Categories: ಕ್ರೀಡೆ

ಒಲಿಂಪಿಕ್ ಪದಕ ವಿಜೇತ ಸುಶೀಲ್ ಕುಮಾರ್ ವಿರುದ್ಧ ಜಾಮೀನು ರಹಿತ ವಾರಂಟ್ ದಾಖಲು

ನವದೆಹಲಿ: ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತ ಸುಶೀಲ್ ಕುಮಾರ್ ಮತ್ತು ಇತರ 9 ಜನರ ವಿರುದ್ಧ, 23 ವರ್ಷದ ಮಾಜಿ ಕಿರಿಯ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ರಾಣಾ ಅವರ ಹತ್ಯೆಗೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯ ಶನಿವಾರ ಜಾಮೀನು ರಹಿತ ವಾರಂಟ್ ಹೊರಡಿಸಿದೆ.

 

ಇದಕ್ಕೆ ಮುನ್ನ ದೆಹಲಿ ಪೊಲೀಸರುಕುಸ್ತಿಪಟು ವಿರುದ್ಧ ಲುಕ್ ಔಟ್ ಸರ್ಕ್ಯುಲರ್ (ಎಲ್‌ಒಸಿ) ಹೊರಡಿಸಿದ್ದರು. ಸುಶೀಲ್ ಕುಮಾರ್ ಬಂಧನಕ್ಕೆ ಬಹುಮಾನ ಘೋಷಿಸಲು ದೆಹಲಿ ಪೊಲೀಸರು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

 

ಸುಶೀಲ್ ಕುಮಾರ್ ವಿರುದ್ಧ ಎನ್‌ಬಿಡಬ್ಲ್ಯೂ ನೀಡಲು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದೇನೆ ಮತ್ತು ತಮ್ಮ ಅರ್ಜಿಯನ್ನು ಅವರು ಅಂಗೀಕರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

 

‘ನಾವು ದೆಹಲಿ ಸರ್ಕಾರಕ್ಕೂ ಪತ್ರವೊಂದನ್ನು ಕಳುಹಿಸಿದ್ದೇವೆ, ಸುಶೀಲ್ ಕುಮಾರ್ ಮತ್ತು ಅವರ ಸಹವರ್ತಿ ದೈಹಿಕ ಶಿಕ್ಷಣ ಶಿಕ್ಷಕರಾಗಿರುವ ಅಜಯ್ ಕುಮಾರ್ ಅವರ ವಿರುದ್ಧ ಇಲಾಖಾ ಕ್ರಮ ಕೈಗೊಳ್ಳಬೇಕು ‘ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

 

“ಎಫ್‌ಐಆರ್ ನೋಂದಾಯಿಸಿದ ನಂತರ, ನಾವು ಅವರಿಗೆ ನೋಟಿಸ್ ನೀಡಿದ್ದೇವೆ, ಆದರೆ ಅವರು ತನ್ನ ಫೋನ್ ಅನ್ನು ಸ್ವಿಚ್ ಆಫ್ ಮಾಡದ್ದಾರೆ. ಅಂದಿನಿಂದ ಅವರ ಪತ್ತೆಯಾಗಿಲ್ಲ.. ನಾವು ಅವರ ಸ್ನೇಹಿತರ ನಿವಾಸಗಳಲ್ಲಿ ಶೋಧ ನಡೆಸಿದ್ದೇವೆ ಮತ್ತು ಈಗ ಆತನ ಬಂಧನಕ್ಕೆ ಅನುಕೂಲವಾಗಲು ಮಾಹಿತಿ ನೀಡಿದವರಿಗೆ ಬಹುಮಾನವನ್ನು ಘೋಷಿಸಲು ನಿರ್ಧರಿಸಿದ್ದೇವೆ. ‘ಎಂದು ಪೊಲೀಸ್ ಮೂಲಗಳು ತಿಳಿಸಿವೆ.

