News Karnataka Kannada
Thursday, May 02 2024
ಕ್ರೀಡೆ

ಇಂಗ್ಲೆಂಡ್ ವಿರುದ್ಧ ಎರಡನೇ ಟೆಸ್ಟ್ ನಲ್ಲಿ ಭರ್ಜರಿ ಜಯ ಸಾಧಿಸಿದ ಆಸ್ಟ್ರೇಲಿಯಾ

Brand Mangalore Friendly Cricket Tournament to be held on Oct 1
Photo Credit :

ಇಂಗ್ಲೆಂಡ್ ವಿರುದ್ಧ ಆಸ್ಟ್ರೇಲಿಯಾ ತಂಡ ಎರಡನೇ ಟೆಸ್ಟ್ ನಲ್ಲಿಯೂ ಭರ್ಜರಿ ಜಯ ಸಾಧಿಸಿದೆ. 275 ರನ್ ಗಳ ಬೃಹತ್ ಅಂತರದಿಂದ ಆಸ್ಟ್ರೇಲಿಯಾ ಗೆದ್ದಿದ್ದು, ಈ ಮೂಲಕ 5 ಟೆಸ್ಟ್ ಗಳ ಸರಣಿಯಲ್ಲಿ 2-0 ಅಂತರದ ಮುನ್ನಡೆ ಸಾಧಿಸಿದೆ.

ಬ್ರಿಸ್ಬೇನ್ ನಲ್ಲಿ ನಡೆದ ಮೊದಲ ಟೆಸ್ಟ್ ನಲ್ಲಿ ಆಸ್ಟ್ರೇಲಿಯಾ ತಂಡ 9 ವಿಕೆಟ್ ಗಳಿಂದ ಗೆದ್ದಿತ್ತು. ಎರಡನೇ ಟೆಸ್ಟ್ ನಲ್ಲಿ ಇಂಗ್ಲೆಂಡ್ ತಂಡಕ್ಕೆ 488 ರನ್ ಗಳ ಬೃಹತ್ ಮೊತ್ತದ ಗುರಿ ನೀಡಲಾಗಿತ್ತು. ಆದರೆ, ಗುರಿ ಬೆನ್ನಟ್ಟಿದ ಇಂಗ್ಲೆಂಡ್ ತಂಡವು ಕೇವಲ 192 ರನ್ ಗಳಿಗೆ ಆಲ್ ಔಟ್ ಆಗುವ ಮೂಲಕ ಮುಖಭಂಗ ಅನುಭವಿಸಿತು. ಇಂಗ್ಲೆಂಡ್ ಪರ ಯಾವುದೇ ಆಟಗಾರ ಅರ್ಧ ಶತಕ ಗಳಿಸಲಿಲ್ಲ. ಹೀಗಾಗಿ ಸುಲಭವಾಗಿ ಸೋಲಿಗೆ ತುತ್ತಾಯಿತು.

ಆಸ್ಟ್ರೇಲಿಯಾ ಪರ ಝೈ ರಿಚರ್ಡಸನ್ 5 ವಿಕೆಟ್ ಪಡೆದು ಮಿಂಚಿದರು. ಉಳಿದಂತೆ ಮಿಚೆಲ್ ಸ್ಟಾರ್ಕ್ ಹಾಗೂ ಲಿಯಾನ್ ತಲಾ ಎರಡು ವಿಕೆಟ್ ಪಡೆದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು