ಮಂಗಳೂರಿನ ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿನಿ, ವಿಶ್ವದ ಪ್ರತಿಷ್ಠಿತ “Rolls Royce” ಕಂಪೆನಿಯಲ್ಲಿ ಕೆಲಸ ಗಿಟ್ಟಿಸಿಕೊಂಡ ಕರ್ನಾಟಕದ ಕಿರಿಯ ವಯಸ್ಸಿನ ಮೊದಲ ಯುವತಿ ಎಂಬ ಹೆಗ್ಗಳಿಕೆಗೆ ಪಾತ್ರರಾದ “ರಿತುಪರ್ಣ” ರವರ ನಿವಾಸಕ್ಕೆ ಭೇಟಿ ನೀಡಿ NSUI ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಜಿಲ್ಲಾಧ್ಯಕ್ಷರಾದ ಸುಹಾನ್ ಆಳ್ವ ಅವರ ನೇತೃತ್ವದಲ್ಲಿ ಸನ್ಮಾನಿಸಲಾಯಿತು.

ಅತೀ ಕಿರಿಯ ವಯಸ್ಸಿನಲ್ಲಿ ತನ್ನ ಕನಸಿನಂತೆ “Rolls Royce” ಕಂಪೆನಿಯಲ್ಲಿ ಕೆಲಸ ಪಡೆಯಲು ಯಶಸ್ವಿಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಕೀರ್ತಿ ತರುವ ಮೂಲಕ ವಿದ್ಯಾರ್ಥಿ ಸಮುದಾಯಕ್ಕೂ ಪ್ರೇರಣೆಯಾಗಿದ್ದಾರೆ.

