ವಿಶ್ವಸಂಸ್ಥೆ 2007ರ ಸೆ.15 ಅನ್ನು ವಿಶ್ವ ಪ್ರಜಾಪ್ರಭುತ್ವದ ದಿನ ಎಂದು ಘೋಷಿಸಿತ್ತು. ಇದರ ಅಂಗವಾಗಿ ಅನೇಕ ದೇಶಗಳಲ್ಲಿ ಅಂದು ವಿವಿಧ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿವೆ. ಆದರೆ ಇದರ ಮೌಲ್ಯವನ್ನು ಹೆಚ್ಚು ಪ್ರಚಾರ ಮಾಡಿ ವಿಶ್ವ ಮಟ್ಟದಲ್ಲಿ ಸಾರುವ ಪ್ರಯತ್ನಕ್ಕೆ ಸರಕಾರ ಈ ಹಿಂದೆಯೇ ಕೈ ಹಾಕಿತ್ತು.

ಹೀಗಾಗಿ ಕಳೆದ ವರ್ಷ 2023 ಸೆ.15ರಂದು ರಾಜ್ಯಾದ್ಯಂತ ಸಂವಿಧಾನದ ಪ್ರಸ್ತಾವನೆಯನ್ನು ಓದುವ ಕಾರ್ಯಕ್ರಮ ನಡೆಸಲಾಗಿತ್ತು. ಇದರಲ್ಲಿ ಸುಮಾರು 2.3 ಕೋಟಿ ಭಾಗವಹಿಸಿ ಸರಕಾರಕ್ಕೆ ಆಶ್ಚರ್ಯ ಉಂಟು ಮಾಡಿದ್ದರು. ಇದರಿಂದ ಸ್ಫೂರ್ತಿ ಪಡೆದ ಸರಕಾರ ಈ ಬಾರಿ 25 ಲಕ್ಷ ಜನರು ರಾಜ್ಯದುದ್ದಕ್ಕೂ ನಿಂತು ಸಂವಿಧಾನ ಓದುವಂತೆ ಮಾಡುತ್ತಿದೆ. ಹೀಗಾಗಿ ಇದರಲ್ಲಿ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಸುಮಾರು 3 ಕೋಟಿ ಜನರು ಭಾಗವಹಿಸುವ ನಿರೀಕ್ಷೆಯಿದ್ದು, ಇದರಿಂದ ಇಡೀ ವಿಶ್ವ ಕರ್ನಾಕದ ಕಡೆ ನೋಡುವಂತಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

ಪ್ರಜಾಪ್ರಭುತ್ವದ ಅಡಿಗಲ್ಲುಗಳಾದ ನ್ಯಾಯ, ಸ್ವಾಂತಂತ್ರ್ಯ, ಸಮತೆ ಮತ್ತು ಬಂಧುತ್ವ ಭಾರತೀಯ ಸಂವಿಧಾನದಲ್ಲಿ ಅಳವಡಿಸಿದ ಸಂವಿಧಾನ ಕರ್ತೃ ಭಾರತೀಯರ ಜೀವನದ ತತ್ವಗಳೆಂದು ಕರೆದಿದ್ದಾರೆ. ಪ್ರಜಾಪ್ರಭುತ್ವವು ಕಾನೂನುಗಳು, ಕಾರ್ಯನೀತಿಗಳು, ನಾಯಕತ್ವ ಮತ್ತು ಸರಕಾರದ ಯೋಜನೆಗಳು ಮತ್ತಿತರ ನಾಗರಿಕ ಆಡಳಿತ ವ್ಯವಸ್ಥೆಯನ್ನು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಜನತೆಯೇ ನಿರ್ಧರಿಸುವ ಸರಕಾರದ ಒಂದು ವ್ಯವಸ್ಥೆಯಾಗಿದೆ. ಸಂಸದೀಯ ಪ್ರಜಾಪ್ರಭುತ್ವದಲ್ಲಿ ಈ ಮಾಡ್ಯೂಲ್‌ಗಳ ಅನುಪಸ್ಥಿತಿಯು ಪ್ರಜಾಪ್ರಭುತ್ವ ವಿರೋಧಿ ವಿದ್ಯಮಾನವನ್ನು ಪ್ರತಿನಿಧಿಸುತ್ತದೆ.

