ಜಕಾರ್ತ: ಇಲ್ಲಿ ನಡೆಯುತ್ತಿರುವ 18ನೇ ಏಶ್ಯನ್ ಗೇಮ್ಸ್ ನಲ್ಲಿ ಭಾರತ ಮಹಿಳಾ ತಂಡವು ಥಾಯ್ಲೆಂಡ್ ವಿರುದ್ಧ ಗೆಲುವು ದಾಖಲಿಸಿಕೊಂಡು ಸೆಮಿಫೈನಲಿಗೆ ತಲುಪಿದೆ.
ಇಂದು ನಡೆದ ಪೂಲ್ ಬಿ ವಿಭಾಗದ ಪಂದ್ಯದಲ್ಲಿ ಭಾರತದ ವನಿತೆಯರು 5-0ಯಿಂದ ಥಾಯ್ಲೆಂಡ್ ವಿರುದ್ಧ ಗೆಲುವು ದಾಖಲಿಸಿಕೊಂಡರು. ನಾಯಕಿ ರಾಣಿ ರಾಂಪಾಲ್ ಹ್ಯಾಟ್ರಿಕ್ ಗೋಲ್ ಬಾರಿಸುವ ಮೂಲಕ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದರು.