News Karnataka Kannada
Sunday, May 05 2024
ಕ್ರೀಡೆ

ಒಲಿಂಪಿಕ್-2020ಕ್ಕೆ ಇಂದು ತೆರೆ: ಧ್ವಜ ಹೊತ್ತು ಸಾಗಲಿದ್ದಾರೆ ಬಜರಂಗ್

Rsz Screenshot 20210807 165652 Samsung Internet
Photo Credit :

ಟೋಕಿಯೊ: ಒಲಿಂಪಿಕ್-2020ಕ್ಕೆ ಇಂದು ಸಂಜೆ ತೆರೆ ಬೀಳಲಿದೆ. ಟೋಕಿಯೊದ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಸಂಜೆ 4.30ಕ್ಕೆ ನಡೆಯಲಿರುವ ವರ್ಣರಂಜಿತ ಸಮಾರಂಭದಲ್ಲಿ ಮುಕ್ತಾಯ ಸಮಾರಂಭ ನಡೆಯಲಿದೆ. ಭಾರತ ಈ ಬಾರಿಯ ಒಲಿಂಪಿಕ್ ನಲ್ಲಿ ದಾಖಲೆಯ ಏಳು ಪ್ರಶಸ್ತಿಗಳನ್ನು ಗೆದ್ದುಕೊಂಡಿದೆ.

ಕುಸ್ತಿಯಲ್ಲಿ ಕಂಚಿನ ಪದಕ ಗೆದ್ದಿರುವ ಭಾರತದ ಬಜರಂಗ್ ಪುನಿಯಾ ಧ್ವಜವನ್ನು ಹೊತ್ತು ಸಾಗಲಿದ್ದಾರೆ. 17 ದಿನಗಳಲ್ಲಿ ನಡೆದ ವರ್ಣರಂಜಿತ ಕ್ರೀಡೋತ್ಸವಕ್ಕೆ ತೆರೆಬೀಳಲಿದೆ. ಈ ಬಾರಿ ಕ್ರೀಡಾಂಗಣದಲ್ಲಿ ಪ್ರೇಕ್ಷಕರಿಲ್ಲದೆ 17 ದಿನಗಳ ಕ್ರೀಡಾ ಚಟುವಟಿಕೆ ಮುಕ್ತಾಯವಾಗುತ್ತಿದೆ. ಅದ್ದೂರಿ ಸಮಾರೋಪ ಸಮಾರಂಭವು ಸೋನಿ ಟೆನ್, ಸೋನಿ ಲಿವ್‌ ನಲ್ಲಿ ಪ್ರಸಾರವಾಗಲಿದೆ.

ಕೊನೆಯ ದಿನವಾದ ಇಂದು ಪುರುಷರ ಮ್ಯಾರಥಾನ್ ಫೈನಲ್, ಮಹಿಳಾ ರಿದಮಿಕ್ ಜಿಮ್ನಾಸ್ಟಿಕ್ಸ್ ಮತ್ತು ಮಹಿಳಾ ಬಾಸ್ಕೆಟ್‌ಬಾಲ್ ಪದಕ ಸುತ್ತಿನ ಪಂದ್ಯ ನಡೆಯುತ್ತಿದೆ. ಹ್ಯಾಂಡ್‌ಬಾಲ್, ಬಾಕ್ಸಿಂಗ್, ಟ್ರ್ಯಾಕ್ ಸೈಕ್ಲಿಂಗ್, ವಾಟರ್ ಪೋಲೋ ಮತ್ತು ವಾಲಿಬಾಲ್‌ಗಾಗಿ ಪದಕ ಪಂದ್ಯಗಳನ್ನು ನಡೆಯುತ್ತಿದೆ.

ಇಂದು ಮುಕ್ತಾಯ ಸಮಾರಂಭದಲ್ಲಿ ಒಲಿಂಪಿಕ್ಸ್‌ ಧ್ವಜವನ್ನು 2024ರಲ್ಲಿ ಕ್ರೀಡಾಕೂಟಕ್ಕೆ ಆತಿಥ್ಯ ವಹಿಸುವ ಫ್ರಾನ್ಸ್‌ಗೆ ಹಸ್ತಾಂತರಿಸಲಾಗುತ್ತದೆ. ಇದೇ ತಿಂಗಳು 24ರಿಂದ ಪ್ಯಾರಾಲಿಂಪಿಕ್ಸ್‌ ಆರಂಭಗೊಳ್ಳಲಿದ್ದು, ಆ ಕ್ರೀಡಾಕೂಟಕ್ಕೂ ಟೋಕಿಯೋ ಆತಿಥ್ಯ ನೀಡಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 3 / 5. Vote count: 2

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು