ಧನು ರಾಶಿ: ಮಾನಸಿಕ ಅಸ್ಥಿರತೆಯಿಂದ ಜೊತೆಗಾರರಿಗೆ ಕಷ್ಟವಾಗಲಿದೆ. ವಾಹನದಿಂದ ಅಪಘಾತವು ಆಗಬಹುದು. ನಿಮ್ಮ ಮಾತನ್ನು ನಿಯಂತ್ರಣ ತಪ್ಪಿ ಆಡುವಿರಿ. ನಿಮಗೆ ಯಾರ ಮಾತಿನ ಮೇಲೂ ಪೂರ್ಣ ನಂಬಿಕೆ ಇರದು. ಖುಷಿಯ ಸಂದರ್ಭದಲ್ಲಿ ನಿಮ್ಮ ನೋವನ್ನು ಕುಟುಂಬವು ಹಂಚಿಕೊಳ್ಳಬಹುದು. ಆರೋಗ್ಯದ ವಿಚಾರದಲ್ಲಿ ನಿಮಗೆ ಸ್ವಲ್ಪ ಸಮಸ್ಯೆ ಆಗಬಹುದು. ಕಣ್ಣಿನ ಸಮಸ್ಯೆಯು ಹೆಚ್ಚಾದೀತು. ವಿವಾಹ ಸಂಬಂಧದಿಂದ ನಿಮಗೆ ತೊಂದರೆಯಾಗಬಹುದು.
ಮಕರ ರಾಶಿ: ಸಹೋದರರಿಂದ ನಿಮಗೆ ಧೈರ್ಯವು ಸಿಗುವುದು. ದಾಂಪತ್ಯದಲ್ಲಿ ಸಂತೋಷವಿರಲು ಹೊಸತನ ಬೇಕಾದೀತು. ಮಾನಸಿಕ ಖಿನ್ನತೆಯಿಂದ ಹೊರಬರಲು ಸ್ನೇಹಿತರು ಸಹಾಯ ಮಾಡುವರು. ಸಂಗಾತಿಯ ನಡುವಿನ ವಾಗ್ವಾದವು ವಿಕೋಪಕ್ಕೆ ಹೋಗಬಹುದು. ನೀವು ಅಂದುಕೊಂಡ ಕಾರ್ಯವನ್ನು ಮಾಡಲು ಸಮಯವೇ ಸಿಗದು. ನೀವು ಅಂದುಕೊಂಡಿದ್ದು ಮಾತ್ರವೇ ಸತ್ಯವಾಗಿ ಇರದು. ನಿಮ್ಮ ಪ್ರಾಮಾಣಿಕ ಪ್ರಯತ್ನಕ್ಕೆ ಫಲವು ದೊರೆಯುವುದು. ವಾಹನ ಸಂಚಾರದಲ್ಲಿ ನಿಮಗೆ ಭಯವಾಗಬಹುದು.
ಕುಂಭ ರಾಶಿ: ಹಳೆಯ ರೋಗವು ಮತ್ತೆ ಕಾಣಿಸಿಕೊಳ್ಳಬಹುದು. ಕಛೇರಿಯಲ್ಲಿ ಅನ್ಯ ಕಾರಣಗಳಿಂದ ನಿಮ್ಮ ಕೆಲಸಗಳು ನಿಧಾನವಾಗಿ ಸಾಗಬಹುದು. ಅನಿರೀಕ್ಷಿತ ಸುದ್ದಿಯು ನಿಮ್ಮ ಮನಸ್ಸಿಗೆ ಘಾಸಿಯನ್ನು ಮಾಡಬಹುದು. ಜಟಿಲ ಸಮಸ್ಯೆಯನ್ನು ಬಿಡಿಸಿಕೊಳ್ಳಲು ಕಷ್ಟವಾದೀತು. ಆರ್ಥಿಕಭದ್ರತೆಯ ಕಡೆ ಅಧಿಕ ಗಮನವನ್ನು ಕೊಡುವಿರಿ. ಮನಸ್ಸಿಗೆ ನಕಾರಾತ್ಮಕ ಆಲೋಚನೆಯು ಬರದಂತೆ ನೋಡಿಕೊಳ್ಳಿ. ಇಂದು ಹಣಕಾಸಿನ ವಿಚಾರದಲ್ಲಿ ಯಾರನ್ನೂ ಅತಿಯಾಗಿ ನಂಬಬೇಡಿ.
ಮೀನ ರಾಶಿ: ಕೆಲವು ಘಟನೆಗಳು ನಿಮ್ಮನ್ನು ಭ್ರಾಂತಗೊಳಿಸಬಹುದು. ಯಾರದೋ ಒತ್ತಡದಿಂದ ನಿಮ್ಮ ದಿನಚರಿಯನ್ನು ವ್ಯತ್ಯಾಸ ಮಾಡಿಕೊಳ್ಳುವಿರಿ. ನಿಮಗೆ ಬರಬೇಕಾದ ಹಣದ ಬಗ್ಗೆ ನಿರ್ಲಕ್ಷ್ಯ ಬೇಡ. ನೀರೀಕ್ಷಿಸಿದಂತೆ ಎಲ್ಲವೂ ನಡೆಯದೇ ಇರಬಹುದು. ನಿಮಗೆ ಬರುವ ಎಚ್ಚರಿಕೆಯ ಕರೆಯನ್ನು ಗಮನಿಸದೇ ಮುನ್ನಡೆಯುವಿರಿ. ಉತ್ತಮವಾದ ಸಮಯವನ್ನು ಎದುರು ನೋಡುವಿರಿ. ಹಣದ ಒಳ ಹರಿವು ನಿಮಗೆ ನೆಮ್ಮದಿಯನ್ನು ಕೊಟ್ಟೀತು. ತುರ್ತು ನಿರ್ಧಾರಗಳನ್ನು ತೆಗೆದುಕೊಳ್ಳುವುದು ಬೇಡ.

