Categories: ಕ್ರೀಡೆ

ಅಫ್ಘಾನಿಸ್ತಾನ ಕೇವಲ 109ಕ್ಕೆ ಆಲೌಟ್

ಬೆಂಗಳೂರು: ಭಾರತ ವಿರುದ್ಧದ ಚೊಚ್ಚಲ ಟೆಸ್ಟ್ ನಲ್ಲಿ ಅಫ್ಘಾನಿಸ್ತಾನ ಮೊದಲ ಇನ್ನಿಂಗ್ಸ್ ನಲ್ಲಿ ಕೇವಲ 109 ರನ್ ಗಳಿಗೆ ಆಲೌಟ್ ಆಗಿ, ಫಾಲೋಆನ್ ಗೆ ಗುರಿಯಾಗಿದೆ.

ಭಾರತ ಮೊದಲ ಇನ್ನಿಂಗ್ಸ್ ನಲ್ಲಿ 474 ರನ್ ಮಾಡಿ ಆಲೌಟ್ ಆಗಿತ್ತು. ಇದಕ್ಕೆ ಉತ್ತರಿಸಿದ ಅಫ್ಘಾನಿಸ್ತಾನ ಸ್ಪಿನ್ನರ್ ಗಳ ದಾಳಿಗೆ ತತ್ತರಿಸಿ ಕೇವಲ 109 ರನ್ ಗಳಿಗೆ ಆಲೌಟ್ ಆಗಿದ್ದು, ಭಾರತವು ಫಾಲೋ ಆನ್ ವಿಧಿಸಿದೆ.

ಭಾರತದ ಸ್ಪಿನ್ನರ್ ಗಳಾದ ರವಿಚಂದ್ರನ್ ಅಶ್ವಿನ್ ಮತ್ತು ರವೀಂದ್ರ ಜಡೇಜಾ ಅಫ್ಘಾನಿಸ್ತಾನ ಬ್ಯಾಟ್ಸ್ ಮೆನ್ ಗಳನ್ನು ಕ್ರೀಸಿನಲ್ಲಿ ನೆಲೆಯೂರದಂತೆ ಮಾಡಿದರು.

ಅಶ್ವಿನ್ 27 ರನ್ ಗಳಿಗೆ ನಾಲ್ಕು ವಿಕೆಟ್, ಜಡೇಜಾ 18 ರನ್ ಗಳಿಗೆ 2, ಇಶಾಂತ್ ಶರ್ಮಾ ಎರಡು, ಉಮೇಶ್ ಯಾದವ್ ಒಂದು ವಿಕೆಟ್ ಪಡೆದರು.

Desk

Recent Posts

ಹಿರಿಯಡ್ಕ: ಕಾಲೇಜಿಗೆ ಹೋದ ಯುವತಿ ನಾಪತ್ತೆ

ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ (20) ಎಂಬ ಯುವತಿಯು ಏಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

6 mins ago

ಕೆಸರು ಗದ್ದೆಯಾದ ತಾಲೂಕು ಆಡಳಿತ ಸೌಧ: ಕೆಲಸಕ್ಕಾಗಿ ಬಂದ ಸಾರ್ವಜನಿಕರ ಪರದಾಟ

ಅಫಜಲಪುರ ತಾಲೂಕು ಆಡಳಿತ ಸೌಧ ಅಕ್ಷರಶಃ ಕೆಸರು ಗದ್ದೆಯಾಗಿದೆ. ದಿನಾಲು ಸಾವಿರಾರು ಜನರು ತಹಶೀಲ್ದಾರ ಕಚೇರಿಗೆ ತಮ್ಮ ಕೆಲಸಗಳಿಗೆ ಬಂದು…

20 mins ago

ಮರಾಠಿ ಭಾಷೆಯಲ್ಲಿ ಕರಾವಳಿಯ ಗಂಡುಕಲೆ ಯಕ್ಷಗಾನ ಅನಾವರಣ

ಯಕ್ಷಗಾನದ ಹಿರಿಮೆ ಇದೀಗ ಗಡಿದಾಟಿ ಮಹಾರಾಷ್ಟ್ರದಲ್ಲೂ ಸದ್ದು ಮಾಡಿದೆ. ಸಂಪೂರ್ಣ ಮರಾಠಿ ಭಾಷೆಯಲ್ಲಿ ನಡೆದ ಅಪರೂಪದ ಯಕ್ಷಗಾನ ಮಹಾರಾಷ್ಟ್ರ ಪ್ರೇಕ್ಷಕರ…

34 mins ago

ಪುಟಾಣಿ ಕಲಾವಿದೆಯ ಕಲಾಸಿರಿಯ ಅನಾವರಣ: ಬಾಲಕಿಯ ಅದ್ಭುತ ಪ್ರದರ್ಶನಕ್ಕೆ ವ್ಯಾಪಕ ಮೆಚ್ಚುಗೆ

ಪುಟಾಣಿ ಕಲಾವಿದೆ ಹತ್ತು ವರ್ಷದ ಕುಮಾರಿ ಗಂಗಾ ಶಶಿಧರ್ ಬಳಗದ ವಯೋಲಿನ್ ವಾದನ ಕಛೇರಿ ಕಾರ್ಯಕ್ರಮ ಉಡುಪಿಯ ಶ್ರೀ ಕೃಷ್ಣಮಠದ…

37 mins ago

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಘೋಷಣೆ: ಸಿಎಂಗೆ ಕೆಯುಡಬ್ಲ್ಯುಜೆ ವತಿಯಿಂದ ಅಭಿನಂದನೆ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬಹುದಿನದ ಬೇಡಿಕೆಯಾಗಿದ್ದ ಗ್ರಾಮೀಣ ಪತ್ರಕರ್ತರರಿಗೆ ಬಸ್ ಪಾಸ್ ನೀಡುವ ಸಂಬಂಧ ಇತ್ತಿಚೆಗೆ ದಾವಣಗೆರೆಯಲ್ಲಿ ನಡೆದ…

49 mins ago

ರಾಹುಲ್ ಗಾಂಧಿಗೆ 1000 ರೂ. ದಂಡ ವಿಧಿಸಿದ ಜಾರ್ಖಂಡ್ ಹೈಕೋರ್ಟ್

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿ…

51 mins ago