Bengaluru 22°C
Ad

ಇಂದಿನ ರಾಶಿ ಭವಿಷ್ಯ : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಸಿಗಲಿದೆ ಶುಭ ಸುದ್ದಿ

ಆರೋಗ್ಯದಲ್ಲಿ ಪ್ರಗತಿ ಇರಲಿದೆ. ವ್ಯಾಪಾರ ವ್ಯವಹಾರದಲ್ಲಿ ಲಾಭ ಇರಲಿದೆ. ಅತಿಯಾದ ಸಂಶಯಾತ್ಮಕ ಸ್ವಭಾವ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ ಇದೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 5

ಮೇಷ: ಆರೋಗ್ಯದಲ್ಲಿ ಪ್ರಗತಿ ಇರಲಿದೆ. ವ್ಯಾಪಾರ ವ್ಯವಹಾರದಲ್ಲಿ ಲಾಭ ಇರಲಿದೆ. ಅತಿಯಾದ ಸಂಶಯಾತ್ಮಕ ಸ್ವಭಾವ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ ಇದೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 5

ವೃಷಭ: ಕೈಗೆ ಬಂದ ತುತ್ತು ಬಾಯಿಗೆ ಬರುವ ಮುನ್ನ ಕೋಪದಿಂದ ಹದಗೆಡಲು ಹಾದಿ ಮಾಡಿಕೊಳ್ಳುವುದು ಬೇಡ, ತಾಳ್ಮೆಯಿಂದ ವರ್ತಿಸಿ. ಕೆಲಸ ಕಾರ್ಯಗಳಲ್ಲಿ ನಿಧಾನಗತಿ. ಕುಟುಂಬದ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 4

ಮಿಥುನ: ಆಪ್ತ ವ್ಯಕ್ತಿಗಳಿಂದ ಸಲಹೆ ಸಿಗಲಿದೆ. ಆರ್ಥಿವಾಗಿ ಬಲ ಸಿಗಲಿದೆ. ದ್ವಿಸ್ವಭಾವದರಾದ ನೀವು ಆಂತರಿಕ ಭಯದಿಂದ ಬಳಲುತ್ತಿರುವ ಹಾಗೆ ಭಾಸವಾಗುವುದು. ಆರೋಗ್ಯದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

ಕಟಕ: ಹಾಸ್ಯ ಪ್ರಜ್ಞೆಯಿಂದ ಕಾರ್ಯವನ್ನು ಸಾಧಿಸಿಕೊಳ್ಳುವಿರಿ. ಹೊಸ ವ್ಯವಹಾರದಲ್ಲಿ ತೊಡಗುವಿರಿ. ಆತುರದ ತೀರ್ಮಾನಗಳು ಬೇಡ. ಕುಟುಂಬದ ಸದಸ್ಯರೊಂದಿಗೆ ಚರ್ಚೆ ನಡೆಸುವಿರಿ. ಸಂಗಾತಿಯ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ಸಿಂಹ: ಅತಿಯಾದ ವ್ಯಾಮೋಹ ದುಃಖಕ್ಕೆ ಕಾರಣವಾಗಬಹುದು. ಇಂದು ನಿಮ್ಮ ಕೆಲಸದ ಸ್ಥಳದಲ್ಲಿ ಪ್ರೀತಿ ಮೇಲುಗೈ ಸಾಧಿಸುತ್ತದೆ. ನಿಮ್ಮ ಶಕ್ತಿ ಮತ್ತು ನಿಮ್ಮ ಮುಂದಿನ ಯೋಜನೆಗಳನ್ನು ಮರು ನಿರ್ಣಯಿಸುವ ಸಮಯ.ಆರೋಗ್ಯದಲ್ಲಿ ಪ್ರಗತಿ ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

ಕನ್ಯಾ: ಆರೋಗ್ಯದ ಕಡೆಗೆ ಗಮನ ಹರಿಸಬೇಕು. ಅತಿಥಿಗಳ ಆಗಮನ ಸಂತಸ ತರುವುದು. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ. ಪಾಲುದಾರಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

