Categories: ಕ್ರೀಡೆ

ಚೆನ್ನೈ ವಿರುದ್ಧ ಗೆಲುವಿನ ಕೇಕೆ ಹಾಕಿದ ರಾಜಸ್ಥಾನ್ ರಾಯಲ್ಸ್

ಅಬುದಾಬಿ : ಶನಿವಾರ ನಡೆದ ಐಪಿಎಲ್ ಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್  ಏಳು ವಿಕೆಟ್  ಅಂತರದ ಭರ್ಜರಿ ಜಯ ಗಳಿಸಿದೆ.  ಯುವ ಆಟಗಾರರಾದ ಯಶಸ್ವಿ ಜೈಸ್ವಾಲ್ ಹಾಗೂ ಶಿವದುಬೆ ಅವರ ಆಕರ್ಷಕ ಅರ್ಧ ಶತಕದ ನೆರವಿನಿಂದ ರಾಜಸ್ಥಾನ ರಾಯಲ್ಸ್  ತಂಡ ಗೆಲುವು ಸಾಧಿಸಿ, ಪ್ಲೇ- ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ.

ಮೊದಲು ಬ್ಯಾಟ್ ಮಾಡಿದ ಸಿಎಸ್ ಕೆ 20 ಓವರ್ ಗಳಲ್ಲಿ 4 ವಿಕೆಟ್ ಗೆ 189 ರನ್ ಕಲೆ ಹಾಕಿತು. ಗುರಿಯನ್ನು ಹಿಂಬಾಲಿಸಿದ ಆರ್ ಆರ್ 17.3 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು 190 ರನ್ ಸೇರಿಸಿತು. ರಾಜಸ್ಥಾನ ಗೆಲುವಿನಲ್ಲಿ ಮಿಂಚಿದ್ದು ಯುವ ಆಟಗಾರ ಯಶಸ್ವಿ ಜೈಸ್ವಾಲ್ ಹಾಗೂ ಶಿವಂ ದುಬೆ. ಈ ಇಬ್ಬರು ಆಟಗಾರರು ಸಮಯೋಚಿತ ಆಟದ ಪ್ರದರ್ಶನ ನೀಡಿದ ಬಲದಿಂದ ರಾಜಸ್ಥಾನ ಅರ್ಹ ಗೆಲುವು ದಾಖಲಿಸಿತು.

ಆರಂಭಿಕರಾದ ಎವಿನ್ ಲೂಯಿಸ್ ಹಾಗೂ ಜೈಸ್ವಾಲ್ ಜೋಡಿ ಸ್ಫೋಟಕ ಆರಂಭ ನೀಡಿತು. 5.2 ಓವರ್ ಗಳಲ್ಲಿ ಈ ಜೋಡಿ 77 ರನ್ ಸೇರಿಸಿತು. ಲೂಯಿಸ್ 27 ರನ್ ಬಾರಿಸಿ ಔಟ್ ಆದರು. ಯುವ ಆಟಗಾರ ಜೈಸ್ವಾಲ್ ಬಿರುಸಿನ ಬ್ಯಾಟಿಂಗ್ ನಡೆಸಿದರು. ಇವರು 21 ಎಸೆತಗಳಲ್ಲಿ 6 ಬೌಂಡರಿ, 3 ಸಿಕ್ಸರ್ ಸಹಾಯದಿಂದ 50 ರನ್ ಸಿಡಿಸಿದರು. ಮಧ್ಯಮ ಕ್ರಮಾಂಕದಲ್ಲಿ ನಾಯಕ ಸಂಜು 28 ರನ್ ಸಿಡಿಸಿದರು. ಶಿವಂ ದುಬೆ ಸಹ ತನ್ನ ನೈಜ ಆಟವನ್ನು ಆಡಿ ಗಮನ ಸೆಳೆದರು. ಇವರು 64 ರನ್ ಸೇರಿಸಿ ಅಜೇಯರಾಗುಳಿದರು.

ಚೆನ್ನೈ ತಂಡದ ಪರ ಶಾರ್ದೂಲ್ ಠಾಕೂರ್ ಎರಡು ವಿಕೆಟ್ ಕಬಳಿಸಿದರು. ಭರ್ಜರಿ ಲಯದಲ್ಲಿರುವ ಯುವ ಆಟಗಾರ ರುತುರಾಜ್ ಗಾಯಕ್ವಾಡ್ ತಮ್ಮ ಬ್ಯಾಟಿಂಗ್ ಕ್ಷಮತೆಯನ್ನು ಮತ್ತೊಮ್ಮೆ ತೋರಿಸಿದರು. ಸ್ಪಿನ್ ಹಾಗೂ ವೇಗದ ಬೌಲರ್ ಗಳನ್ನು ಲೆಕ್ಕಿಸದೆ ಬ್ಯಾಟ್ ಮಾಡಿದ ಇವರು ರನ್ ಮಹಲ್ ಕಟ್ಟಿದರು. ಇವರ ಅಮೋಘ ಇನ್ನಿಂಗ್ಸ್ ನಲ್ಲಿ 9 ಬೌಂಡರಿ ಸೇರಿದ್ದು, ಐದು ಬಾರಿ ಚೆಂಡು ಪ್ರೇಕ್ಷಕರ ಗ್ಯಾಲರಿಯ ದರ್ಶನ ಮಾಡಿದೆ. ಪಂದ್ಯದ ಕೊನೆಯ ಎಸೆತದಲ್ಲಿ ಸೊಗಸಾದ ಸಿಕ್ಸರ್ ಬಾರಿಸುವ ಮೂಲಕ ರುತುರಾಜ್ ಶತಕ ಬಾರಿಸಿದರು. 60 ಎಸೆತಗಳಲ್ಲಿ ಗಾಯಕ್ವಾಡ್ ಅಜೇಯ 101 ರನ್ ಸಿಡಿಸಿದರು.

ಆರಂಭಿಕರಾದ ರುತುರಾಜ್ ಹಾಗೂ ಫಾಫ್ ಡುಪ್ಲೇಸಿಸ್ ಜೋಡಿ 6.5 ಓವರ್ ಗಳಲ್ಲಿ 47 ರನ್ ಸೇರಿಸಿತು. ಸುರೇಶ್ ರೈನಾ ಮೂರು ರನ್ ಗಳಿಸಿ ಔಟ್ ಆದರು. ಮೂರನೇ ವಿಕೆಟ್ ಗೆ ಗಾಯಕ್ವಾಡ್ ಮತ್ತು ಮೋಯಿನ್ ಅಲಿ (21) ಜೋಡಿ 57 ರನ್ ಸೇರಿಸಿತು. ಮೋಯಿನ್ ಅಲಿ ತೆವಾಟಿಯಾ ಎಸೆತದಲ್ಲಿ ಔಟ್ ಆದರು. ಅಂಬಟಿ ರಾಯುಡು ಬಂದು ಹೋಗುವ ಸಂಪ್ರದಾಯ ಮುಗಿಸಿದರು. ಆಲ್ ರೌಂಡರ್ ರವೀಂದ್ರ ಜಡೇಜಾ ಕೇವಲ 15 ಎಸೆತಗಳಲ್ಲಿ 32 ರನ್ ಕಲೆ ಹಾಕಿದರು. ರಾಜಸ್ಥಾನ ಪರ ರಾಹುಲ್ ತೆವಾಟಿಯಾ ಮೂರು ವಿಕೆಟ್ ಕಬಳಿಸಿದರು

Raksha Deshpande

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

43 mins ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

1 hour ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

1 hour ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

3 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

3 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

3 hours ago