ಟೋಕಿಯೊ: ಟೋಕಿಯೊ ಒಲಿಂಪಿಕ್ಸ್ನಲ್ಲಿ ಭಾರತದ ಮಹಿಳಾ ಹಾಕಿ ತಂಡ ಶುಕ್ರವಾರ ಐರ್ಲೆಂಡ್ ವಿರುದ್ಧ 1-0 ಅಂತರದಲ್ಲಿ ಗೆಲುವು ಕಂಡಿದೆ. ಈ ಮೂಲಕ ಭಾರತದ ಮಹಿಳಾ ಹಾಕಿ ತಂಡ ಕ್ವಾರ್ಟರ್ ಫೈನಲ್ ಪ್ರವೇಶಿಸುವ ಆಸೆಯನ್ನು ಬಲವಾಗಿ ಉಳಿಸಿಕೊಂಡಿದೆ.
ಇದಕ್ಕೂ ಮುನ್ನ ರಾಣಿ ರಂಪಾಲ್ ನೇತೃತ್ವದ ಮಹಿಳಾ ಹಾಕಿ ತಂಡ ಮೊದಲ ಮೂರು ಗ್ರೂಪ್ ಸ್ಟೇಜ್ ಪಂದ್ಯಗಳಲ್ಲಿ ಸೋಲು ಕಂಡಿತ್ತು.
ಭಾರತ ಮತ್ತು ಐರ್ಲೆಂಡ್ ನಡುವಿನ ಪಂದ್ಯದ ಮೊದಲ 15 ನಿಮಿಷಗಳಲ್ಲಿ ಯಾವುದೇ ಗೋಲು ಪಡೆಯಲು ಸಾಧ್ಯವಾಗಲಿಲ್ಲ. 15 ನಿಮಿಷಗಳ ಕೊನೆಗೆ ಸ್ಕೋರ್ ಲೈನ್ 0-0 ಆಗಿತ್ತು.