News Karnataka Kannada
Sunday, April 28 2024
ಕ್ರೀಡೆ

ಜಸ್‌ಪ್ರೀತ್ ಬೂಮ್ರಾ ಬೌಲಿಂಗ್ ದಾಳಿಗೆ ತತ್ತರಿಸಿದ ಲಂಕಾ ಪಡೆ, 109 ರನ್‌ಗೆ ಅಲೌಟ್!

Test Match
Photo Credit : Twitter

ಬೆಂಗಳೂರು: ಶ್ರೀಲಂಕಾ ವಿರುದ್ಧ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ  ನಡೆಯುತ್ತಿರುವ ಹೊನಲು ಬೆಳಕಿನ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ವೇಗಿ ಜಸ್‌ಪ್ರೀತ್ ಬೂಮ್ರಾ 5 ವಿಕೆಟ್ ಪಡೆದು ಮಿಂಚಿದ್ದಾರೆ.

ಭಾನುವಾರ ಎರಡನೇ ದಿನದಾಟ ಆರಂಭಿಸಿದ ಶ್ರೀಲಂಕಾ ತಂಡ ಬ್ಯಾಟಿಂಗ್ ವೈಫಲ್ಯ ಎದುರಿಸಿ 35.5 ಓವರ್‌ಗಳಲ್ಲಿ 109 ರನ್ ಗಳಿಸಿ ಆಲೌಟ್‌ ಆಗಿದೆ. ಈ ಮೂಲಕ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ 145 ರನ್‌ಗಳ ಮಹತ್ವದ ಮುನ್ನಡೆ ಗಳಿಸಿದೆ.ಭಾರತದ ಪರ ಜಸ್‌ಪ್ರೀತ್ ಬೂಮ್ರಾ 5, ಆರ್. ಅಶ್ವಿನ್ ಹಾಗೂ ಮೊಹಮ್ಮದ್ ಶಮಿ ತಲಾ 2, ಅಕ್ಷರ್ ಪಟೇಲ್ 1 ವಿಕೆಟ್ ಪಡೆದರು.

ಸದ್ಯ ಎರಡನೇ ಇನ್ನಿಂಗ್ಸ್ ಆರಂಭಿಸಿರುವ ಭಾರತ 5 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 10 ರನ್ ಗಳಿಸಿದೆ. ಮಯಂಕ್ ಅಗರವಾಲ್, ರೋಹಿತ್ ಶರ್ಮಾ ಕ್ರೀಸ್‌ನಲ್ಲಿದ್ದಾರೆ.

ಭಾರತ ಶನಿವಾರ ಮೊದಲ ಇನ್ನಿಂಗ್ಸ್‌ನಲ್ಲಿ 59.1 ಓವರ್‌ಗಳಲ್ಲಿ 252 ರನ್ ಗಳಿಸಿ ಆಲೌಟ್ ಆಗಿತ್ತು. ಶ್ರೇಯಸ್ ಅಯ್ಯರ್ ಅರ್ಧಶತಕ ಗಳಿಸಿ ತಂಡಕ್ಕೆ ಆಸರೆಯಾದರು.

253 ರನ್ ಗುರಿ ಬೆನ್ನತ್ತಿದ್ದ ಶ್ರೀಲಂಕಾ ಮೊದಲ ದಿನದಾಟದ ಅಂತ್ಯಕ್ಕೆ 6 ನಷ್ಟಕ್ಕೆ 86 ರನ್ ಗಳಿಸಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು