ಕ್ರಿಕೆಟ್ : ಇಂಗ್ಲೆಂಡ್ ಕ್ರಿಕೆಟ್ ತಂಡದ ಆಲ್ ರೌಂಡರ್ ಮೋಯಿನ್ ಅಲಿ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ ಗೆ ದಿಢೀರ್ ವಿದಾಯ ಘೋಷಿಸಿದ್ದಾರೆ.
ಟೆಸ್ಟ್ ಕ್ರಿಕೆಟ್ನಿಂದ ಅಲಿ ನಿವೃತ್ತಿ ಪಡೆದಿರುವ ಬಗ್ಗೆ ಇಂದು ಇಂಗ್ಲೆಂಡ್ ಕ್ರಿಕೆಟ್ ಮಂಡಳಿ (ECB News) ದೃಢಪಡಿಸಿದೆ. ಮುಂಬರುವ ಐಸಿಸಿ ವಿಶ್ವ ಟಿ-20ಗೆ ಹೆಚ್ಚಿನ ಗಮನ ಕೊಡುವ ಸಲುವಾಗಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದ್ದು, ಇಂಗ್ಲೆಂಡ್ ತಂಡದ ಮುಖ್ಯ ಕೋಚ್ ಕ್ರಿಸ್ ಸಿಲ್ವರ್ವುಡ್ ಮತ್ತು ನಾಯಕ ಜೋ ರೂಟ್ಗೆ ಕಳೆದ ಒಂದು ವಾರದ ಹಿಂದೆಯೇ ಈ ವಿಷಯವನ್ನು ಅಲಿ ತಿಳಿಸಿದ್ದರು.
ಪ್ರಸ್ತುತ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ಪರ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಆಡುತ್ತಿರುವ 34 ವರ್ಷದ ಮೋಯಿನ್ ಅಲಿ, 64 ಟೆಸ್ಟ್ ಪಂದ್ಯಗಳಲ್ಲಿ ಆಡಿದ್ದಾರೆ. 3,000 ರನ್ ಗಳಿಸಿರುವ ಅವರು ಟೆಸ್ಟ್ನಲ್ಲಿ 200 ವಿಕೆಟ್ಗಳನ್ನು ಪಡೆದಿದ್ದಾರೆ.
2014ರಲ್ಲಿ ಇಂಗ್ಲೆಂಡ್ ಪರ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದ ಮೋಯಿನ್ ಅಲಿ, 5 ಟೆಸ್ಟ್ನಲ್ಲಿ ಶತಕ ಸಿಡಿಸಿದ್ದಾರೆ. 195 ವಿಕೆಟ್ಗಳನ್ನು ಉರುಳಿಸಿದ್ದಾರೆ.