News Karnataka Kannada
Tuesday, April 23 2024
Cricket
ಕ್ರೀಡೆ

ಆಟಗಾರರು ವಾಪಸಾಗಲು ತಾವೇ ವ್ಯವಸ್ಥೆ ಮಾಡಿಕೊಳ್ಳಬೇಕು: ಆಸ್ಟ್ರೇಲಿಯಾ

Photo Credit :

ಆಟಗಾರರು ವಾಪಸಾಗಲು ತಾವೇ ವ್ಯವಸ್ಥೆ ಮಾಡಿಕೊಳ್ಳಬೇಕು: ಆಸ್ಟ್ರೇಲಿಯಾ

ಮೆಲ್ಬರ್ನ್: ಭಾರತದಲ್ಲಿ ಕೋವಿಡ್-19 ಪರಿಸ್ಥಿತಿ ಉಲ್ಬಣಿಸಿರುವ ಕಾರಣ ಮೇ 15ರವರೆಗೆ ಅಲ್ಲಿಂದ ಬರುವ ಎಲ್ಲ ಪ್ರಯಾಣಿಕ ವಿಮಾನಗಳನ್ನು ನಿಷೇಧಿಸಿ ಆಸ್ಟ್ರೇಲಿಯಾ ಸರ್ಕಾರ ಆದೇಶ ಹೊರಡಿಸಿದೆ. ಹೀಗಾಗಿ ಐಪಿಎಲ್ ಟೂರ್ನಿಯಲ್ಲಿ ಭಾಗವಹಿಸುತ್ತಿರುವ ಆಟಗಾರರು ತವರಿಗೆ ಮರಳಲು ತಾವೇ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಹೇಳಿದ್ದಾರೆ.

ಕ್ರಿಕೆಟಿಗರು ಖಾಸಗಿಯಾಗಿ ಪ್ರಯಾಣಿಸಿದ್ದು, ಈ ಆಟ ಆಸ್ಟ್ರೇಲಿಯಾ ತಂಡದ ಪ್ರವಾಸದ ಭಾಗವಲ್ಲ. ಅವರು ಅವರದ್ದೇ ಆದ ವ್ಯವಸ್ಥೆಯಲ್ಲಿದ್ದಾರೆ ಮತ್ತು ಅದರ ಭಾಗಿಯಾಗಿದ್ದಾರೆ. ಹೀಗಾಗಿ ವಾಪಸಾಗಲು ಅವರೇ ವ್ಯವಸ್ಥೆ ಮಾಡಿಕೊಳ್ಳಬೇಕಾಗುತ್ತದೆ ಎಂದು ಮಾರಿಸನ್ ಹೇಳಿರುವುದಾಗಿ ‘ದಿ ಗಾರ್ಡಿಯನ್’ ವರದಿ ಮಾಡಿದೆ.

ಐಪಿಎಲ್‌ ಟೂರ್ನಿ ಮುಕ್ತಾಯವಾದ ಬಳಿಕ ಆಟಗಾರರು ಆಸ್ಟ್ರೇಲಿಯಾಕ್ಕೆ ತೆರಳಲು ವಿಮಾನದ ವ್ಯವಸ್ಥೆ ಮಾಡಬೇಕೆಂದು ಮುಂಬೈ ಇಂಡಿಯನ್ಸ್ ಪರ ಆಡುತ್ತಿರುವ ಆಸ್ಟ್ರೇಲಿಯಾ ಆಟಗಾರ ಕ್ರಿಸ್ ಲಿನ್ ಇತ್ತೀಚೆಗೆ ‘ಕ್ರಿಕೆಟ್ ಆಸ್ಟ್ರೇಲಿಯಾ’ಕ್ಕೆ ಮನವಿ ಮಾಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು