Bengaluru 22°C
Ad

ಅಸಪ್ತರನ್ನು ಕಳೆದುಕೊಳ್ಳುವ ಭೀತಿ ಇರಲಿದೆ

ಮನೆಯ ಹಿರಿಯರ ಆರೋಗ್ಯದಲ್ಲಿ ವ್ಯತ್ಯಾಸ ಹಾಗೂ ಆತಂಕ ಇರುವುದು.

ಮೇಷ ರಾಶಿ: ಮನೆಯ ಹಿರಿಯರ ಆರೋಗ್ಯದಲ್ಲಿ ವ್ಯತ್ಯಾಸ ಹಾಗೂ ಆತಂಕ ಇರುವುದು. ಮಕ್ಕಳ‌ ಮೇಲೆ ನಿಮಗೆ ಅತಿಯಾದ ಮೋಹವು ಇರಲಿದೆ. ದಾಂಪತ್ಯದಲ್ಲಿ ನೀವು ಸಂತೋಷವಾಗಿರಲು ಹೊಸ ಆಯಾಮವನ್ನು ಕಂಡುಕೊಳ್ಳುವಿರಿ.‌ ಕುಟುಂಬವನ್ನು ಸಂತೋಷದಿಂದ ಇಡುವಿರಿ. ಅಸಪ್ತರನ್ನು ಕಳೆದುಕೊಳ್ಳುವ ಭೀತಿ ಇರಲಿದೆ. ಉದ್ಯಮಕ್ಕೆ ಸಂಬಂಧಿಸಿದಂತೆ ಆಪ್ತರ ನಡುವೆ ನಿಮ್ಮ ಸಮಾಲೋಚನೆಗಳು ನಡೆಸುವಿರಿ. ಆಮದು ವ್ಯವಹಾರವನ್ನು ನಿಮ್ಮ ನಿಯಂತ್ರಣಕ್ಕೆ ತರಲು ಸಾಧ್ಯವಾಗದು.

ವೃಷಭ ರಾಶಿ: ಅಧಿಕಾರಿಗಳ ಒತ್ತಡವೇ ನಿಮ್ಮ ಉದ್ವೇಗಕ್ಕೆ ಕಾರಣವಾಗಲಿದೆ. ಇಂದು ನಿಮಗೆ ಯಾರ ಸಹಾನುಭೂತಿಯೂ ಬೇಡವಾಗಬಹುದು. ಚಂಚಲವಾದ ಮನಸ್ಸನ್ನು ನೀವು ನಿಯಂತ್ರಿಸಲು ನಾನಾ ವಿಧವಾದ ಕಸರತ್ತು ಮಾಡುವಿರಿ. ಉದ್ಯೋಗದ ಸ್ಥಳದಲ್ಲಿ ಅಸಮಾಧಾನವಿರಲಿದ್ದು, ನೆಮ್ಮದಿಯಿಂದ ಕೆಲಸವನ್ನು ಮಾಡಲು ಕಷ್ಟವಾದೀತು. ಎಲ್ಲ ಕಾರ್ಯಗಳನ್ನೂ ಮುಗಿಸಿ ಆರಾಮಾಗಿ ಇರುವಿರಿ. ಇಂದಿನ‌ ನಿಮ್ಮ ಒತ್ತಡವನ್ನು ನಿವಾರಿಸಿಕೊಳ್ಳಲು ಏಕಾಂತಕ್ಕೆ ತೆರಳುವಿರಿ.

ಮಿಥುನ ರಾಶಿ: ಅನೇಕ ವಿಚಾರಗಳ ಕಡೆ ನಿಮ್ಮ ಗಮನವಿರುವುದು. ಹಾಗಾಗಿ ಇಂದಿನ ಕಾರ್ಯವು ಸಫಲವಾಗದು. ನಿಮ್ಮ ಬಿಡುವಿನ ದಿನದಲ್ಲಿಯೂ ಕುಟುಂಬದವರ ಬಗ್ಗೆ ಕಾಳಜಿ ಇರದು. ನೀವು ಮಾಡಬೇಕಂದು ಹೊರಟ ಕೆಲಸದಲ್ಲಿ ಜಯ ಆಗಲಿದೆ. ಸ್ತ್ರೀರಿಂದ ನಿಮಗೆ ವೃತ್ತಿಯಲ್ಲಿ ಸಹಕಾರವು ಸಿಗಲಿದೆ. ಹೊಸ ಬಂಧುಗಳ ಪರಿಚಯವು ನಿಮಗಾಗುವುದು. ಧಾರ್ಮಿಕ ವಿಚಾರದಲ್ಲಿ ಆಸಕ್ತಿ ಉಂಟಾಗಬಹುದು. ಅವಿವಾಹಿತರು ವಿವಾಹ ಚಿಂತನೆಯನ್ನು ಮನೆಯಲ್ಲಿ ಪ್ರಸ್ತಾಪಿಸುವಿರಿ.

ಕರ್ಕಾಟಕ ರಾಶಿ: ಅನ್ವೇಷಣೆಯ ಮನಃಸ್ಥಿತಿಯವರಿಗೆ ಯಾವುದಾದರೂ ಮಾರ್ಗವು ಸಿಗುವುದು. ರಾಜಕೀಯ ಪರಿವರ್ತನೆಯು ನಿಮ್ಮಲ್ಲಿ ಅಚ್ಚರಿ ತಂದೀತು. ನೀವು ಇಂದು ನಿಮಗೆ ಮಾತ್ರ ಗೊತ್ತಿರುವ ಇನ್ನೊಬ್ಬರ ರಹಸ್ಯವನ್ನು ಹೇಳುವಿರಿ. ಬಾಡಿಗೆ ಮನೆಯವರಾಗಿದ್ದರೆ ಮನೆಯನ್ನು ಬದಲಿಸುವಿರಿ. ಭೂವ್ಯವಹಾರವನ್ನು ಮಾಡುವವರಿಗೆ ಹೆಚ್ಚು ಲಾಭವು ಸಿಗಲಿದೆ. ಕಡಿಮೆಯಾಗುತ್ತಿದ್ದ ಅನಾರೋಗ್ಯವು ಪುನಃ ಕಾಣಿಸಿಕೊಳ್ಳಬಹುದು. ನಿಮ್ಮ ಇಷ್ಟದವರು ನಿಮಗೆ ವಂಚನೆ ಮಾಡುವರು.

Ad
Ad
Nk Channel Final 21 09 2023