ಕ್ರೀಡೆ

ಕಾಮನ್‌ವೆಲ್ತ್ ಕೂಟ: ವೇಟ್‌ಲಿಫ್ಟರ್ ಮಿರಾಬಾಯಿ ಮನವಿ ತಿರಸ್ಕೃತ

ನವದೆಹಲಿ:  ವೇಟ್‌ಲಿಫ್ಟರ್ ಮೀರಾಬಾಯಿ ಚಾನು ಮುಂಬರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ 55 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ನೀಡಲು ಆಯೋಜಕರು ನಿರಾಕರಿಸಿದ್ದಾರೆ.

ಅದರಿಂದಾಗಿ ಮೀರಾ, 49 ಕೆಜಿ ವಿಭಾಗದಲ್ಲಿ ಸ್ಪರ್ಧಿಸಬೇಕಿದೆ.ಮೀರಾಬಾಯಿ ಅವರನ್ನು 55 ಕೆಜಿ, ಜಿಲಿ ದಲಬೆಹೆರಾ (49 ಕೆಜಿ) ಮತ್ತು ಎಸ್‌. ಬಿಂದ್ಯಾರಾಣಿ ದೇವಿ (59ಕೆಜಿ) ಅವರನ್ನು ಕಣಕ್ಕಿಳಿಸಲು ಭಾರತ ವೇಟ್‌ಲಿಫ್ಟಿಂಗ್ ಫೆಡರೇಷನ್ (ಐಡಬ್ಲ್ಯುಎಲ್‌ಎಫ್) ಯೋಜಿಸಿತ್ತು. ಇದರಿಂದಾಗಿ ಭಾರತಕ್ಕೆ ವೆಟ್‌ಲಿಫ್ಟಿಂಗ್‌ನಲ್ಲಿ ಪದಕಗಳನ್ನು ಜಯಿಸುವ ಅವಕಾಶಗಳು ಹೆಚ್ಚುತ್ತಿದ್ದವು.

ಬರ್ಮಿಂಗ್‌ಹ್ಯಾಮ್‌ನಲ್ಲಿ ಜುಲೈ 28 ರಿಂದ ಆಗಸ್ಟ್ 8ರವರೆಗೆ ನಡೆಯಲಿರುವ ಕಾಮನ್‌ವೆಲ್ತ್ ಕೂಟದಲ್ಲಿ 64 ಕೆಜಿ ವಿಭಾಗದ ವೇಟ್‌ಲಿಫ್ಟಿಂಗ್‌ನಲ್ಲಿ ಪಾಪ್ಪಿ ಹಜಾರಿಕಾ ಸ್ಪರ್ಧಿಸುವರು.

ಮೀರಾಬಾಯಿ ಹೋದ ವರ್ಷ ಟೋಕಿಯೊ ಒಲಿಂಪಿಕ್ಸ್‌ನಲ್ಲಿ 49 ಕೆಜಿ ವಿಭಾಗದಲ್ಲಿಯೇ ಬೆಳ್ಳಿ ಪದಕ ಜಯಿಸಿದ್ದರು.

‘ಮೀರಾ ಮನವಿಯನ್ನು ತಳ್ಳಿ ಹಾಕಿರುವುದರಿಂದ ಯಾವುದೇ ನಷ್ಟವಿಲ್ಲ. ಅವರ ಪದಕ ಜಯದ ಅವಕಾಶ ಈಗಲೂ ಇದೆ. ಆದ್ದರಿಂದ ನಿರಾಶರಾಗಬೇಕಿಲ್ಲ’ ಎಂದು ಅವರ ಕೋಚ್ ವಿಜಯ್ ಶರ್ಮಾ ತಿಳಿಸಿದ್ದಾರೆ.

Swathi MG

Recent Posts

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

4 mins ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

33 mins ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

49 mins ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

1 hour ago

ಬಹುಭಾಷೆಯಲ್ಲಿ ಡಬ್ ಆಗಿದೆ ದೊಡ್ಮನೆ ಕುಡಿಯ ‘ಯುವ’ ಸಿನಿಮಾ

ದೊಡ್ಮನೆ ಕುಡಿ ಯುವರಾಜ್‌ಕುಮಾರ್ ನಟನೆಯ ‘ಯುವ’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು ಇದೀಗ ಬಹುಭಾಷೆಯಲ್ಲಿ ಯುವ ಸಿನಿಮಾ ಡಬ್ ಆಗಿದೆ.…

1 hour ago

ಕೊನೆಯ ಸ್ಥಾನದೊಂದಿಗೆ ಐಪಿಎಲ್ ಅಂತ್ಯಗೊಳಿಸಿದ ಮುಂಬೈ ಇಂಡಿಯನ್ಸ್

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ  ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ  ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.

2 hours ago