Categories: ಕ್ರೀಡೆ

ಏಪ್ರಿಲ್ 2ರಂದು ಚೆನ್ನೈಯಲ್ಲಿ ಐಪಿಎಲ್ ಟೂರ್ನಿ ಆರಂಭ ಸಾಧ್ಯತೆ

ನವದೆಹಲಿ: ಇಂಡಿಯನ್‌ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ 15ನೇ ಆವೃತ್ತಿಯು ಏಪ್ರಿಲ್ 2ರಂದು ಚೆನ್ನೈಯಲ್ಲಿ ಆರಂಭಗೊಳ್ಳುವ ಸಾಧ್ಯತೆ ಇದೆ ಎಂದು ನಿಯಂತ್ರಣ ಮಂಡಳಿಯು (ಬಿಸಿಸಿಐ) ಪಾಲುದಾರರಿಗೆ ಈಗಾಗಲೇ ಮಾಹಿತಿ ನೀಡಿರುವುದಾಗಿ ‘ಕ್ರಿಕ್‌ಬಜ್’ ವರದಿ ಮಾಡಿದೆ.

ಪಂದ್ಯಗಳ ಪಟ್ಟಿಯನ್ನು ಇನ್ನೂ ಅಂತಿಮಗೊಳಿಸಲಾಗಿಲ್ಲ.

15ನೇ ಆವೃತ್ತಿಯ ಐಪಿಎಲ್‌ನಲ್ಲಿ 10 ತಂಡಗಳು ಆಡಲಿದ್ದು, ಒಟ್ಟು 74 ಪಂದ್ಯಗಳು ನಡೆಯಲಿವೆ. ಒಟ್ಟು 60 ದಿನಗಳ ಕಾಲ ಪಂದ್ಯಗಳನ್ನು ಆಯೋಜಿಸಲು ಬಿಸಿಸಿಐ ಆಂತರಿಕ ಸಭೆಯಲ್ಲಿ ಚರ್ಚಿಸಿದೆ ಎನ್ನಲಾಗಿದೆ. ಈ ಲೆಕ್ಕಾಚಾರದ ಪ್ರಕಾರ, ಜೂನ್ ಮೊದಲ ವಾರಾಂತ್ಯದಲ್ಲಿ ಫೈನಲ್ ಪಂದ್ಯ ನಡೆಯುವ ನಿರೀಕ್ಷೆ ಇದೆ.

ಮುಂದಿನ ಐಪಿಎಲ್ ಟೂರ್ನಿಯನ್ನು ಭಾರತದಲ್ಲೇ ಆಯೋಜಿಸಲಾಗುವುದು ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಇತ್ತೀಚೆಗೆ ಸ್ಪಷ್ಟಪಡಿಸಿದ್ದರು.

Swathi MG

Recent Posts

ಪ್ರವಾಸಕ್ಕೆ ಬಂದಿದ್ದ ಮಹಿಳೆ ನೀರಿನಲ್ಲಿ ಮುಳುಗಿ ಮೃತ್ಯು

ನೀರಿನಲ್ಲಿ ಮುಳುಗಿ ಯುವತಿಯೊಬ್ಬಳು ಮೃತಪಟ್ಟ  ಘಟನೆ ಮೈಸೂರಿನ ತಿ.ನರಸೀಪುರ ತಾಲೂಕಿನ ತಲಕಾಡು ಗ್ರಾಮದ ಕಾವೇರಿ ನದಿಯಲ್ಲಿ ನಡೆದಿದೆ.

9 mins ago

ಯುವಜನರನ್ನು ಆಧ್ಯಾತ್ಮಿಕ ಜಗತ್ತಿಗೆ ಕೊಂಡೊಯ್ದ ಗೊಸ್ಪೆಲ್ ಗಾಲಾ

ಆಧ್ಯಾತ್ಮಿಕ ವಿಚಾರದಿಂದ ದೂರ ಹೋಗುತ್ತಿರುವ ಯುವಜನರನ್ನು ಧಾರ್ಮಿಕ ವಿಚಾರಗಳತ್ತ ಸೆಳೆಯುವ ನಿಟ್ಟಿನಲ್ಲಿ ಕಲ್ಯಾಣಪುರ ವಲಯದ ಕ್ರೈಸ್ತ ಯುವಸಮುದಾಯಕ್ಕೆ ತೊಟ್ಟಂ ಸಂತ…

19 mins ago

ಜಾಗದ ತಕರಾರು: ನಗರಸಭಾ ಸದಸ್ಯನಿಂದ ದಂಪತಿ ಮೇಲೆ ಹಲ್ಲೆ, ಜೀವಬೆದರಿಕೆ

ಜಾಗದ ತಕರಾರಿಗೆ ಸಂಬಂಧಿಸಿ ದಂಪತಿ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಬಗ್ಗೆ ನಗರಸಭಾ ಸದಸ್ಯ ಬಾಲಕೃಷ್ಣ ಶೆಟ್ಟಿ…

33 mins ago

ಬೊಳ್ನಾಡು ಶ್ರೀ ಚಿರುಂಭ ಭಗವತೀ ಕ್ಷೇತ್ರ : ದ್ವಜ ಸ್ತಂಭ (ಕೊಡಿಮರ) ಪ್ರತಿಷ್ಠಾಪನೆ

ತೀಯಾ ಸಮುದಾಯದ ಹದಿನೆಂಟು ಭಗವತೀ ಕ್ಷೇತ್ರಗಳಲ್ಲಿ ಒಂದಾದ ಬೊಳ್ನಾಡು ಶ್ರೀ ಚಿರುಂಭ ಭಗವತೀ ಕ್ಷೇತ್ರ ಎರುಂಬು - ಅಳಿಕೆ ಬಂಟ್ವಾಳ…

44 mins ago

ಭಾರೀ ಗಾಳಿ ಮಳೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಸಂಜೆ ಸುರಿದ ಜೋರಾದ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಪಲ್ಟಿಯಾದ…

47 mins ago

ದ.ಕ ಬರ ಪರಿಸ್ಥಿತಿ ಹಿನ್ನಲೆ ನೀರು ಪೂರೈಕೆಗೆ ಜಿಲ್ಲಾಡಳಿತ ಮುಂಜಾಗೃತ ಕ್ರಮ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನಲೆಯಲ್ಲಿ ಸಾರ್ವಜನಿಕರಿಗರ ಕುಡಿಯುವ ನೀರನ್ನು ಪೂರೈಸಲು ಜಿಲ್ಲಾಡಳಿತದಿಂದ ಈಗಾಗಲೇ ಸಾಕಷ್ಟು ಕ್ರಮ ಕೈಗೊಳ್ಳಲಾಗುತ್ತಿದೆ.…

54 mins ago