News Karnataka Kannada
Thursday, May 02 2024
ಕ್ರೀಡೆ

ಇಂದಿನಿಂದ ಟೋಕಿಯೊ ಪ್ಯಾರಾಲಿಂಪಿಕ್ಸ್‌: ಶುಭ ಕೋರಿದ ಕೊಹ್ಲಿ

Virat Kohli 24082021
Photo Credit :

ನವದೆಹಲಿ: ಇಂದಿನಿಂದ ಆರಂಭವಾಗಲಿರುವ ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾಗವಹಿಸುತ್ತಿರುವ ಭಾರತದ ಪ್ಯಾರಾ ಅಥ್ಲೀಟ್‌ಗಳಿಗೆ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಶುಭ ಕೋರಿದ್ದಾರೆ.

ಈ ಕ್ರೀಡಾಕೂಟದಲ್ಲಿ ಭಾರತದ ದೇವೇಂದ್ರ ಜಜಾರಿಯಾ ಮತ್ತು ಮರಿಯಪ್ಪನ್ ತಂಗವೇಲು ಸೇರಿದಂತೆ 54 ಪ್ಯಾರಾ ಅಥ್ಲೀಟ್‌ಗಳು ಭಾಗವಹಿಸುತ್ತಿದ್ದಾರೆ. ಭಾರತದ ಅಥ್ಲೀಟ್‌ಗಳಿಗೆ ಸಾಮಾಜಿಕ ಜಾಲತಾಣದಲ್ಲಿ ವಿರಾಟ್ ಕೊಹ್ಲಿ ಶುಭ ಕೋರಿದ್ದಾರೆ.

ಭಾರತದ ಕ್ರೀಡಾಪಟುಗಳು ಒಂಬತ್ತು ಕ್ರೀಡೆಗಳಲ್ಲಿ ಭಾಗವಹಿಸಲಿದ್ದು, ಭಾರತವು ಈವರೆಗೆ ಪ್ಯಾರಾಲಿಂಪಿಕ್ಸ್‌ನಲ್ಲಿ 12 ಪದಕಗಳನ್ನು ಗೆದ್ದಿದೆ.

ಟೋಕಿಯೊದ ಒಲಿಂಪಿಕ್ ಕ್ರೀಡಾಂಗಣದಲ್ಲಿ ಇಂದು ಉದ್ಘಾಟನಾ ಸಮಾರಂಭ ನಡೆಯಲಿದೆ. ಈ ವರ್ಷ, 163 ದೇಶಗಳ ಸುಮಾರು 4500 ಕ್ರೀಡಾಪಟುಗಳು ಭಾಗವಹಿಸುತ್ತಿದ್ದಾರೆ. 20 ಕ್ರೀಡೆಗಳಲ್ಲಿ 540 ಸ್ಪರ್ಧೆಗಳು ನಡೆಯಲಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು