ನವದೆಹಲಿ: ‘ಐಸಿಸಿ ತಿಂಗಳ ಆಟಗಾರ’ ಪ್ರಶಸ್ತಿಯನ್ನು ಈ ಬಾರಿ(ಫೆಬ್ರವರಿ ತಿಂಗಳ ಪ್ರಶಸ್ತಿ) ಟೀಂ ಇಂಡಿಯಾ ಹಿರಿಯ ಆಫ್ ಸ್ಪಿನ್ನರ್ ಆರ್ ಅಶ್ವಿನ್ ಅವರು ಪಡೆದುಕೊಂಡಿದ್ದಾರೆ.
ಅಂತರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ(ಐಸಿಸಿ) ಪ್ರತಿ ತಿಂಗಳು ಪ್ರತಿಭಾನ್ವಿತ ಆಟಗಾರರನ್ನು ಗುರುತಿಸಿ ಗೌರವಿಸುವ ಪ್ರಶಸ್ತಿ ಇದಾಗಿದ್ದು, ಫೆಬ್ರವರಿ ತಿಂಗಳ ಆಟಗಾರ ಪ್ರಶಸ್ತಿಗಾಗಿ ಆಫ್ ಸ್ಪಿನ್ನರ್ ಆರ್ ಅಶ್ವಿನ್, ಇಂಗ್ಲೆಂಡ್ ನಾಯಕ ಜೋ ರೂಟ್ ಹಾಗೂ ವೆಸ್ಟ್ ಇಂಡೀಸ್ ತಂಡದ ಕೈಲ್ ಮೇಯರ್ಸ್ ಅವರನ್ನು ಐಸಿಸಿ ನಾಮ ನಿರ್ದೇಶನ ಮಾಡಿತ್ತು. ಆದರೆ ಅಂತಿಮವಾಗಿ ಆರ್ ಅಶ್ವಿನ್ ಅವರು ಪ್ರಶಸ್ತಿ ಗೆದ್ದಿದ್ದಾರೆ.
ಇನ್ನು ಇಂಗ್ಲೆಂಡ್ನ ಟಮ್ಮಿ ಬ್ಯೂಮಾಂಟ್ ಅವರು ಫೆಬ್ರವರಿ ತಿಂಗಳ ಮಹಿಳಾ ಆಟಗಾರ್ತಿ ಪ್ರಶಸ್ತಿ ಪಡೆದುಕೊಂಡಿದ್ದಾರೆ.