ಹೊಸದಿಲ್ಲಿ : ವೈಯಕ್ತಿಕ ಕಾರಣಗಳಿಂದ ಸೈಮನ್ ಕ್ಯಾಟಿಚ್ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ತಂಡದ ಮುಖ್ಯ ಕೋಚ್ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಹಾಗಾಗಿ, ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯ ಎರಡನೇ ಅವಧಿಯಲ್ಲಿ ಅವರ ಸ್ಥಾನದಲ್ಲಿ ಮೈಕ್ ಹೇಸನ್ ಮುಂದುವರಿಯಲಿದ್ದಾರೆ.
2021ರ ಐಪಿಎಲ್ ಟೂರ್ನಿಯ ಮೊದಲ ಅವಧಿಯಲ್ಲಿ ಮೈಕ್ ಹೆಸನ್ ಆರ್ಸಿಬಿ ತಂಡದ ಕ್ರಿಕೆಟ್ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು. ಆದರೆ, ಸೈಮನ್ ಕ್ಯಾಟಿಚ್ ತಮ್ಮ ಹುದ್ದೆಯಿಂದ ಕೆಳಗೆ ಇಳಿದ ಕಾರಣ, ಅನಿವಾರ್ಯವಾಗಿ ಮೈಕ್ ಹೇಸನ್ ಹೆಡ್ ಕೋಚ್ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆ.