News Karnataka Kannada
Thursday, April 18 2024
Cricket
ಕ್ರೀಡೆ

ಐಪಿಎಲ್‌: ಮುಂಬೈ ಇಂಡಿಯನ್ಸ್‌ಗೆ ಮೊದಲ ಗೆಲುವು

Photo Credit :

ಐಪಿಎಲ್‌: ಮುಂಬೈ ಇಂಡಿಯನ್ಸ್‌ಗೆ ಮೊದಲ ಗೆಲುವು

ಅಬುದಾಬಿ: ಇಲ್ಲಿನ ಶೇಖ್ ಝಾಯೆದ್ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಐಪಿಎಲ್ 13 ಆವೃತ್ತಿಯ ಪಂದ್ಯದಲ್ಲಿ ರೋಹಿತ್ ಶರ್ಮಾ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ 49 ರನ್ ಗಳಿಂದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಮಣಿಸಿದೆ.

ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡ ಮುಂಬೈ ಇಂಡಿಯನ್ಸ್ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 195 ರನ್ ಗಳಿಸಿ ಎದುರಾಳಿಗೆ 196 ರನ್ ಟಾರ್ಗೆಟ್ ನೀಡಿತು.

ನಾಯಕ ರೋಹಿತ್ ಶರ್ಮಾ 54 ಎಸೆತಗಳಲ್ಲಿ 6 ಸಿಕ್ಸರ್ ಸೇರಿದಂತೆ 80 ರನ್ ಸಿಡಿಸಿದರು. ಸೂರ್ಯ ಕುಮಾರ್ ಯಾದವ್ 47 ರನ್ ಕಲೆಹಾಕಿದರು.

ಬೃಹತ್ ಗುರಿ ಬೆನ್ನತ್ತಿದ್ದ ಕೆಕೆಆರ್ 9 ವಿಕೆಟ್ ನಷ್ಟಕ್ಕೆ 146 ರನ್ ಗಳಿಸಲಷ್ಟೇ ಶಕ್ತವಾಯಿತು. ಇದರಿಂದಾಗಿ ಮುಂಬೈ ಇಂಡಿಯನ್ಸ್ ಗೆಲುವಿನ ನಗೆ ಬೀರಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು