ಕ್ರೀಡೆ

ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿ: ಕೊನೇ ಪಂದ್ಯದಲ್ಲಿ ಭಾರತದ ವನಿತೆಯರಿಗೆ ಸೋಲು

ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ ಲೀಗ್ ಹಂತದ ಕೊನೇ ಪಂದ್ಯದಲ್ಲಿ ಭಾರತದ ವನಿತೆಯರ ತಂಡ ದಕ್ಷಿಣ ಆಫ್ರಿಕಾ ಮಹಿಳಾ ತಂಡದ ವಿರುದ್ಧ ಕೊನೆಯ ಎಸೆತದಲ್ಲಿ ಸೋಲು ಕಾಣುವ ಮೂಲಕ ಟೂರ್ನಿಯಿಂದ ಹೊರಬಿದ್ದಿದೆ.

ಟೂರ್ನಿಯ ಸೆಮೀಸ್‌ ಗೇರಲು ಗೆಲ್ಲಲೇ ಬೇಕಾದ ಒತ್ತಡದಲ್ಲಿ ಕಣಕ್ಕಿಳಿದ ಭಾರತ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಆಯ್ದುಕೊಂಡಿತು. ಆರಂಭಿಕ ಆಟಗಾರ್ತಿಯರಾದ ಸ್ಮೃತಿ ಮಂದಾನ, ಶಫಾಲಿ ವರ್ಮಾ ಮತ್ತು ಮಿಥಾಲಿ ರಾಜ್ ಅವರ ಆಕರ್ಷಕ ಅರ್ಧಶತಗಳ ಬಲದಿಂದ ಭಾರತ ನಿಗದಿತ 50 ಓವರ್​ಗಳಲ್ಲಿ 274 ರನ್ ಕಲೆಹಾಕಿತು.

ಗುರಿ ಬೆನ್ನತ್ತಿದ ದ ಆಪ್ರಿಕಾ ವನಿತೆಯರಿಗೆ ಕೊನೆಯ ಆರು ಎಸೆತಗಳಲ್ಲಿ ಗೆಲುವಿಗೆ 7 ರನ್‌ ಗಳ ಅಗತ್ಯವಿತ್ತು. ಈ ಹಂತದಲ್ಲಿ ದ. 268 ರನ್‌ ಗಳಿಗೆ 6 ವಿಕೆಟ್‌ ಗಳನ್ನು ಕಳೆದುಕೊಂಡಿತ್ತು. ರೋಚಕಘಟ್ಟದತ್ತ ತಿರುಗಿದ ಈ ಓವರ್‌ ನ ಎರಡನೇ ಎಸೆತದಲ್ಲಿ ಡು ಫ್ರೀಜ್‌ ರನ್‌ ಔಟ್‌ ಆದರು. ಎರಡು ಎಸೆತಗಳಲ್ಲಿ ಮೂರು ರನ್‌ ಅಗತ್ಯವಿದ್ದಾಗ ಬೌಲರ್‌ ದೀಪ್ತಿ ಶರ್ಮಾ ನೋ ಬಾಲ್‌ ಎಸೆದಿದ್ದು ಭಾರತಕ್ಕೆ ಮುಳುವಾಗಿ ಪರಿಣಮಿಸಿತು.

ಫ್ರೀ ಹಿಟ್‌ ನಿಂದಾಗಿ ಒತ್ತಡ ಮುಕ್ತವಾಗಿ ಆಡಿದ ಆಫ್ರೀಕಾ ವನಿತೆಯರು ಕೊನೆಯ ಎಸೆತದಲ್ಲಿ ಒಂದು ರನ್‌ ಬೇಕಿದ್ದಾಗ ಸಿಂಗಲ್‌ ಗಳಿಸುವ ಮೂಲಕ ರೋಚಕ ಗೆಲುವು ಒಲಿಸಿಕೊಂಡರು. ಒಂದು ವೇಳೆ ಪಂದ್ಯ ಡ್ರಾ ಆಗಿದ್ದರೂ ಭಾರತ ಸೆಮೀಸ್‌ ಗೆ ಏರುತ್ತಿತ್ತು. ಈ ಸೋಲಿನಿಂದಾಗಿ ಭಾರತ ಟೂರ್ನಿಯಿಂದ ಹೊರಬಿದ್ದಿದ್ದು, ಆಸ್ಟ್ರೇಲಿಯಾ, ದಕ್ಷಿಣ ಆಫ್ರೀಕಾ, ಇಂಗ್ಲೆಂಡ್‌ ಮತ್ತು ವೆಸ್ಟ್‌ ಇಂಡಿಸ್‌ ತಂಡಗಳು ಸೆಮಿಫೈನಲ್‌ ಹಂತ ಪ್ರವೇಶಿಸಿವೆ.

Sneha Gowda

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

3 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

3 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

3 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

4 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

4 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

4 hours ago