ್ಮ ಸಂತೋಷವನ್ನು ಯಾರೂ ಸಹಿಸಲಾರರು. ಯಾವುದೇ ಪ್ರತ್ಯುತ್ತರಗಳನ್ನು ಕೊಡಲು ಹೋಗಬೇಡಿ. ಸ್ತ್ರೀಯರಿಂದ ನಿಮಗೆ ಲಾಭವಾಗಲಿದೆ.

ಸಿಂಹ ರಾಶಿ :ಇಂದು ನಿಮ್ಮ ಮಾತಿನಿಂದ ಕುಟುಂಬದಲ್ಲಿ ಆತಂಕವು ಸೃಷ್ಟಿಯಾಗಬಹುದು. ಬೇಸರದ ಮನಸ್ಸನ್ನು ಮನೆಯವರಿಗೆ ತೋರಿಸಲು ಇಷ್ಟಪಡುವುದಿಲ್ಲ. ಅನಿರೀಕ್ಷಿತ ಜವಾಬ್ದಾರಿಗಳು ಸಿಕ್ಕಿ ಸ್ವಲ್ಪ ಒತ್ತಡವೆನಿಸಬಹುದು. ಮನೆಯ ವ್ಯವಹಾರದಲ್ಲಿ ಭಾಗವಹಿಸಲು ಇಷ್ಟವಾಗದು. ಇದರಿಂದ ಕುಟುಂಬವು ಬೇಸರಗೊಳ್ಳುವುದು. ಆದಾಯದ ಮಟ್ಟವು ಇಂದು ಅಧಿಕವಾಗಲಿದೆ.

ಕನ್ಯಾ ರಾಶಿ :ಇಂದು ನಿಮ್ಮ ಕಛೇರಿಯ ಕೆಲಸದಲ್ಲಿ ಅವಸರದ ನಿರ್ಧಾರವನ್ನು ತೆಗದುಕೊಳ್ಬೇಡಿ. ನಿಮ್ಮ ಮೇಲಧಿಕಾರಿಗಳ ಜೊತೆ ಚರ್ಚಿಸಿ. ಅವರ ಕಾರ್ಯಗಳನ್ನು ಅಚ್ಚುಕಟ್ಟಾಗಿ ಮಾಡಿಕೊಡಿ. ನಿಮ್ಮ ಆಲೋಚನೆ ಹಾಗೂ ಸಾಮರ್ಥ್ಯದಿಂದ ಉನ್ನತ ಹುದ್ದೆಗೆ ಹೋಗುವ ಅವಕಾಶವಿರಬಹುದು. ವ್ಯಕ್ತಿಗಳನ್ನು ದೂರುವ ಸ್ವಭಾವವನ್ನು ಬಿಡುವುದು ಒಳ್ಳೆಯದಲ್ಲ.

ತುಲಾ ರಾಶಿ :ವ್ಯವಸ್ಥೆಯ ಮುಖ್ಯಸ್ಥರಾಗಿ ಮುನ್ನಡೆಸುವುದು ಕಷ್ಟವಾಗುವುದು. ಆಯಾಸದಿಂದ ಯಾವ ಉತ್ಸಾಹವೂ ನಿಮ್ಮಲ್ಲಿ ಇರದು. ಅತಿಯಾದ ಆಲಸ್ಯದಿಂದ ನಿದ್ರಿಸುವ ಮನಸ್ಸಿನಲ್ಲಿ ಇರುವಿರಿ. ವಾಹನವು ನಾಷ್ಟವಾಗುವ ಸಾಧ್ಯತೆಯಿದೆ. ಯಾರೂ ನನಗೆ ಸಹಾಯಕ್ಕೆ ಬರಲಾರರು ಎಂಬ ಅನಾಥ ಪ್ರಜ್ಞೆಯನ್ನು ನೀವು ಹೊಂದುವಿರಿ. ಇಂದು ಕ್ಲಿಷ್ಟಕರವಾದ ಸನ್ನಿವೇಶದಲ್ಲಿ ಇರುವಿರಿ.

ವೃಶ್ಚಿಕ ರಾಶಿ :ಯಾರದೋ ಹಣವು ಅನಿರೀಕ್ಷಿತವಾಗಿ ಕೈ ಸೇರುವುದು. ನಿಮ್ಮ ಬಹುದಿನದ ಸಮಸ್ಯೆಯು ಬಗೆಹರಿಯಲಿದೆ. ಅನುಭವಿಗಳ ಜೊತೆಗಿನ ಒಡನಾಟದದಿಂದ ಉದ್ಯಮವು ಹೆಚ್ಚಾಗುವುದು. ಉತ್ತಮ‌ ವಿಚಾರಗಳ ಕಡೆ ಗಮನವಿರಲಿ. ಪೋಷಕರ ಬೆಂಬಲ ಮತ್ತು ಆಶೀರ್ವಾದದಿಂದ ಸಮಾಧಾನವಿರುತ್ತದೆ. ನಿಮ್ಮ ಬಂಧುಗಳ ಜೊತೆ ಯಾವುದೇ ರೀತಿಯ ವ್ಯವಹಾರವನ್ನು ಮಾಡಬೇಡಿ. ಇನ್ನೊಬ್ಬರ ಸಂಪತ್ತನ್ನು ಅಪಹರಿಸಿದ ಅಪವಾದ ಬರುವುದು. ಇಲ್ಲದಿದ್ದರೆ ನೀವು ಸಮಸ್ಯೆಗಳನ್ನು ಎದುರಿಸಬಹುದು. ಮಧುರವಾದ ಮಾತುಗಳಿಂದ ತುಂಡಾಗುವ ಸಂಬಂಧವನ್ನು ಸರಿ ಮಾಡಿಕೊಳ್ಳುವಿರಿ.

Ad
Ad
Nk Channel Final 21 09 2023
Ad