ವಿಶ್ವ ಸಂಸ್ಥೆಯು ಸೆಪ್ಟಂಬರ್ 15ರಂದು ಅಂತರ್‌ರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ 2007ರಲ್ಲಿ ಸಾಮಾನ್ಯ ಸಭೆಯಲ್ಲಿ ಅಂಗೀಕರಿಸಿದ್ದು, ಎಲ್ಲಾ ಸದಸ್ಯ ರಾಷ್ಟ್ರಗಳು ಈ ದಿನವನ್ನು ಆಚರಿಸುತ್ತವೆ. ಈ ಸಭೆಯು ರಾಜ್ಯಗಳ ನಡುವೆ ಪ್ರಜಾಪ್ರಭುತ್ವವನ್ನು ಉತ್ತೇಜಿಸುವ ಮತ್ತು ಬಲಪಡಿಸುವ ಉದ್ದೇಶದಿಂದ ಇದನ್ನು ರಚಿಸಿದೆ.

ಪ್ರಜಾಪ್ರಭುತ್ವದ ಪ್ರಗತಿಯು ಮಾನವ ಇತಿಹಾಸದಲ್ಲಿ ಅತ್ಯಂತ ಪ್ರಶಂಸನೀಯ ಪ್ರಸಂಗಗಳಲ್ಲೊಂದು. ನಿಜವಾದ ಪ್ರಜಾಪ್ರಭುತ್ವದ ಅಭಿವೃದ್ಧಿಯು ಎಲ್ಲಾ ಜನರ ಒಳಗೊಳ್ಳುವಿಕೆಗೆ ಅಗತ್ಯವಾಗಿದೆ.

ಇದು ಸಂಸತ್ತಿನ ಕಾರ್ಯವನ್ನು ಒತ್ತಿಹೇಳಲು ಮತ್ತು ನ್ಯಾಯ, ಶಾಂತಿ, ಸಮಾನತೆ ಮತ್ತು ನ್ಯಾಯಕ್ಕಾಗಿ ಅವಕಾಶಗಳ ಪ್ರಗತಿಪರ ವಿಸ್ತರಣೆ, ಜನಾಂಗ, ಲಿಂಗ, ಲೈಂಗಿಕ ದೃಷ್ಟಿಕೋನ, ಲಿಂಗ ಅಭಿವ್ಯಕ್ತಿ, ಧರ್ಮ, ಸಾಮರ್ಥ್ಯ, ಇತರ ಸಂರಕ್ಷಿತ ಗುಣಲಕ್ಷಣಗಳಿಂದ ಸ್ವತಂತ್ರವಾಗಿ, ಪ್ರಜಾಪ್ರಭುತ್ವ ಸರಕಾರಗಳು ತನ್ನ ಅಭಿವೃದ್ಧಿ ಮತ್ತು ನಾಗರಿಕರ ಹಕ್ಕುಗಳನ್ನು ರಕ್ಷಿಸುತ್ತದೆ ಎಂದು ಖಾತರಿಪಡಿಸಬೇಕು.

ಇಂದು ಬೆಳಗ್ಗೆ 9 ಗಂಟೆ ಗೆ ಸಿಎಂ ಸಿದ್ದರಾಮಯ್ಯ ಅವರು ವಿಧಾನಸೌಧದ ಮುಂಭಾಗದಲ್ಲಿ ಸಂವಿಧಾನದ ಪೀಠಿಕೆ ಓದುವ ಮೂಲಕ ಚಾಲನೆ ನೀಡಿದರು. ಆ ನಂತರ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲೆಗಳ ಸಮಸ್ತ ಜನರು ಸಂವಿಧಾನ ಪೀಠಿಕೆ ಓದಿ ಮಾನವ ಸರಪಳಿ ನಿರ್ಮಿಸುತ್ತಾರೆ. ಆ ಪ್ರದೇಶದಲ್ಲೇ ಗಿಡ ನೆಡುತ್ತಾರೆ. ಹೀಗಾಗಿ ಪ್ರತಿ ಜಿಲ್ಲೆ ತಾಲೂಕುಗಳಲ್ಲೂ ಕಾರ್ಯಕ್ರಮ ನಡೆಯಲಿದ್ದು, ದಕ್ಷಿಣ ಕನ್ನಡದಲ್ಲಿ ಕೆಲವರು ಸಮುದ್ರದಲ್ಲೇ ನಿಂತು ಮನವ ಸರಪಳಿ ರಚಿಸಿದ್ದಾರೆ.