ಧನು ರಾಶಿ: ಬುದ್ಧಿವಂತಿಕೆಯಿಂದ ನೀವು ಹಣದ ವಂಚನೆಯಿಂದ ತಪ್ಪಿಸಿಕೊಳ್ಳುವಿರಿ. ದಿನ ನಿತ್ಯದ ಜೀವನವು ಏರುಪೇರಾಗಬಹುದು. ಇದು ಆರೋಗ್ಯದ ಮೇಲೂ ಪರಿಣಾಮ ಬೀರಬಹುದು. ವೃತ್ತಿಯ ಬಗ್ಗೆ ಗೌರವ ಇರಲಿ. ನಿಮ್ಮ ವಾದವು ಸರಿ ಇದ್ದರೂ ವ್ಯಕ್ತಪಡಿಸುವ ರೀತಿಯಿಂದ ಅದು ಭಿನ್ನವೆನಿಸಬಹುದು. ಹಳೆಯ ಸ್ನೇಹಿತರಿಂದ ನಿಮಗೆ ಸಹಾಯವು ಸಿಗುವುದು. ಅವಿವಾಹಿತರು ವಿವಾಹಕ್ಕೆ ಸಂಬಂಧಿಸಿದ ಸುದ್ದಿಯು ಬರಬಹುದು.
ಮಕರ ರಾಶಿ: ಯಾವುದೇ ಉಪಕರಣಗಳನ್ನು ಮರುಬಳಕೆಗೆ ಯೋಚಿಸುವಿರಿ. ಇಲ್ಲವಾದರೆ ಎಲ್ಲ ಕಡೆಯೂ ಇದೇ ಸ್ಥಿತಿ ಎದುರಾಗಿ ನೆಮ್ಮದಿಯನ್ನು ಕಳೆದುಕೊಳ್ಳಬೇಕಾಗಬಹುದು. ಬಹಳ ಪ್ರಯತ್ನಪೂರ್ವಕವಾಗಿ ಮಾಡಿದ ಕೆಲಸವು ವ್ಯರ್ಥವಾಗು ಸಂಭವವಿದೆ. ನಿಮ್ಮ ಮಕ್ಕಳು ಪ್ರಗತಿಯತ್ತ ಸಾಗುತ್ತಿರುವುದು ನಿಮಗೆ ಖುಷಿಯ ಸಂಗತಿಯಾಗಿದೆ. ಪಾಲುದಾರಿಕೆಯಲ್ಲಿ ಸಣ್ಣ ವಿಷಯವನ್ನೂ ಗಂಭೀರವಾಗಿ ಪರಿಹಣಿಸುವಿರಿ.
ಕುಂಭ ರಾಶಿ: ದಾಂಪತ್ಯದಲ್ಲಿ ವಿವಾದವಾಗಬಹುದು. ಬೆಳಗಿನ ಉತ್ಸಾಹವು ಸಂಜೆಯವರೆಗೂ ಇರಲಿದೆ. ಅರ್ಥವಿಲ್ಲದ ಚರ್ಚೆಗಳಲ್ಲಿ ಸಮಯವನ್ನು ನಷ್ಟ ಮಾಡಿಕೊಳ್ಳುವುದು ಬೇಡ. ನಿಮ್ಮ ಮನಸ್ಸನ್ನು ಯೋಗ್ಯರ ಜೊತೆ ಹಂಚಿಕೊಳ್ಳಿ. ವ್ಯಾಪಾರ ಮಾಡುವ ಜನರ ಜೊತೆ ಸೇರಿ ಕೆಲವು ಕೆಲಸಗಳನ್ನು ಮಾಡಲು ಅವಕಾಶವಿದೆ. ನಿಮ್ಮ ಕನಸಿಗೆ ಆಕಾರ ಸಿಕ್ಕಿದ್ದು ಖುಷಿಕೊಡುವುದು. ಸೌಂದರ್ಯಕ್ಕೆ ಹೆಚ್ಚು ಮಹತ್ತ್ವ ಕೊಡುವಿರಿ. ನೀವು ಹೇಳಿದ್ದನ್ನು ಬಂಧುಗಳು ಮಾಡಿಕೊಡುವರು.
ಮೀನ ರಾಶಿ: ನಿಮ್ಮ ವಿರುದ್ಧದ ಸಂಚು ಇಂದು ಬಯಲಾಗಬಹುದು. ಪರರ ಭಾಗ್ಯವನ್ನು ನೆನೆದು ಕೊರಗುವುದಕ್ಕಿಂತ ನಿಮ್ಮ ಇರುವ ಭಾಗ್ಯವನ್ನು ನೆನೆದು ಸಂತೋಷಪಡಿ. ತಿಳಿವಳಿಕೆ ಇಲ್ಲದವರಿಗೆ ನಿಮ್ಮ ವ್ಯವಹಾರಗಳನ್ನು ಹೇಳಬೇಡಿ. ನಿಮಗೆ ಬರಬೇಕಾದ ಹಣದ ಬಗ್ಗೆ ನಿರ್ಲಕ್ಷ್ಯ ತೋರಿದ್ದರಿಂದ ನಿಮಗೆ ನಷ್ಟವಾಗಬಹುದು. ಆಪ್ತರಿಗಾಗಿ ನೀವು ರಾಜಕೀಯಕ್ಕೆ ಸೇರುವ ಪ್ರಯತ್ನವನ್ನು ಮಾಡುವಿರಿ. ಇಂದು ಸ್ವಲ್ಪ ದೇಹಕ್ಕೂ ಮನಸ್ಸಿಗೂ ವಿಶ್ರಾಂತಿಯನ್ನು ನೀಡಿದರೆ ಒಳ್ಳೆಯದು.

