ಕ್ರೀಡೆ

ಐಪಿಎಲ್ ನಲ್ಲಿ ಮತ್ತೆ ಮ್ಯಾಚ್ ಫಿಕ್ಸಿಂಗ್ ಪ್ರಕರಣ : ಮೂವರ ಬಂಧನ

ನವದೆಹಲಿ: ವಿಶ್ವದ ಶ್ರೀಮಂತ ಮತ್ತು ವರ್ಣರಂಜಿತ ಕ್ರಿಕೆಟ್ ಟೂರ್ನಿ ಎಂದೇ ಹೇಳಲಾಗುವ ಐಪಿಎಲ್ ನಲ್ಲಿ ಮತ್ತೆ ಮ್ಯಾಚ್ ಫಿಕ್ಸಿಂಗ್ ಭೂತ ತಲೆ ಎತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ.

2019ರ ಐಪಿಎಲ್ ಪಂದ್ಯ ಫಿಕ್ಸಿಂಗ್ ಮಾಡಲು ಯತ್ನಿಸಿದ ಆರೋಪದ ಮೇಲೆ ಮೂವರನ್ನು ಸಿಬಿಐ ಬಂಧಿಸಿದೆ.

ಹೈದರಾಬಾದ್ ನಲ್ಲಿ ಇಬ್ಬರು, ದೆಹಲಿಯಲ್ಲಿ ಒಬ್ಬರು ಬಂಧಿತರಾಗಿದ್ದಾರೆ. ಪಾಕಿಸ್ತಾನದಿಂದ ಬಂದ ಮಾಹಿತಿ ಆಧರಿಸಿ ಐಪಿಎಲ್ ಪಂದ್ಯದ ಫಲಿತಾಂಶದ ಮೇಲೆ ಪ್ರಭಾವ ಬೀರಲು ಯತ್ನಿಸಿಸದ್ದ ಮೂವರು ಪಂಟರ್ ಗಳನ್ನು ಬಂಧಿಸಲಾಗಿದ್ದು, ಹಲವು ದಾಖಲು ವಶಕ್ಕೆ ಪಡೆಯಲಾಗಿದೆ.

ದೆಹಲಿಯ ದಿಲೀಪ್ ಕುಮಾರ್, ಹೈದರಾಬಾದ್ನ ಗುರ್ರಮ್ ವಾಸು, ಗುರ್ರಂ ಸತೀಶ್ ಸೇರಿದಂತೆ 7 ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇದರೊಂದಿಗೆ ಕೆಲವು ಸರ್ಕಾರಿ ಅಧಿಕಾರಿಗಳು ಬೆಟ್ಟಿಂಗ್ ನಲ್ಲಿ ಭಾಗಿಯಾದ ಮಾಹಿತಿ ಸಿಕ್ಕಿದ್ದು, ಪಾಕಿಸ್ತಾನದ ವಖಾಸ್ ಮಲಿಕ್ ಎಂಬವನೊಂದಿಗೆ ಸಂಪರ್ಕದಲ್ಲಿದ್ದರು. ಈ ಗುಂಪು ಬೆಟ್ಟಿಂಗ್ ನಲ್ಲಿ ಸಕ್ರಿಯವಾಗಿತ್ತು. ನಕಲಿ ದಾಖಲೆ ನೀಡಿದ ತೆರೆದ ಬ್ಯಾಂಕ್ ಖಾತೆಗಳ ಮೂಲಕ ಕೋಟ್ಯಂತರ ರೂಪಾಯಿ ವ್ಯವಹಾರ ನಡೆಸಲಾಗಿದೆ ಎನ್ನಲಾಗಿದೆ.

Ashika S

Recent Posts

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

33 mins ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

57 mins ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

2 hours ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

2 hours ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

3 hours ago