ಜರ್ಮನ್ ಓಪನ್ ಸೂಪರ್ 300 ಬ್ಯಾಡ್ಮಿಂಟನ್ ಟೂರ್ನಮೆಂಟ್ನಲ್ಲಿ ಒಲಿಂಪಿಕ್ಸ್ ಪದಕ ವಿಜೇತೆ ಪಿ.ವಿ.ಸಿಂಧು ಮತ್ತು ವಿಶ್ವ ಚಾಂಪಿಯನ್ಶಿಪ್ನಲ್ಲಿ ಬೆಳ್ಳಿ ಪದಕ ಜಯಿಸಿರುವ ಕಿಡಂಬಿ ಶ್ರೀಕಾಂತ್ 2ನೇ ಸುತ್ತು ಪ್ರವೇಶಿಸಿದ್ದಾರೆ.
7ನೇ ಶ್ರೇಯಾಂಕದ ಸಿಂಧು ಮೊದಲ ಸುತ್ತಿನಲ್ಲಿ ಥಾಯ್ಲೆಂಡ್ನ ಬುಸಾನನ್ ಒಂಗ್ಬಮ್ರುಂಗಫನ್ ವಿರುದ್ಧ 21-8, 21-7ರ ಅಂತರದಲ್ಲಿ ಯಾವುದೇ ಪೈಪೋಟಿಯಿಲ್ಲದೆ ಜಯ ಸಾಧಿಸಿದರು.
ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಟೂರ್ನಿಯಲ್ಲಿ 8ನೇ ಶ್ರೇಯಾಂಕ ಪಡೆದಿರುವ ಶ್ರೀಕಾಂತ್ ಫ್ರಾನ್ಸ್ನ ಬ್ರೈಸ್ ಲೆವೆರ್ಡ್ಜ್ ವಿರುದ್ಧ 21-10, 13-21, 21-7ರಲ್ಲಿ ಜಯ ಸಾಧಿಸಿದರು.