ಟೋಕಿಯೊ: ಇಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಶೂಟಿಂಗ್ ಸ್ಪರ್ಧೆಯಲ್ಲಿ ಎರಡು ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿರುವ ಭಾರತದ ಶೂಟರ್ ಅವನಿ ಲೇಖರಾ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿವೆ.
ಪ್ಯಾರಾಂಪಿಕ್ಸ್ ಇತಿಹಾಸದಲ್ಲೇ ಎರಡು ಪದಕ ಗೆದ್ದ ಭಾರತದ ಮೊದಲ ಮಹಿಳಾ ಕ್ರೀಡಾಪಟು ಎಂಬ ಕೀರ್ತಿಗೆ ಅವನಿ ಲೇಖರಾ ಭಾಜನರಾಗಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ ಕೋವಿಂದ್ ಸೇರಿದಂತೆ ಅನೇಕ ಗಣ್ಯರು 19 ವರ್ಷದ ಅವನಿ ಸಾಧನೆಯನ್ನು ಕೊಂಡಾಡಿದ್ದಾರೆ.
ಮಹಿಳೆಯರ 10 ಮೀಟರ್ ಏರ್ ರೈಫಲ್ ಸ್ಟ್ಯಾಂಡಿಂಗ್ ಎಸ್ಎಚ್1 ವಿಭಾಗದಲ್ಲಿ ಚಿನ್ನ ಗೆದ್ದಿರುವ ಅವನಿ ಲೇಖರಾ, ಮಹಿಳೆಯರ 50 ಮೀಟರ್ ರೈಫಲ್ 3 ಪೊಸಿಷನ್ ಎಸ್ಎಚ್1 ವಿಭಾಗದಲ್ಲೂ ಕಂಚಿನ ಪದಕ ಗೆದ್ದಿದ್ದಾರೆ.