Categories: ಕ್ರೀಡೆ

ಬೆಂಗಳೂರು ತಂಡ ಸೇರಿದ ಮಾಜಿ ಆರ್ ಸಿಬಿ ಆಟಗಾರ ರಜತ್ ಪಾಟಿದಾರ್

ಮುಂಬೈ:  ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2022 ರ ಉಳಿದ ಪಂದ್ಯಗಳಿಗೆ  ರಜತ್ ಪಾಟಿದಾರ್ ಅವರನ್ನು ಸೇರಿಸಿಕೊಂಡಿದೆ.

ಗಾಯಗೊಂಡಿರುವ ಲವ್ನಿತ್ ಸಿಸೋಡಿಯಾ ಬದಲಿಗೆ ಪಾಟಿದಾರ್ ಆರ್ ಸಿಬಿ ಕ್ಯಾಂಪ್ ಸೇರಿದ್ದಾರೆ.

ದೇಶಿ ಕ್ರಿಕೆಟ್ ನಲ್ಲಿ ಮಧ್ಯ ಪ್ರದೇಶವನ್ನು ಪ್ರತಿನಿಧಿಸುವ ರಜತ್ ಪಾಟಿದಾರ್, 31 ಟಿ20 ಪಂದ್ಯಗಳಲ್ಲಿ 861 ರನ್ ಗಳಿಸಿದ್ದಾರೆ. ಇದರಲ್ಲಿ ಏಳು ಅರ್ಧಶತಕಗಳು ಸೇರಿವೆ. ಈ ಹಿಂದೆ ನಾಲ್ಕು ಬಾರಿ ಆರ್ ಸಿಬಿ ತಂಡದಲ್ಲಿದ್ದ ರಜತ್ ಈ ಬಾರಿಯ ಹರಾಜಿನಲ್ಲಿ ಅನ್ ಸೋಲ್ಡ್ ಆಗಿದ್ದರು. ಇದೀಗ 20 ಲಕ್ಷ ರೂ ಮೂಲಬೆಲೆಗೆ ಮತ್ತೆ ಆರ್ ಸಿಬಿ ಕ್ಯಾಂಪ್ ಸೇರಿದ್ದಾರೆ.

2021ರ ಐಪಿಎಲ್ ಕೂಟದಲ್ಲಿ ರಜತ್ ಪಾಟಿದಾರ್ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ನಾಲ್ಕು ಪಂದ್ಯಗಳನ್ನು ಆಡಿದ್ದರು. ಇದರಲ್ಲಿ 114.5ರ ಸ್ಟ್ರೈಕ್ ರೇಟ್ ನಲ್ಲಿ 71 ರನ್ ಗಳಿಸಿದ್ದಾರೆ.

ಈ ಬಾರಿಯ ಕೂಟದಲ್ಲಿ ಆರ್ ಸಿಬಿ ತಂಡ ಎರಡು ಪಂದ್ಯವಾಡಿದ್ದು, ಒಂದು ಪಂದ್ಯ ಸೋತು ಮತ್ತೊಂದರಲ್ಲಿ ಗೆಲುವು ಕಂಡಿದೆ. ತನ್ನ ಮುಂದಿನ ಪಂದ್ಯವನ್ನು ರಾಜಸ್ಥಾನ ರಾಯಲ್ಸ್ ವಿರುದ್ಧ ಎಪ್ರಿಲ್ 5ರಂದು ವಾಂಖೆಡೆ ಮೈದಾನದಲ್ಲಿ ಆಡಲಿದೆ.

Swathi MG

Recent Posts

ನಿಮ್ಮ ಡಲ್‌ಸ್ಕಿನ್‌ಗೆ ಇದು ಬೆಸ್ಟ್‌ ಪಾನೀಯ : ಎರಡು ವಾರದಲ್ಲೆ ಉತ್ತಮ ರಿಸಲ್ಟ್‌

ಬೇಸಿಗೆಯಲ್ಲಿ ಬಿಸಿಲಿನ ತಾಪ, ಕಲುಷಿತ ನೀರು, ಮಾಲಿನಗೊಂಡ ವಾತಾವರಣದಿಂದಾಗಿ ಸಾಕಷ್ಟು ಜನರು ಚರ್ಮದ ಸಮಸ್ಯೆಯನ್ನು ಅನುಭವಿಸುತ್ತಾರೆ. ಅದರಲ್ಲೂ ಡಲ್‌ಸ್ಕಿನ್‌ ಇರುವವರೂ…

2 mins ago

ಇಂದು 49 ಕ್ಷೇತ್ರಗಳಲ್ಲಿ 5ನೇ ಹಂತದ ಮತದಾನ

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನವು ಸೋಮವಾರ (ಮೇ 20) ನಡೆಯಲಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ…

20 mins ago

ಇಂದಿನ ರಾಶಿ ಭವಿಷ್ಯ : ಈ ರಾಶಿಯವರಿಗೆ ಹೊಸ ಉದ್ಯೋಗ ಆಫರ್ ಬರಲಿದೆ

ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ​​​​​ 20) ರಾಶಿ ಭವಿಷ್ಯದಲ್ಲಿ ಯಾರ ರಾಶಿ…

30 mins ago

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

8 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

9 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

9 hours ago