ಚೆನ್ನೈ: ಚೆನ್ನೈ ಸೂಪರ್ ಕಿಂಗ್ಸ್ ತಂಡ ತನ್ನ ನೂತನ ಸಾರಥಿ ಮಹೇಂದ್ರ ಸಿಂಗ್ ಧೋನಿ, ಆಲ್ರೌಂಡರ್ ರವೀಂದ್ರ ಜಡೇಜಾಗೆ ತಂಡದ ನಾಯಕತ್ವ ಹಸ್ತಾಂತರಿಸಿದ್ದಾರೆ.
ಈ ಕುರಿತು ಫ್ರಾಂಚೈಸಿ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, 2012ರಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅವಿಭಾಜ್ಯ ಅಂಗವಾಗಿರುವ ಜಡೇಜಾ, ಇನ್ಮುಂದೆ ಸಿಎಸ್ಕೆ ತಂಡವನ್ನು ಮುನ್ನಡೆಸಲಿದ್ದಾರೆ ಎಂದಿದೆ.
2008 ರಲ್ಲಿ ಲೀಗ್ ಪ್ರಾರಂಭವಾದಾಗಿನಿಂದ ಸಿಎಸ್ಕೆ ನಾಯಕರಾಗಿರುವ ಧೋನಿ, ಈ ಋತುವಿನಲ್ಲಿ ತಮ್ಮ ಕೊನೆಯ ಐಪಿಎಲ್ನಲ್ಲಿ ಆಡುವ ಸಾಧ್ಯತೆಯಿದೆ. ದೋನಿ ಈಗಾಗಲೇ ಅಂತರರಾಷ್ಟ್ರೀಯ ಕ್ರಿಕೆಟ್ ನಿಂದ ನಿವೃತ್ತರಾಗಿದ್ದಾರೆ.