ಟಿ-20 ವಿಶ್ವಕಪ್ 2021ರ ಸೂಪರ್ 12 ಸುತ್ತಿನ ಎರಡನೇ ದಿನವಾದ ಇಂದು ಇಂಡೋ-ಪಾಕ್ ಹೈವೋಲ್ಟೇಜ್ ಪಂದ್ಯಕ್ಕೆ ಅಖಾಡ ಸಿದ್ಧವಾಗಿದ್ದು, ಟಾಸ್ ಗೆದ್ದಿರುವ ಪಾಕ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಟಿ-20 ವಿಶ್ವಕಪ್ ಒಂದರಲ್ಲೇ ಈವರೆಗೆ 5 ಬಾರಿ ಭಾರತ ತಂಡ ಪಾಕ್ಗೆ ಮಣ್ಣು ಮುಕ್ಕಿಸಿದ್ದು, ಈಗ ಆರನೇ ಬಾರಿ ಗೆದ್ದು ಬೀಗುವ ಫೇವರಿಟ್ ತಂಡವಾಗಿ ಕಣಕ್ಕಿಳಿಯಲಿದೆ.
ಭಾರತ ತಂಡ : ಕೆಎಲ್ ರಾಹುಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ (ನಾಯಕ), ರಿಷಭ್ ಪಂತ್ (ವಿಕೀ), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಭುವನೇಶ್ವರ್ ಕುಮಾರ್, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ.
ಪಾಕಿಸ್ತಾನ ತಂಡ : ಬಾಬರ್ ಅಜಮ್(ನಾಯಕ), ಮೊಹಮ್ಮದ್ ರಿಜ್ವಾನ್, ಫಖರ್ ಜಮಾನ್, ಮೊಹಮ್ಮದ್ ಹಫೀಜ್, ಶೋಯಬ್ ಮಲಿಕ್, ಆಸಿಫ್ ಅಲಿ, ಹೈದರ್ ಅಲಿ, ಇಮಾದ್ ವಸೀಂ, ಶದಬ್ ಖಾನ್, ಹಸನ್ ಅಲಿ, ಶಾಹೀನ್ ಅಫ್ರಿದಿ, ಹ್ಯಾರಿಸ್ ರವೂಫ್.