News Karnataka Kannada
Tuesday, April 30 2024
ಕ್ರೀಡೆ

ಅಫ್ಘಾನಿಸ್ತಾನ ಕ್ರಿಕೆಟ್ ತಂಡದ ಟಿ 20 ನಾಯಕರಾಗಿ ಆಲ್ ರೌಂಡರ್ ಮೊಹಮ್ಮದ್ ನಬಿ ಆಯ್ಕೆ

Cricket Afghan
Photo Credit :

ಕಾಬೂಲ್‌: ಅಫ್ಘಾನಿಸ್ತಾನ ಕ್ರಿಕೆಟ್ ತಂಡದ ಟಿ 20 ನಾಯಕರಾಗಿ ಆಲ್ ರೌಂಡರ್ ಮೊಹಮ್ಮದ್ ನಬಿ ಅವರು ಆಯ್ಕೆಗೊಂಡಿದ್ದಾರೆ. ಮೊಹಮ್ಮದ್ ನಬಿ ಟ್ವಿಟರ್ ಮೂಲಕ ಈ ವಿಷಯ ತಿಳಿಸಿದ್ದಾರೆ. ಈ ನಿರ್ಣಾಯಕ ಸಮಯದಲ್ಲಿ ಟಿ20 ಮಾದರಿಯಲ್ಲಿ ರಾಷ್ಟ್ರೀಯ ಕ್ರಿಕೆಟ್ ತಂಡದ ನಾಯಕತ್ವ ವಹಿಸಬೇಕೆಂದು ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿಯ ನಿರ್ಧಾರವನ್ನು ಗೌರವಿಸುತ್ತೇನೆ. ಅಲ್ಲಾಹನ ಕೃಪೆಯಿಂದ ಟಿ20 ವಿಶ್ವಕಪ್ ನಲ್ಲಿ ದೇಶ ಹೆಮ್ಮೆ ಪಡುವ ರೀತಿ ಪ್ರದರ್ಶನ ನೀಡಲಿದ್ದೇವೆ ಎಂದು ನಬಿ ಟ್ವೀಟ್ ಮಾಡಿದ್ದಾರೆ.

ಟಿ 20 ವಿಶ್ವಕಪ್‌ಗಾಗಿ ಆಫ್ಘಾನಿಸ್ತಾನ ತಂಡ ಪ್ರಕಟಿಸಿದ ನಂತರ ರಶೀದ್ ಖಾನ್ ಅಫ್ಘಾನಿಸ್ತಾನ ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದರು. ಟಿ20 ವಿಶ್ವಕಪ್ ಟೂರ್ನಿಗೆ ತಂಡವನ್ನು ಆಯ್ಕೆ ಮಾಡುವ ಪ್ರಕ್ರಿಯೆಯಲ್ಲಿ ಅಫ್ಗಾನಿಸ್ತಾನ ಕ್ರಿಕೆಟ್ ತಂಡದ ನಾಯಕನಾದ ನನ್ನನ್ನು ಅಫ್ಘಾನಿಸ್ತಾನ ಕ್ರಿಕೆಟ್ ಬೋರ್ಡ್ ಪರಿಗಣಿಸಬೇಕಿತ್ತು, ಆದರೆ ನನಗೆ ಯಾವುದೇ ಮಾಹಿತಿಯನ್ನು ನೀಡದೇ ಇಡೀ ತಂಡವನ್ನು ಅಫ್ಘಾನಿಸ್ತಾನ ಕ್ರಿಕೆಟ್ ಬೋರ್ಡ್ ಆಯ್ಕೆ ಮಾಡಿ ಘೋಷಣೆ ಮಾಡಿದ್ದು ಮನಸ್ಸಿಗೆ ಬೇಸರ ತಂದಿದೆ. ಹೀಗಾಗಿ ನಾನು ಅಫ್ಘಾನಿಸ್ತಾನ ಟಿ ಟ್ವೆಂಟಿ ತಂಡದ ನಾಯಕ ಸ್ಥಾನದಿಂದ ತಕ್ಷಣವೇ ಕೆಳಗಿಳಿಯುತ್ತಿದ್ದೇನೆ ಎಂದು ರಶೀದ್ ಖಾನ್ ಟ್ವೀಟ್ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು