Bengaluru 23°C
Ad

ಜುಲೈ 1ರಂದೇ “ರಾಷ್ಟ್ರೀಯ ವೈದ್ಯರ ದಿನ” ಆಚರಿಸುವ ಉದ್ದೇಶವೇನು?

Doctors

ಪ್ರತಿ ವರ್ಷ ಜುಲೈ 1 ರಂದು ರಾಷ್ಟ್ರೀಯ ವೈದ್ಯರ ದಿನವನ್ನು ಆಚರಣೆ ಮಾಡಲಾಗುತ್ತದೆ. ಮನುಷ್ಯನಿಗೆ ಆರೋಗ್ಯವೇ ಭಾಗ್ಯ ಎಂಬುದು ಸರ್ವಕಾಲಿಕ ಮಾತು. ಇದು ಅಷ್ಟೇ ಸತ್ಯವೂ ಕೂಡ. ಆರೋಗ್ಯವನ್ನು ರಕ್ಷಿಸುವುದು, ಅನಾರೋಗ್ಯಕ್ಕೆ ಮದ್ದು ನೀಡಿ, ಗುಣ ಪಡಿಸುವುದು ವೈದ್ಯರ ಕರ್ತವ್ಯವಾಗಿದೆ.

Ad
300x250 2

ವೈದ್ಯೋ ನಾರಾಯಾಣ ಹರಿ ಎನ್ನುವುದು ಅದಕ್ಕೆ ಸಾಕ್ಷಿಯಾಗಿದೆ. ಅದಕ್ಕಾಗಿ ವೈದ್ಯರನ್ನ ದೇವರಿಗೆ ಹೊಲಿಸಲಾಗುತ್ತದೆ. ಈ ಪದ್ಧತಿಯೂ ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಅನಾರೋಗ್ಯಕ್ಕೆ ತುತ್ತಾದ ಪ್ರತಿಯೋಬ್ಬ ರೋಗಿಯನ್ನು ಸರಿಯಾದ ಚಿಕಿತ್ಸೆ ನೀಡುವ ಮೂಲಕ ಗುಣಪಡಿಸಿ, ಅವನಿಗೆ ಪುನರ್ಜನ್ಮ ನೀಡುವುದು ಪ್ರತಿಯೊಬ್ಬ ವೈದ್ಯರ ಕಾಯಕವಾದರೆ. ಅವರಿಗೆ ಗೌರವ ಸಲ್ಲಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಇಂತಹ ಪುನರ್ಜನ್ಮ ನೀಡುವ ವೈದ್ಯರಿಗೆ ವಿಶೇಷ ಗೌರವ ನೀಡುವ ಸಲುವಾಗಿ ಪ್ರತಿ ವರ್ಷ ಜುಲೈ 1 ರಂದು ರಾಷ್ಟ್ರೀಯ ವೈದ್ಯರ ದಿನವನ್ನ ಆಚರಿಸಲಾಗುತ್ತದೆ.
Doct

ರಾಷ್ಟ್ರೀಯ ವೈದ್ಯರ ದಿನದ ಇತಿಹಾಸ:
ವೈದ್ಯರ ದಿನವನ್ನು ಭಾರತದಲ್ಲಿ 1991 ರಲ್ಲಿ ಮೊದಲ ಬಾರಿಗೆ ಆಚರಿಸಲಾಯಿತು. ಪಶ್ಚಿಮ ಬಂಗಾಳದ ಎರಡನೇ ಮುಖ್ಯಮಂತ್ರಿ ಹಾಗೂ ಶ್ರೇಷ್ಠ ವೈದ್ಯ ಬಿಧನ್ ಚಂದ್ರ ರಾಯ್ ನೀಡಿರುವ ಕೊಡುಗೆ ಪರಿಗಣಿಸಿ, ಅವರ ಜ್ಞಾಪಕಾರ್ಥವಾಗಿ ಪ್ರತಿ ವರ್ಷ ಜುಲೈ 1 ರಂದು ರಾಷ್ಟ್ರೀಯ ವೈದ್ಯ ದಿನವಾಗಿ ಆಚರಿಸಲು ತೀರ್ಮಾನಿಸಲಾಯಿತು. ಬಿಧನ್ ಚಂದ್ರ ರಾಯ್ ಅವರು ಮೆಡಿಕಲ್ ಕೌನ್ಸಿಲ್ ಆಫ್‌ ಇಂಡಿಯಾ ಹಾಗೂ ಇಂಡಿಯನ್ ಮೆಡಿಕಲ್‌ ಅಸೋಸಿಯೇಷನ್ ಸ್ಥಾಪನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ಧರು. ಈ ಹಿನ್ನಲೆಯಲ್ಲಿ ಅವರ ಜನ್ಮ ದಿನ ಮತ್ತು ಪುಣ್ಯಸ್ಮರಣೆ ದಿನವನ್ನೇ ರಾಷ್ಟ್ರೀಯ ವೈದ್ಯಕೀಯ ದಿನ ಎಂದು ಘೋಷಿಸಲಾಯಿತು.

