Categories: ಕ್ರೀಡೆ

ಐಪಿಎಲ್‍ ಫೈನಲ್: ಕೆಜಿಎಫ್‌ ಚಾಪ್ಟರ್‌ 2 ಚಿತ್ರದ ಡೈಲಾಗ್‌ ಗೆ ಅಬ್ಬರಿಸುತ್ತಾ ವೇದಿಕೆ ಪ್ರವೇಶಿಸಿದ ರಣವೀರ್‌ ಸಿಂಗ್‌

ಐಪಿಎಲ್‍:

15ನೇ ಆವೃತ್ತಿ ಐಪಿಎಲ್‍ನ ಫೈನಲ್ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ತಂಡ ರಾಜಸ್ಥಾನ ತಂಡವನ್ನು ಸದೆಬಡಿದು ಚೊಚ್ಚಲ ಆವೃತ್ತಿಯಲ್ಲೇ ಚಾಂಪಿಯನ್ ಆಗಿ ಸಂಭ್ರಮಿಸಿದೆ.

ಫೈನಲ್ಸ್‌ ಆರಂಭಕ್ಕೂ ಮುನ್ನ ನಡೆದ ಉದ್ಘಾಟನಾ ಸಮಾರಂಭದಲ್ಲಿ ಖ್ಯಾತ ನಟ ರಣವೀರ್‌ ಸಿಂಗ್‌ ಹಾಗೂ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ನಡೆಸಿಕೊಟ್ಟ ನೃತ್ಯ- ಸಂಗೀತ ಕಾರ್ಯಕ್ರಮಗಳು ಪ್ರೇಕ್ಷಕರ ಮನಸೂರೆಗೊಂಡಿತು.

ಕೆಜಿಎಫ್‌ ಚಾಪ್ಟರ್‌ 2 ಚಿತ್ರದ ವೈಲೆನ್ಸ್‌.. ವೈಲೆನ್ಸ್..‌ ವೈಲೆನ್ಸ್‌… ಡೈಲಾಗ್‌ ಗೆ ಅಬ್ಬರಿಸುತ್ತಾ ವೇದಿಕೆ ಪ್ರವೇಶಿಸಿದ ರಣವೀರ್‌ ಸಿಂಗ್‌ ಬಳಿಕ ಅದೇ ಚಿತ್ರದ ‘ಧೀರ ಧೀರ’ ಹಾಡಿಗೆ ಸಹಕಲಾವಿದರೊಂದಿಗೆ ಭರ್ಜರಿ ಸ್ಟೆಪ್‌ ಹಾಕಿದರು.

ಈ ಕ್ಷಣಗಳನ್ನು ಕ್ರೀಡಾಂಗಣದಲ್ಲಿ ನೆರೆದಿದ್ದ ಲಕ್ಷಕ್ಕೂ ಅಧಿಕ ಪ್ರೇಕ್ಷಕರು ಹರ್ಷೋಧ್ಘಾರ ಮಾಡುತ್ತಾ ಸಂಭ್ರಮಿಸಿದರು. ಈ ವಿಡಿಯೋಗೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭರ್ಜರಿ ರೆಸ್ಪಾನ್ಸ್‌ ವ್ಯಕ್ತವಾಗುತ್ತಿದ್ದು, ‘ಕೆಜಿಎಫ್ ಚಾಪ್ಟರ್ 2’ ಚಿತ್ರದ ಟ್ವಿಟರ್ ಖಾತೆ ಸಹ ಈ ವಿಡಿಯೋವನ್ನು ʼಹೆಮ್ಮೆಯ ಕ್ಷಣʼ ಎಂದು ಬರೆದುಕೊಂಡು  ಶೇರ್‌ ಮಾಡಿಕೊಂಡಿದೆ.

ಆ ಬಳಿಕ ಖ್ಯಾತ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಸಹ ತಮ್ಮ ಸೂಪರ್ ಹಿಟ್ ಹಾಡುಗಳಿಂದ ಪ್ರೇಕ್ಷಕರನ್ನು ಮನರಂಜಿಸಿದರು. ಪ್ರಸಿದ್ಧ ‘ವಂದೇ ಮಾತರಂ’ ‘ಜೈ ಹೋ’ ಗೀತೆಗಳನ್ನು ರೆಹಮಾನ್‌ ಧ್ವನಿಯಲ್ಲಿ ಕೇಳಿ ಪ್ರೇಕ್ಷಕರು ಸಂಭ್ರಮಿಸಿದರು.

Sneha Gowda

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

7 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

8 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

8 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

8 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

9 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

10 hours ago