ಟೋಕಿಯೊ: 41 ವರ್ಷಗಳ ಬಳಿಕ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತ ಪುರುಷರ ಹಾಕಿ ತಂಡ ಇತಿಹಾಸ ನಿರ್ಮಿಸಿದೆ. 4 ದಶಕಗಳ ಬಳಿಕ ಭಾರತಕ್ಕೆ ಪದಕ ದೊರಕಿದೆ. ಜರ್ಮನಿ ತಂಡವನ್ನು ಮಣಿಸಿ ಕಂಚಿನ ಪದಕಕ್ಕೆ ಮುತ್ತಿಟ್ಟಿದೆ.
ಟೋಕಿಯೊ ಒಲಿಂಪಿಕ್ಸ್ನಲ್ಲಿ ಗುರುವಾರ ನಡೆದ ಮೂರನೇ ಸ್ಥಾನಕ್ಕಾಗಿ ಹೋರಾಟದಲ್ಲಿ ಭಾರತ ತಂಡವು ಜರ್ಮನಿ ವಿರುದ್ಧ 5-4 ಗೋಲುಗಳ ಅಂತರದ ಭರ್ಜರಿ ಗೆಲುವು ದಾಖಲಿಸಿ ಕಂಚಿನ ಪದಕ ಜಯಿಸಿದೆ.
ಗೋಲುಗಳ ಸುರಿಮಳೆಯೇ ನಡೆದ ಪಂದ್ಯದಲ್ಲಿ ಜರ್ಮನಿ ತಂಡದ ವಿರೋಚಿತ ಪ್ರತಿರೋಧದ ಹೊರತಾಗಿಯೂ ಭಾರತೀಯ ಆಟಗಾರರು ಅದ್ಭುತ ಪ್ರದರ್ಶನ ನೀಡುವ ಮೂಲಕ ಅರ್ಹ ಗೆಲುವು ದಾಖಲಿಸಲು ನೆರವಾದರು. 41 ವರ್ಷಗಳ ಬಳಿಕ ಭಾರತಕ್ಕೆ ಪದಕ ತಂದುಕೊಟ್ಟಿದ್ದಾರೆ.
1980ರ ಮಾಸ್ಕೊ ಒಲಿಂಪಿಕ್ಸ್ನಲ್ಲಿ ಭಾರತ ಚಿನ್ನದ ಪದಕ ಜಯಿಸಿತ್ತು.
ಒಲಂಪಿಕ್ಸ್: 41 ವರ್ಷಗಳ ಬಳಿಕ ಪದಕ ಗೆದ್ದ ಭಾರತ ಹಾಕಿ ತಂಡ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.