ಡಾ. ಬಿಧನ್ ಚಂದ್ರ ರಾಯ್ ಪಶ್ಚಿಮ ಬಂಗಾಳದ ಮಾಜಿ ಮುಖ್ಯ ಮಂತ್ರಿ, ಹಾಗೂ ಶೇಷ್ಠ ವೈದ್ಯರು. ಡಾ. ಬಿಧನ್ ಚಂದ್ರ ರಾಯ್ ಅವರು ಜುಲೈ 1, 1882 ರಂದು ಪಶ್ಚಿಮ ಬಂಗಾಳದಲ್ಲಿ ಜನಿಸಿದರು. ಇವರು ಜುಲೈ 1,1962 ರಲ್ಲಿ ಮರಣ ಹೊಂದಿದರು. ಬಿ ಸಿ ರಾಯ್ ಅವರು ವೈದ್ಯಕೀಯ ರಂಗಕ್ಕೆ ಅಮೋಘ ಕೋಡುಗೆಯನ್ನು ನೀಡಿದ್ದಾರೆ. ವೈದ್ಯಕೀಯ ವಿಜ್ಞಾನ ಕ್ಷೇತ್ರದಲ್ಲಿ ನೀಡಿದ ಕೊಡುಗೆಗಾಗಿ ಇವರಿಗೆ ಫೆಬ್ರವರಿ 4, 1961 ರಲ್ಲಿ ಭಾರತ ರತ್ನ ಪ್ರಶಸ್ತಿಯನ್ನು ನೀಡಲಾಯಿತು.

ಡಾ. ಬಿಧನ್ ಚಂದ್ರ ರಾಯ್ ಅವರ ಜನ್ಮ ಮತ್ತು ಮರಣ ದಿನ ಜುಲೈ 1, ಆದ್ದರಿಂದ ಈ ದಿನವನ್ನು, ಅವರ ಗೌರವಾರ್ಥ ವೈದ್ಯರ ದಿನವಾಗಿ ಆಚರಿಸಲಾಗುತ್ತಿದೆ. ರಾಷ್ಟ್ರೀಯ ವೈದ್ಯರ ದಿನದಂದು, ವೈದ್ಯರ ಮಹತ್ವದ ಬಗ್ಗೆ ಜನರಲ್ಲಿ ಅರಿವು ಮೂಡಿಸಲಾಗುತ್ತದೆ. ಅಲ್ಲದೇ ನಮ್ಮ ಜೀವನಕ್ಕೆ ವೈದ್ಯರು ನೀಡಿದ ಕೊಡುಗೆಯನ್ನು ಸ್ಮರಿಸಿ ಪ್ರಶಂಸಿಸಲಾಗುತ್ತದೆ. ಈ ವಿಶೇಷ ದಿನವನ್ನು ಜನರ ಸೇವೆಗಾಗಿ ಪ್ರಾಣವನ್ನೇ ಪಣಕ್ಕಿಟ್ಟಿರುವ ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರಿಗೆ ಸಮರ್ಪಿಸಲಾಗುತ್ತದೆ.

ರಾಷ್ಟ್ರೀಯ ವೈದ್ಯರ ದಿನದ ಮಹತ್ವ:
ರಾಷ್ಟ್ರೀಯ ವೈದ್ಯರ ದಿನವು ವೈದ್ಯರು ಮತ್ತು ಆರೋಗ್ಯ ವೃತ್ತಿಪರರಿಗೆ ಅವರ ದಣಿವರಿಯದ ಸೇವೆ, ಬದ್ಧತೆ ಮತ್ತು ಪ್ರತಿಯೊಬ್ಬರೂ ಉತ್ತಮ ಜೀವನವನ್ನು ನಡೆಸುವಂತೆ ಖಚಿತಪಡಿಸಿಕೊಳ್ಳುವಲ್ಲಿ ನಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಲು ವಿಶೇಷ ಸಂದರ್ಭವಾಗಿದೆ. ಇದು ಆರೋಗ್ಯ ವ್ಯವಸ್ಥೆಯನ್ನು ಸುಧಾರಿಸಲು ಮತ್ತು ರೋಗಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಸಂಶೋಧನೆಗಳನ್ನು ನಡೆಸುವ ಬಗ್ಗೆ ಚರ್ಚೆಗೆ ಜಾಗವನ್ನು ಸೃಷ್ಟಿಸುತ್ತದೆ. ಈ ದಿನದಂದು ಉಚಿತ ಆರೋಗ್ಯ ತಪಾಸಣಾ ಶಿಬಿರಗಳು, ಸಮ್ಮೇಳನಗಳು, ವಿಚಾರ ಸಂಕಿರಣಗಳು, ಅಭಿನಂದನಾ ಸಮಾರಂಭಗಳು ಮುಂತಾದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

Ad
Ad
Nk Channel Final 21 09 2023
Ad