ತುಲಾ: ಆಪ್ತರ ಮಾತುಗಳು ಅಗಾಧ ಪರಿಣಾಮ ಬೀರುವ ಸಾಧ್ಯತೆ ಇದೆ. ಹಣಕಾಸಿನ ವ್ಯವಹಾರದಲ್ಲಿ ಕುಂಠಿತವಾಗಲಿದೆ.ಕುಟುಂಬದ ಸದಸ್ಯರ ಆರೋಗ್ಯದಲ್ಲಿ ವ್ಯತ್ಯಾಸ ಆಗಬಹುದು. ಧೃತಿಗೆಡದೆ ಕಾರ್ಯದಲ್ಲಿ ಮುನ್ನುಗ್ಗಿ.ಕೌಟುಂಬಿಕವಾಗಿ ಶುಭ ಫಲ.

ಅದೃಷ್ಟ ಸಂಖ್ಯೆ: 5

ವೃಶ್ಚಿಕ: ಆಹಾರ ಕ್ರಮದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ ಇದೆ. ಅನಗತ್ಯ ಖರ್ಚುಗಳು ಹೆಚ್ಚಾಗುವ ಸಾಧ್ಯತೆ ಇದೆ. ನಿಮ್ಮ ಉದಾರ ವರ್ತನೆಯನ್ನು ಬಳಸಿ ಕೊಂಡು ಬೆರೆಯವರು ದುರುಪಯೋಗ ಮಾಡಿಕೊಳ್ಳುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 6

ಧನಸ್ಸು: ದೈಹಿಕ ಆಯಾಸವಾಗುವುದು.ಅತಿಯಾದ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ವ್ಯಕ್ತಿಗಳನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಕೆಲಸ-ಕಾರ್ಯಗಳಲ್ಲಿ ನಿಧಾನಗತಿ. ಕೌಟುಂಬಿಕವಾಗಿ ಮಿಶ್ರಫಲ. ಅದೃಷ್ಟ ಸಂಖ್ಯೆ: 3

ಮಕರ: ಆರೋಗ್ಯ ದೃಷ್ಟಿಯಿಂದ ಉತ್ತಮವಾದ ದಿನವಿದು. ಎಂದಿಗಿಂತ ಇಂದು ಉತ್ಸಾಹದಿಂದ ಇರುವಿರಿ. ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ ಸಿಗಲಿದೆ. ಪ್ರೀತಿ ಅಂಕುರವಾಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 3

ಕುಂಭ: ಭರವಸೆಯು ನಿಮ್ಮ ಕೆಲಸದಲ್ಲಿ ಸಹಾಯ ಮಾಡುವುದು. ಕುಟುಂಬದ ಸದಸ್ಯರ ಬೆಂಬಲ ದೊರೆಯಲಿದೆ. ವ್ಯಾಪಾರ-ವ್ಯವಹಾರದಲ್ಲಿ ಸಕಾರಾತ್ಮಕ ಬದಲಾವಣೆಗಳು ಕಂಡು ಬರುವುದು. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

ಮೀನ: ಪ್ರೀತಿ, ಭರವಸೆ, ನಂಬಿಕೆ, ಸಹಾನುಭೂತಿ, ಆಶಾವಾದ ಮತ್ತು ನಿಷ್ಠೆಗಳಂಥ ಧನಾತ್ಮಕ ಭಾವನೆಗಳನ್ನು ಗ್ರಹಿಸಲು ಮನಸ್ಸು ಪ್ರೋತ್ಸಾಹಿಸುವುದು. ಕಾರ್ಯದಲ್ಲಿ ಪ್ರಗತಿ ಇರಲಿದೆ. ಹಿರಿಯರ ಆಶೀರ್ವಾದ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

Ad
Ad
Nk Channel Final 21 09 2023