 

ಹತ್ರಾಸಲ್ ಸ್ಟೇಡಿಯಂ ಪಾರ್ಕಿಂಗ್ ಪ್ರದೇಶದಲ್ಲಿ ಜಗಳವಾಡುವಾಗ ಸಾಗರ್ ರಾಣಾ ಅವರನ್ನು ಥಳಿಸಲಾಯಿತು. ಘಟನೆಯ ನಂತರ ಸುಶೀಲ್ ಕುಮಾರ್ ವಿರುದ್ಧ ಕೊಲೆ, ಅಪಹರಣ ಮತ್ತು ಕ್ರಿಮಿನಲ್ ಪಿತೂರಿಯ ಎಫ್‌ಐಆರ್ ದಾಖಲಿಸಲಾಗಿದೆ.

Desk

Recent Posts

ಕುಡಿಯುವ ನೀರಿನ ಸಮಸ್ಯೆ: ಕಲುಷಿತ ನೀರು ಸೇವಿಸಿ 114 ಮಂದಿಗೆ ಕಾಲರಾ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಧಾನಸಭೆ ಕ್ಷೇತ್ರವಾದ ವರುಣದ ತಗಡೂರು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಅಲ್ಲಿನ ಜನ…

4 mins ago

ಆರ್‌ಸಿಬಿ ಆಟಗಾರರಿಗೆ ಶೇಕ್ ಹ್ಯಾಂಡ್ ಮಾಡದೇ ಮೈದಾನದಿಂದ ತೆರಳಿದ ಧೋನಿ..!

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 27 ರನ್​ಗಳಿಂದ…

14 mins ago

ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ಬಂದಿದೆ ಹಸಿರು ಕಳೆ

ಬೇಸಿಗೆಯ ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ವರುಣನ ಕೃಪೆಯಿಂದ ಹಸಿರು ಕಳೆ ಬಂದಿದೆ.  ಜನವರಿಯಿಂದ ಏಪ್ರಿಲ್ ತನಕವೂ ಮಳೆ ಸುರಿಯದ…

25 mins ago

ಆರ್​ಸಿಬಿಗೆ ಟ್ವೀಟ್​ ಮೂಲಕ ವಿಜಯ್​ ಮಲ್ಯ ಅಭಿನಂದನೆ

ಶನಿವಾರ ತಡರಾತ್ರಿ ನಡೆದ ಐಪಿಎಲ್​ನ ರೋಚಕ ಪಂದ್ಯದಲ್ಲಿ ಕನ್ನಡಿಗರ ನೆಚ್ಚಿನ ತಂಡವಾದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಹಾಲಿ ಚಾಂಪಿಯನ್​…

35 mins ago

ತಾಯಿಯ ಶವದ ಜೊತೆಗೆ ನಾಲ್ಕು ದಿನ ಕಳೆದಿದ್ದ ಬುದ್ಧಿಮಾಂದ್ಯ ಪುತ್ರಿಯೂ ಮೃತ್ಯು

ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿದ ತನ್ನ ತಾಯಿಯ ಮೃತದೇಹದ ಮುಂದೆ ಅನ್ನ ನೀರು ಇಲ್ಲದೆ ಇದ್ದ ವಿಶೇಷಚೇತನ ಮಗಳು ಕೂಡ…

41 mins ago

ಗರ್ಭಿಣಿಯರಲ್ಲಿ ಅಧಿಕ ರಕ್ತದೊತ್ತಡ ಜೀವಕ್ಕೆ ಗಂಡಾಂತರ

ಇಂದಿನ ದಿನಗಳಲ್ಲಿ ರಕ್ತದೊತ್ತಡದ ಸಮಸ್ಯೆ ಸರ್ವೇಸಾಮಾನ್ಯವಾಗಿದೆ. ಹೀಗೆ ರಕ್ತದೊತ್ತಡ ಸಮಸ್ಯೆ ಕಾಡುವುದಕ್ಕೆ ಕಾರಣಗಳು ಹಲವು. ಅದರಲ್ಲಿಯೂ ಮುಖ್ಯವಾಗಿ ನಮ್ಮ ಜೀವನ…

45 mins ago