News Karnataka Kannada
Wednesday, May 08 2024
ಕ್ರೀಡೆ

ಒಲಂಪಿಕ್ಸ್: ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧುಗೆ ಕಂಚಿನ ಪದಕ

Sindhu 01082021
Photo Credit :

ಟೋಕಿಯೊ: ಭಾರತದ ಖ್ಯಾತ ಆಟಗಾರ್ತಿ ಪಿ.ವಿ. ಸಿಂಧು ಅವರು ಟೋಕಿಯೊ ಒಲಂಪಿಕ್ಸ್ ನ ಬ್ಯಾಡ್ಮಿಂಟನ್ ಮಹಿಳಾ ಸಿಂಗಲ್ ವಿಭಾಗದಲ್ಲಿ ಕಂಚಿಗೆ ಮುತ್ತಿಟ್ಟಿದ್ದಾರೆ.

ಈ ಮೂಲಕ ಸಿಂಧು ಒಲಂಪಿಕ್ಸ್ ನಲ್ಲಿ ಎರಡು ಪದಕ ಗೆದ್ದ ಸಾಧನೆ ಮಾಡಿದ್ದಾರೆ. 2016ರಲ್ಲಿ ರಿಯೋದಲ್ಲಿ ನಡೆದಿದ್ದ ಒಲಂಪಿಕ್ಸ್ ನಲ್ಲಿ ಸಿಂಧು ಬೆಳ್ಳಿ ಪದಕ ಗೆದ್ದಿದ್ದರು.

ಸೆಮಿಫೈನಲ್ ಪಂದ್ಯದಲ್ಲಿ ಎರಡನೇ ಶ್ರೇಯಾಂಕಿತೆ ತೈಜು ಯಿಂಗ್ ವಿರುದ್ಧ ಪಿವಿ ಸಿಂಧು ಸೋಲು ಕಂಡಿದ್ದರು. ಇಂದು ಕಂಚಿನ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ಸಿಂಧು ಚೀನಾದ ಹೀ ಬಿಂಗ್ಜಿಯಾವೊ ವಿರುದ್ಧ 21-13, 21-15 ನೇರ ಸೆಟ್ ಗಳಿಂದ ಗೆಲುವು ಸಾಧಿಸಿದರು.

ಟೋಕಿಯೊ ಒಲಂಪಿಕ್ಸ್ ನಲ್ಲಿ ಭಾರತಕ್ಕೆ ಎರಡನೇ ಪದಕ ಬಂದಿದೆ. ವೇಟ್ ಲಿಫ್ಟಿಂಗ್ ನಲ್ಲಿ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆದ್ದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು