News Karnataka Kannada
Monday, April 29 2024
ಕ್ರೀಡೆ

ಕೊಹ್ಲಿ ವರ್ಕೌಟ್ ಗೆ ಭಾರಿ ಕಾಮೆಂಟ್ಸ್

New Project (6)
Photo Credit :

ಮುಂಬೈ : ವಿರಾಟ್ ಕೊಹ್ಲಿ ವರ್ಕೌಟ್ ಮಾಡುತ್ತಿರುವ ವಿಡಿಯೋವನ್ನು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದು ಸಾಕಷ್ಟು ಕಮೆಂಟ್​ಗಳು ಬಂದಿವೆ. ಈ ಪೈಕಿ ಅಫ್ಘಾನಿಸ್ತಾನದ ಸ್ಟಾರ್ ಸ್ಪಿನ್ನರ್, ಐಪಿಎಲ್​ನ ಸನ್​ರೈಸರ್ಸ್​ ತಂಡದ ಆಟಗಾರ ರಶೀದ್ ಖಾನ್ ಕೂಡ ಎಮೋಜಿಯನ್ನು ಹಾಕಿ ಕಮೆಂಟ್ ಮಾಡಿದ್ದು ಕೊಹ್ಲಿ ವರ್ಕೌಟ್​ಗೆ ಫಿದಾ ಆಗಿದ್ದಾರೆ.

ವಿರಾಟ್ ಕೊಹ್ಲಿಗೆ ಎರಡನೇ ಟೆಸ್ಟ್ ಮುಖ್ಯವಾಗಿದೆ. ಮೊದಲ ಟೆಸ್ಟ್​ನಲ್ಲಿ ಶೂನ್ಯಕ್ಕೆ ನಿರ್ಗಮಿಸಿದ್ದ ಕಿಂಗ್ ಕೊಹ್ಲಿ ಕಳಪೆ ಫಾರ್ಮ್​ನಲ್ಲಿದ್ದಾರೆ. ಹೀಗಾಗಿ ಮುಂದಿನ ಪಂದ್ಯದಲ್ಲಿ ಆಡಲೇಬೇಕಿದೆ. ಸಾಕಷ್ಟು ಕುತೂಹಲ ಕೆರಳಿಸಿದ್ದ ಭಾರತ ಹಾಗೂ ಇಂಗ್ಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯ ಯಾವುದೇ ಫಲಿತಾಂಶ ಕಾಣದೆ ಡ್ರಾನಲ್ಲಿ ಕೊನೆಗೊಳಿಸಬೇಕಾಗಿ ಬಂತು.

ಮೊದಲ ಟೆಸ್ಟ್​ನ ಅಂತಿಮ ಐದನೇ ದಿನ ಬೆಂಬಿಡದೆ ಕಾಡಿದ ಮಳೆರಾಯ ಆಟಗಾರರನ್ನು ಮೈದಾನಕ್ಕಿಳಿಯಲು ಅವಕಾಶವನ್ನೇ ನೀಡಲಿಲ್ಲ. ಸುಲಭವಾಗಿ ಗೆಲುವು ಸಾಧಿಸಬಹುದಾಗಿದ್ದ ಟೀಮ್ ಇಂಡಿಯಾಕ್ಕೆ ನಿರಾಸೆಯಾಯಿತು.

ಆಗಸ್ಟ್​ 12 ರಿಂದ 2ನೇ ಟೆಸ್ಟ್​ ಪಂದ್ಯ ಆರಂಭವಾಗಲಿದೆ. ಹೀಗಾಗಿ ಇಂದು ಮತ್ತು ನಾಳೆ ಟೀಮ್ ಇಂಡಿಯಾ ಭರ್ಜರಿ ಅಭ್ಯಾಸದಲ್ಲಿ ತೊಡಗಿಕೊಳ್ಳಲಿದೆ. ಭಾರತ ತಂಡ ಲಂಡನ್​ಗೆ ತೆರಳುತ್ತಿರುವ ಬಗ್ಗೆ ಟೆಸ್ಟ್​ ಸ್ಪೆಷಲಿಸ್ಟ್ ಚೇತೇಶ್ವರ್ ಪೂಜಾರ ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಮೊಹಮ್ಮದ್ ಶಮಿ, ವೃದ್ಧಿಮಾನ್ ಸಾಹಾ, ಮೊಹಮ್ಮದ್ ಸಿರಾಜ್ ಸೇರಿದಂತೆ ತಂಡದ ಇತರೆ ಸಿಬ್ಬಂದಿಗಳು ಕಾಣಿಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು