Categories: ಕ್ರೀಡೆ

ಕುತೂಹಲ ಮೂಡಿಸಿದ ಟೀಂ ಇಂಡಿಯಾ ಹೊಸ ನಾಯಕನ ಆಯ್ಕೆ ಪ್ರಕ್ರಿಯೆ

ನವೆದೆಹಲಿ : ಟೀಂ ಇಂಡಿಯಾದ ನೂತನ ಕೋಚ್ ಆಗಿ ‘ಗೋಡೆ’ ಖ್ಯಾತಿಯ ರಾಹುಲ್ ದ್ರಾವಿಡ್ ನೇಮಕವಾಗಿದ್ದಾರೆ. ‘ದಿ ಲೆಜೆಂಡ್’ ಭಾರತ ತಂಡದ ಮುಖ್ಯ ಕೋಚ್ ಹುದ್ದೆಯ ಸಾರಥ್ಯ ವಹಿಸುತ್ತಿರುವುದು ಕನ್ನಡಿಗರಿಗೆ ಇನ್ನಿಲ್ಲದ ಖುಷಿ ತಂದಿದೆ.

ಯುಎಇಯಲ್ಲಿ ನಡೆಯುತ್ತಿರುವ ಟಿ-20 ವಿಶ್ವಕಪ್ ​ ಬಳಿಕ ದ್ರಾವಿಡ್ ಟೀಂ ಇಂಡಿಯಾಗೆ ಮಾರ್ಗದರ್ಶಕರಾಗಲಿದ್ದಾರೆ.ಟಿ-20 ವಿಶ್ವಕಪ್ ಮುಗಿದ ಬಳಿಕ ಭಾರತ ತಂಡವು ನ್ಯೂಜಿಲೆಂಡ್ ವಿರುದ್ಧ ಸರಣಿ ಆಡಲಿದೆ. ಟಿ-20 ವಿಶ್ವಕಪ್​ ಬೆನ್ನಲ್ಲೇ ನಾಯಕ ಸ್ಥಾನದಿಂದ ವಿರಾಟ್ ಕೊಹ್ಲಿ ಕೆಳಗಿಳಿಯಲಿದ್ದಾರೆ. ಹೊಸ ಕೋಚ್ ಬಗ್ಗೆ ಎದ್ದಿದ್ದ ಊಹಾಪೋಗಳಿಗೆ ಫುಲ್ ಸ್ಟಾಪ್ ಹಾಕಿದ್ದ ಬಿಸಿಸಿಐ ಬುಧವಾರ ರಾಹುಲ್ ದ್ರಾವಿಡ್ ಹೆಸರು ಘೋಷಿಸಿತ್ತು. ಆದರೆ ಇನ್ನೂ ಕೊಹ್ಲಿ ಉತ್ತರಾಧಿಕಾರಿಯನ್ನು ಆಯ್ಕೆ ಮಾಡಿಲ್ಲ. ಹಲವಾರು ಕ್ರಿಕೆಟ್ ತಜ್ಞರು ರೋಹಿತ್ ಶರ್ಮಾ ಮುಂಚೂಣಿಯಲ್ಲಿದ್ದಾರೆ ಎಂದು ನಂಬಿದರೆ, ಕೆಲವರು ಕನ್ನಡಿಗ ಕೆ.ಎಲ್.ರಾಹುಲ್ ಮತ್ತು ರಿಷಭ್ ಪಂತ್ ಹೆಸರನ್ನು ಸೂಚಿಸಿದ್ದಾರೆ. ಹೊಸ ನಾಯಕನ ಆಯ್ಕೆಗೆ ಬಿಸಿಸಿಐ ಮುಂದಾಗಿದ್ದು, ಯಾರು ಟೀಂ ಇಂಡಿಯಾದ ನಾಯಕನಾಗಲಿದ್ದಾರೆಂಬುದು ಕುತೂಹಲ ಮೂಡಿಸಿದೆ.

ಹೊಸದಾಗಿ ನೇಮಕಗೊಂಡ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರಿಗೆ ಹಲವು ಪ್ರಶ್ನೆಗಳಿಗೆ ಕೇಳಲಾಗಿತ್ತು. ಈ ಪೈಕಿ ಭಾರತ ತಂಡದ ಮುಂದಿನ ನಾಯಕ ಯಾರಾಗಬೇಕೆಂದು ಬಯಸುತ್ತೀರಿ ಎಂದು ಪ್ರಶ್ನಿಸಲಾಗಿತ್ತು. ಇದಕ್ಕೆ ಉತ್ತರಿಸಿದ್ದ ದ್ರಾವಿಡ್, ‘ರೋಹಿತ್ ಶರ್ಮಾ ನನ್ನ ಮೊದಲ ಆಯ್ಕೆ. ಇದರ ಹೊತರಾಗಿ ಕೆ.ಎಲ್.ರಾಹುಲ್ ನನ್ನ ಆಯ್ಕೆ’ ಅಂತಾ ತಿಳಿಸಿದ್ದಾರೆ. ಹೀಗಾಗಿ ಟೀಂ ಇಂಡಿಯಾ(Team India)ದ ಮುಂದಿನ ನಾಯಕ ಹಿಟ್ ಮ್ಯಾನ್ ರೋಹಿತ್ ಶರ್ಮಾ ಆಯ್ಕೆ ಬಹುತೇಕ ಪಕ್ಕಾ ಆಗಿದೆ. ಕನ್ನಡಿಗ ಕೆ.ಎಲ್.ರಾಹುಲ್ ಗೆ ಉಪನಾಯಕನ ಸ್ಥಾನ ಸಿಗಬಹುದು ಎಂದು ನಿರೀಕ್ಷಿಸಲಾಗಿದೆ.

ಸದ್ಯ ದ್ರಾವಿಡ್ ಅವರು ಭಾರತ ತಂಡದ ನಾಯಕತ್ವಕ್ಕೆ ರೋಹಿತ್ ಶರ್ಮಾ  ಹಾಗೂ ಕೆ.ಎಲ್.ರಾಹುಲ್ ಹೆಸರುಗಳನ್ನು ಸೂಚಿಸಿದ್ದು, ಅಂತಿಮವಾಗಿ ಬಿಸಿಸಿಐ ಯಾರಿಗೆ ಮಣೆಹಾಕಲಿದೆ ಎಂಬುದನ್ನು ಕಾದು ನೋಡಬೇಕಿದೆ. ಟಿ-20 ವಿಶ್ವಕಪ್ ಬಳಿಕ ಟೀಂ ಇಂಡಿಯಾ ನ್ಯೂಜಿಲೆಂಡ್ ವಿರುದ್ಧದ ಸಣರಿಯಲ್ಲಿ 3 ಟಿ-20, 2 ಟೆಸ್ಟ್ ಪಂದ್ಯಗಳನ್ನು ಆಡಲಿದೆ. ನ.17ರಂದು ಜೈಪುರ, ನ.19ರಂದು ರಾಂಚಿ ಮತ್ತು ನ.21ರಂದು ಕೋಲ್ಕತ್ತಾದಲ್ಲಿಟಿ-20 ಪಂದ್ಯಗಳು ನಡೆಯಲಿವೆ. ನ.25 ರಿಂದ 29ರವರೆಗೆ ಕಾನ್ಪುರದಲ್ಲಿ ಮತ್ತು ಡಿ.3 ರಿಂದ 7ರವರೆಗೆ ಮುಂಬೈನಲ್ಲಿ ಟೆಸ್ಟ್ ಪಂದ್ಯಗಳು ನಡೆಯಲಿವೆ.

Gayathri SG

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

7 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

7 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

7 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

8 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

8 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

8 hours ago